ಸವಾಲು ಎದುರಿಸುವಲ್ಲಿ ಸರ್ಕಾರ ಅಚಲವಾಗಿದೆ; ಅಭಿವೃದ್ಧಿಯತ್ತ ಹೆಜ್ಜೆ ಇಟ್ಟಿದೆ: ಸಿಎಂ ಬಿಎಸ್‌ವೈ

74ನೇ ಸ್ವಾತಂತ್ರ್ಯ ದಿನಾಚರಣೆ ಹಿನ್ನೆಲೆಯಲ್ಲಿ ಬೆಂಗಳೂರಿನ ಮಾಣಿಕ್ ಷಾ ಪರೇಡ್ ಮೈದಾನದಲ್ಲಿ ಧ್ವಜಾರೋಹಣ ನೆರವೇರಿಸಿ ಮಾತನಾಡಿದ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ, ಸವಾಲು ಎದುರಿಸುವಲ್ಲಿ ನಮ್ಮ ಸರ್ಕಾರ ಅಚಲವಾಗಿದೆ. ಕಾಯಕವೇ ಕೈಲಾಸ, ಸರ್ಕಾರದ ಕೆಲಸ ದೇವರ ಕೆಲ ಎನ್ನುವ ತತ್ವವನ್ನು ಪಾಲನೆ ಮಾಡುತ್ತಿದ್ದೇವೆಂದು ಹೇಳಿದರು.

ಒಂದು ವರ್ಷದಲ್ಲಿ ನಮಗೆ ಹಲವು ಸಮಸ್ಯೆಗಳು ಎದುರಾಗಿದ್ದು, ಸಮಸ್ಯೆಗಳ ನಡುವೆಯೂ ಅಭಿವೃದ್ಧಿಯತ್ತ ಚಲಿಸುತ್ತಿದ್ದೇವೆ. ನೆರೆ ಹಾಗೂ ಕೊರೊನಾ ಸೋಂಕನ್ನು ಮೆಟ್ಟಿನಿಂತಿದ್ದೇವೆ. ಸಂಕಷ್ಟಕ್ಕೆ ಒಳಗಾದ ಜನರಿಗೆ ಧೈರ್ಯ ತುಂಬುವ ಕೆಲಸ ಮಾಡುತ್ತಿದ್ದೇವೆ.

ಕೊರೊನಾ ಸಮರ್ಥವಾಗಿ ನಿಭಾಯಿಸುವ ಕೆಲಸ ಮಾಡಿದ್ದೇವೆ. ಆಯುಷ್ಮಾನ್ ಭಾರತ್ ಅಡಿಯಲ್ಲಿ 1 ಕೋಟಿ 30 ಲಕ್ಷ ಜನರಿಗೆ ಚಿಕಿತ್ಸೆ ನೀಡಿದ್ದೇವೆ. ಕೇವಲ ಬೆಂಗಳೂರು ನಗರವಷ್ಟೇ ಅಲ್ಲದೆ, ಜಿಲ್ಲಾ ಕೇಂದ್ರಗಳಲ್ಲೂ ಫೀವರ್ ಕ್ಲಿನಿಕ್ ಹಾಗೂ ಕೊರೊನಾ ಆಸ್ಪತ್ರೆಗಳನ್ನು ಸ್ಥಾಪನೆ ಮಾಡಿದ್ದೇವೆ ಎಂದು ಹೇಳಿದ್ದಾರೆ.

ಲಾಕ್‌ಡೌನ್‌ನಿಂದ ಆರ್ಥಿಕ ವ್ಯವಹಾರ ಕುಸಿತ ಕಂಡಿತು. ಇದೆಲ್ಲವನ್ನೂ ದಿಟ್ಟವಾಗಿ ಎದುರಿಸಿ ವಾಣಿಜ್ಯ ಚಟುವಟಿಕೆಗಳನ್ನು ಮತ್ತೆ ಚೇತರಿಕೆ ಮಾಡುವ ಕೆಲಸ ಮಾಡಿದ್ದೇವೆಂದು ಹೇಳಿದ್ದಾರೆ.

ಲಾಕ್‌ಡೌನ್‌ನಿಂದ ಅಸಂಘಟಿತ ನೆರವಿಗೆ ಸರ್ಕಾರ ಪರಿಹಾರ ನೀಡಿದೆ. 3 ಸಾವಿರ ಕೋಟಿ ಪರಿಹಾರ ನೀಡಿದ್ದೇವೆ. ಕೊರೋನಾ ವಿರುದ್ಧ ದಿಟ್ಟ ಹೋರಾಟ ಮಾಡುತ್ತಿರುವ ಕೊರೋನಾ ವಾರಿಯರ್ಸ್ ಹಗಲಿರುಳು ದುಡಿಯುತ್ತಿದ್ದು, ಕೊರೋನಾ ವಾರಿಯರ್ಸ್ ಮೃತಪಟ್ಟರೆ ರೂ.30 ಲಕ್ಷ ಪರಿಹಾರ ನೀಡುವುದಾಗಿ ಘೋಷಣೆ ಮಾಡಿದ್ದಾರೆ. ಕೊರೋನಾ ವಾರಿಯರ್ಸ್ ಕೂಡ ದೇಶ ಕಾಯುವ ಯೋಧರಷ್ಟೇ ಸಮರ್ಥರಾಗಿದ್ದಾರೆಂದು ಹೇಳಿದ್ದಾರೆ.

ಸುಳ್ಳು ಸುದ್ದಿಗಳ ವಿರುದ್ಧದ ಹೋರಾಟಕ್ಕೆ ದೇಣಿಗೆ ನೀಡಿ ಬೆಂಬಲಿಸಿ
Spread the love

Leave a Reply

Your email address will not be published.

Verified by MonsterInsights