ಅತ್ಯಾಚಾರ ಸಂತ್ರಸ್ತೆಗೆ ಬೆಂಕಿ ಹಚ್ಚಿದ ದುಷ್ಕರ್ಮಿಗಳು : ಸಂತ್ರಸ್ತೆ ಸ್ಥಿತಿ ಶೋಚನೀಯ…!

ಉತ್ತರ ಪ್ರದೇಶದ ಉನ್ನಾವೊ ಅತ್ಯಾಚಾರ ಸಂತ್ರಸ್ತೆಗೆ ಐವರು ದುಷ್ಕರ್ಮಿಗಳು ಇಂದು ಬೆಳಗ್ಗೆ ಬೆಂಕಿ ಹಚ್ಚಿರುವ ಘಟನೆ ನಡೆದಿದೆ. ತೀವ್ರ ಸುಟ್ಟ ಗಾಯಗಳಾಗಿರುವ ಸಂತ್ರಸ್ತೆಯನ್ನು ಲಕ್ನೋದ ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿದ್ದು , ಆಕೆಯ ಸ್ಥಿತಿ ಶೋಚನೀಯವಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಉತ್ತರ ಪ್ರದೇಶದ ಬಿಹಾರಿ ಪೊಲೀಸ್ ಠಾಣೆ ವ್ಯಾಪ್ತಿಯ ಸಿಂಧುಪುರ್ ಗ್ರಾಮದಲ್ಲಿ ಇಂದು ಬೆಳಗ್ಗೆ ಈ ಘಟನೆ ನಡೆದಿದೆ. ಅತ್ಯಾಚಾರ ಆರೋಪ ಎದುರಿಸುತ್ತಿರುವ ದುಷ್ಕರ್ಮಿಯೂ ಸೇರಿದಂತೆ ಐವರು ಅತ್ಯಾಚಾರ ಸಂತ್ರಸ್ತೆ ಮೇಲೆ ಸೀಮೆಎಣ್ಣೆ ಸುರಿದು ಬೆಂಕಿ ಹಚ್ಚಿದರು. ತೀವ್ರ ಗಾಯಕ್ಕೊಳಗಾದ ಆಕೆಯನ್ನು ತಕ್ಷಣ ಲಕ್ನೋದ ಸರ್ಕಾರಿ ಆಸ್ಪತ್ರೆಗೆ ಸೇರಿಸಲಾಗಿದೆ.

ಸುಳ್ಳು ಸುದ್ದಿಗಳ ವಿರುದ್ಧದ ಹೋರಾಟಕ್ಕೆ ದೇಣಿಗೆ ನೀಡಿ ಬೆಂಬಲಿಸಿ
Spread the love

Leave a Reply

Your email address will not be published.

Verified by MonsterInsights