ಅಕ್ಷಯ್, ಕರೀನಾ ಅಭಿಮಾನಿಗಳಿಗೆ ‘ಗುಡ್ ನ್ಯೂಸ್’ : ತೆರೆ ಕಂಡ ದಿನವೇ ಗುಡ್ ರೆಸ್ಪಾನ್ಸ್

ಅಕ್ಷಯ್ ಕುಮಾರ್, ಕರೀನಾ ಕಪೂರ್ ಅಭಿನಯದ ಗುಡ್ ನ್ಯೂಸ್ ಚಿತ್ರ ಶುಕ್ರವಾರ ಬಿಡುಗಡೆಯಾಗಿದೆ. ಚಿತ್ರಕ್ಕೆ ಮೊದಲ ದಿನವೇ ಉತ್ತಮ ರಿಸ್ಪಾನ್ಸ್ ಸಿಕ್ಕಿದೆ. ಬಾಕ್ಸ್ ಆಫೀಸ್ ನಲ್ಲೂ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗಿದೆ. ಮೂಲಗಳ ಪ್ರಕಾರ ಮೊದಲ ದಿನ ಗುಡ್ ನ್ಯೂಸ್ ಚಿತ್ರ 17-19 ಕೋಟಿ ರೂ. ಗಳಿಕೆ ಕಂಡಿದೆ.

ಶುಕ್ರವಾರ ಬೆಳಿಗ್ಗೆ ಗುಡ್ ನ್ಯೂಸ್ ಗೆ ಒಳ್ಳೆ ಪ್ರತಿಕ್ರಿಯೆ ಸಿಕ್ಕಿರಲಿಲ್ಲ. ಆದ್ರೆ ನೈಟ್ ಶೋ ಹೊತ್ತಿಗೆ ಪ್ರೇಕ್ಷಕರನ್ನು ಸೆಳೆಯಲು ಚಿತ್ರತಂಡ ಯಶಸ್ವಿಯಾಗಿತ್ತು. ವಾರಾಂತ್ಯದಲ್ಲಿ ಚಿತ್ರದ ಗಳಿಕೆ ಇನ್ನಷ್ಟು ಹೆಚ್ಚಾಗುವ ನಿರೀಕ್ಷೆಯಿದೆ. ಗಲ್ಲಾಪೆಟ್ಟಿಗೆಯಲ್ಲಿ ಗುಡ್ ನ್ಯೂಸ್ ಗೆ ದಬಾಂಗ್ 3 ಟಕ್ಕರ್ ನೀಡ್ತಿದೆ. ದಬಾಂಗ್ 3 ದರ್ಬಾರ್ ಮಧ್ಯೆಯೇ ಗುಡ್ ನ್ಯೂಸ್ ಗೆ ಒಳ್ಳೆ ಪ್ರತಿಕ್ರಿಯೆ ಸಿಕ್ಕಿದೆ.

ಗುಡ್ ನ್ಯೂಸ್ ಚಿತ್ರವನ್ನು ರಾಜ್ ಮೆಹ್ತಾ ನಿರ್ದೇಶಿಸಿದ್ದಾರೆ. ಅಕ್ಷಯ್ ಕುಮಾರ್, ಕರೀನಾ ಕಪೂರ್, ದಿಲ್ಜಿತ್ ದೋಸಾಂಜ್ ಮತ್ತು ಕಿಯಾರಾ ಅಡ್ವಾಣಿ ನಟಿಸಿದ್ದಾರೆ.

ಸುಳ್ಳು ಸುದ್ದಿಗಳ ವಿರುದ್ಧದ ಹೋರಾಟಕ್ಕೆ ದೇಣಿಗೆ ನೀಡಿ ಬೆಂಬಲಿಸಿ
Spread the love

Leave a Reply

Your email address will not be published.

Verified by MonsterInsights