ಅಂತರ್ ಜಿಲ್ಲೆಗಳ ಪ್ರಯಾಣಕ್ಕೆ ಒಂದು ದಿನದ ಪಾಸ್ ನೀಡಲು ನಿರ್ಧಾರ: ಯಡಿಯೂರಪ್ಪ
ಕೊರೊನಾ ವೈರಸ್ ನಿಯಂತ್ರಣಕ್ಕಾಗಿ ಮಾಡಲಾಗಿರುವ ಲಾಕ್ಡೌನ್ ಸಡಿಲಿಗೆ ಮಾಡುವ ಕುರಿತು ಜಿಲ್ಲಾಧಿಕಾರಿಗಳೊಂದಿಗೆ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪನವರು ವಿಡಿಯೋ ಸಂವಾದ ನಡೆಸಿದ್ದಾರೆ.
ಕೇಂದ್ರ ಸರ್ಕಾರದ ಮಾರ್ಗಸೂಚಿಗಳಂತೆ ಆರ್ಥಿಕ ಚಟುವಟಿಕೆಗಳನ್ನು ಪ್ರಾರಂಭಿಸಲು ಸೂಚಿಸಲಾಯಿತು. ಕಂಟೇನ್ಮೆಂಟ್ ವಲಯಗಳನ್ನು ಹೊರತುಪಡಿಸಿ ಇತರ ಕಡೆಗಳಲ್ಲಿ ಕೇಂದ್ರ ಸರ್ಕಾರ ಅನುಮತಿ ನೀಡಿರುವ ಚಟುವಟಿಕೆಗಳನ್ನು ಪ್ರಾರಂಭಿಸಲು ತಿಳಿಸಲಾಗಿದೆ.
ಸ್ವಂತ ಜಿಲ್ಲೆಗಳಿಗೆ ತೆರಳ ಬಯಸಿರುವ ವಲಸೆ ಕಾರ್ಮಿಕರಿಗೆ ಕೆಎಸ್ಆರ್ಟಿಸಿ ಬಸ್ಗಳಲ್ಲಿ ಒನ್ ವೇ ದರ ಪಾವತಿಸಿ ಪ್ರಯಾಣಿಸಲು ಅವಕಾಶ ಕಲ್ಪಿಸಲು ತೀರ್ಮಾನಿಸಲಾಯಿತು. ಹೊರ ಜಿಲ್ಲೆಗಳಿಂದ ಬರುವವರನ್ನು ಸಾಂಸ್ಥಿಕ ಕ್ವಾರಂಟೈನ್ ಮಾಡಲು ಸೂಚಿಸಲಾಗಿದೆ.
ಕೋವಿಡ್19 ನಿಯಂತ್ರಣ ಹಾಗೂ ಲಾಕ್ ಡೌನ್ ಕುರಿತು ಮುಖ್ಯಮಂತ್ರಿ ಶ್ರೀ @BSYBJP ಅವರು ಜಿಲ್ಲಾಧಿಕಾರಿಗಳ ಜತೆ ನಡೆಸಿದ ವಿಡಿಯೋ ಕಾನ್ಫರೆನ್ಸ್ ನ ಮುಖ್ಯಾಂಶಗಳು.#ಮನೆಯಲ್ಲೇಇರಿ#KarnatakaFightsCorona pic.twitter.com/RLoLKcjhO1
— CM of Karnataka (@CMofKarnataka) May 2, 2020
ಲಾಕ್ಡೌನ್ ಸಂದರ್ಭದಲ್ಲಿ ಬೇರೆ ಊರಿನಲ್ಲಿ ಸಿಲುಕಿಕೊಂಡಿರುವವರು ತಮ್ಮ ಊರಿಗೆ ಅಥವಾ ಕೆಲಸದ ಸ್ಥಳಗಳಿಗೆ ಹಿಂದಿರುಗಲು ಒಂದು ದಿನಕ್ಕೆ ಒಂದು ಬಾರಿಗೆ ಪ್ರಯಾಣಿಸಲು ಅಂತರ್ ಜಿಲ್ಲಾ ಪ್ರಯಾಣಕ್ಕೆ ಪಾಸ್ ನೀಡಲು ತೀರ್ಮಾನಿಸಲಾಯಿತು
ಸಮಾಜ ಕಲ್ಯಾಣ ಇಲಾಖೆಯ ವಿದ್ಯಾರ್ಥಿ ನಿಲಯಗಳಲ್ಲಿ ಆಹಾರ ಧಾನ್ಯಗಳನ್ನು ಸಾರ್ವಜನಿಕರಿಗೆ ಹಂಚಿಕೆ ಮಾಡುವ ಕುರಿತು ಕ್ರಮವಹಿಸಲು ಸೂಚಿಸಲಾಯಿತು ಎಂದು ಯಡಿಯೂರಪ್ಪ ತಿಳಿಸಿದ್ದಾರೆ.
ವಿಜಯಪುರ, ಬೆಳಗಾವಿ, ಬಾಗಲಕೋಟೆ, ಮೈಸೂರು, ದಕ್ಷಿಣ ಕನ್ನಡ, ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ ಮತ್ತು ಕಲಬುರಗಿ ಜಿಲ್ಲೆಗಳ ಜನಪ್ರತಿನಿಧಿಗಳು ಹಾಗೂ ಅಧಿಕಾರಿಗಳೊಂದಿಗೆ ಸಮಾಲೋಚನೆ ನಡೆಸಲಾಯಿತು.

