ವಿದ್ಯುತ್ ಶಾರ್ಟ್ ಸರ್ಕಿಟ್ ನಿಂದ ಮನೆಯಲ್ಲಿದ್ದ ವಸ್ತುಗಳು ಬೆಂಕಿಗಾಹುತಿ…!
ವಿದ್ಯುತ್ ಶಾರ್ಟ್ ಸರ್ಕಿಟ್ ನಿಂದ ಮನೆಗೆ ಬೆಂಕಿ ಹೊತ್ತಿದ ಘಟನೆ ವಿಜಯಪುರ ಜಿಲ್ಲೆಯ ಮುದ್ದೇಬಿಹಾಳ ಪಟ್ಟಣದ ಕೋರ್ಟ್ ಹಿಂಭಾಗ ನಡೆದಿದೆ.
ಹೌದು.. ವಿದ್ಯುತ್ ಶಾರ್ಟ್ ಸರ್ಕಿಟ್ ಖಾಜೆಸಾಬ ಮಕಾನದಾರ ಎಂಬುವರ ಮನೆಗೆ ಬೆಂಕಿ ಹೊತ್ತು ಕಂಪ್ಯೂಟರ್, ಯೂಪಿಎಸ್ ಸುಟ್ಟು ಕರಕಲಾಗಿವೆ. ಅಗ್ನಿಶಾಮಕ ಠಾಣೆಯ ಸಿಬ್ಬಂದಿಯಿಂದ ಬೆಂಕಿ ನಂದಿಸುವ ಕಾರ್ಯ ನಡೆದಿದ್ದು, ಅದೃಷ್ಟವಶಾತ್ ಯಾವುದೇ ಪ್ರಾಣಹಾನಿ ಸಂಭವಿಸಿಲ್ಲ. ವಿಜಯಪುರ ಜಿಲ್ಲೆಯ ಮುದ್ದೇಬಿಹಾಳ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.