ಸರಕಾರಿ ಬಸ್ ಟ್ಯಾಂಕರ್ ಮದ್ಯೆ ಅಪಘಾತ :10ಕ್ಕೂ ಹೆಚ್ಚು ವಿದ್ಯಾರ್ಥಿಗಳಿಗೆ ಗಂಭೀರ ಗಾಯ!
ಇಂದು ಬೆಳಿಗ್ಗೆ ಶಾಲೆಗೆ ಹೋಗಲು ಬಸ್ ಹತ್ತಿದ ವಿದ್ಯಾರ್ಥಿಗಳು ಆಸ್ಪತ್ರೆ ದಾಖಲಾಗಿದ್ದಾರೆ.
ಹೌದು.. ಸರಕಾರಿ ಬಸ್ ಹಾಗೂ ಟ್ಯಾಂಕರ್ ಮದ್ಯೆ ಅಪಘಾತದಲ್ಲಿ ಬಸ್ ನಲ್ಲಿದ್ದ 10ಕ್ಕೂ ಹೆಚ್ಚು ವಿದ್ಯಾರ್ಥಿಗಳಿಗೆ ಗಂಭೀರ ಗಾಯಗೊಂಡ ಘಟನೆ ವಿಜಯಪುರ ಜಿಲ್ಲೆಯ ಸಿಂದಗಿ ಪಟ್ಟಣದ ರಾಜ್ಯ ಹೆದ್ದಾರಿಯಲ್ಲಿ ನಡೆದಿದೆ. ಜೇವರ್ಗಿಯಿಂದ ಸಿಂದಗಿಗೆ ಆಗಮಿಸುತ್ತಿದ್ದ ತೈಲ ಟ್ಯಾಂಕರ್ ಗೆ ಹಿಂಬದಿಯಿಂದ ಹೊಡೆದ ಬಸ್ ಡಿಕ್ಕಿ ಹೊಡೆದಿದೆ.
ಪರಿಣಾಮ ಶಾಲೆಗೆ ಹೋಗಲು ಬಸ್ ಹತ್ತಿದ ಮಕ್ಕಳು ಗಂಭೀರವಾಗಿ ಗಾಯಗೊಂಡು ಆಸ್ಪತ್ರೆಗೆ ದಾಖಲಾಗಿದ್ದಾರೆ. ಗಾಯಾಳು ವಿದ್ಯಾರ್ಥಿಗಳು ಸಿಂದಗಿ ತಾಲೂಕಾಸ್ಪತ್ರೆಗೆ ದಾಖಲು ಮಾಡಲಾಗಿದೆ. ಸಿಂದಗಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.