ಶಾಸಕ ಜಿ.ಟಿ.ದೇವೇಗೌಡರಿಗೆ 70ವರ್ಷದ ಹುಟ್ಟುಹಬ್ಬ : ಚಾಮುಂಡೇಶ್ವರಿಗೆ ವಿಶೇಷ ಪೂಜೆ
ಶಾಸಕ ಜಿ.ಟಿ.ದೇವೇಗೌಡರಿಗೆ 70ವರ್ಷದ ಹುಟ್ಟುಹಬ್ಬ ಹಿನ್ನೆಲೆ ಇಂದು ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಲಾಯಿತು.
ಕುಟುಂಬ ಸಮೇತವಾಗಿ ಚಾಮುಂಡಿ ಬೆಟ್ಟಕ್ಕೆ ತೆರಳಿದ ಶಾಸಕ ಜಿ.ಟಿ.ದೇವೇಗೌಡರು ಚಾಮುಂಡೇಶ್ವರಿ ದೇವಿಯ ದರ್ಶನ ಪಡೆದು ವಿಶೇಷ ಪೂಜೆ ಸಲ್ಲಿಸಿದರು. ಜೊತೆಗೆ ಈ ವೇಳೆ ಉತ್ತನಹಳ್ಳಿಯ ಜ್ವಾಲಾಮುಖಿ ತ್ರಿಪುರ ಸುಂದರಿ ಅಮ್ಮನ ದೇವಾಲಯಕ್ಕು ಭೇಟಿ ನೀಡಿದರು.
ಹುಣಸೂರು ಉಪಚುನಾವಣೆಯಲ್ಲಿ ತಟಸ್ಥವಾಗಿರುವ ಜಿಟಿಡಿ ತಮ್ಮ ಹುಟ್ಟುಹಬ್ಬಕ್ಕೆ ಕೇಕ್ ಕಟ್ ಮಾಡಿದ ದೃಶ್ಯಗಳು ಇಲ್ಲಿವೆ.