ವಿಜಯಪುರಕ್ಕೆ ಆಗಮಿಸಿದ ಸಿದ್ದರಾಮಯ್ಯ, ದಿನೇಶ ಗುಂಡೂರಾವ : ಕಾರ್ಯಕರ್ತರಿಂದ ಭರ್ಜರಿ ಸ್ವಾಗತ
ಮಾಜಿ ಸಿಎಂ ಎಸ್. ಸಿದ್ದರಾಮಯ್ಯ, ಕೆಪಿಸಿಸಿ ಅಧ್ಯಕ್ಷ ದಿನೇಶ ಗುಂಡೂರಾವ ಇಂದು ವಿಜಯಪುರ ನಗರಕ್ಕೆ ಆಗಮಿಸಿದ್ದಾರೆ.
ವಿಜಯಪುರ ಜಿಲ್ಲಾ ಯುವ ಕಾಂಗ್ರೆಸ್ ಘಟಕದ ಪದಾಧಿಕಾರಿಗಳು ಅದ್ದೂರಿಯಾಗಿ ಎಸ್. ಸಿದ್ದರಾಮಯ್ಯ, ದಿನೇಶ ಗುಂಡೂರಾವ ಅವರಿಗೆ ಸ್ವಾಗತ ಕೋರಿದ್ದಾರೆ.ಬೆಳಗಾವಿಯಿಂದ ರಸ್ತೆ ಮಾರ್ಗವಾಗಿ ವಿಜಯಪುರ ನಗರಕ್ಕೆ ಆಗಮಿಸಿದ ಎಸ್, ಸಿದ್ದರಾಮಯ್ಯ, ದಿನೇಶ ಗುಂಡೂರಾವ ರಿಗೆ, ಇಂಡಿ ಶಾಸಕ ಯಶವಂತರಾಯಗೌಡ ವಿ. ಪಾಟೀಲ, ವಿಜಯಪುರ ಜಿಲ್ಲಾ ಕಾಂಗ್ರೆಸ್ ನೂತನ ಅಧ್ಯಕ್ಷ ಪ್ರೊ. ರಾಜು ಆಲಗೂರ ಸಾಥ್ ನೀಡಿದ್ದಾರೆ.
ವಿಜಯಪುರ ನಗರದ ನೂತನ ಪ್ರವಾಸಿ ಮಂದಿರದಲ್ಲಿ ತಂಗಿರುವ ಉಭಯ ನಾಯಕರು, ಇಂದು ವಿಜಯಪುರ ನಗರದಲ್ಲಿ ನಡೆಯಲಿರುವ ಕೇಂದ್ರ ಸರಕಾರದ ಜನ ವಿರೋಧಿ ಜನಜಾಗೃತಿ ಸಮಾವೇಶ ಪಾಲ್ಗೊಳ್ಳಲಿದ್ದಾರೆ.
ವಿಜಯಪುರ ನಗರದಲ್ಲಿ ದರಬಾರ್ ಹೈಸ್ಕೂಲ್ ಮೈದಾನದಲ್ಲಿ ನಡೆಯಲಿರುವ ಕಾಂಗ್ರೆಸ್ ನೂತನ ಜಿಲ್ಲಾಧ್ಯಕ್ಷರ ಪದಗ್ರಹಣ ಕಾರ್ಯಕ್ರಮದಲ್ಲಿ ನಾಯಕರು ಭಾಗವಹಿಸಲಿದ್ದಾರೆ.