ಅಮೆಜಾನ್‍ನಲ್ಲೇ ನೇರವಾಗಿ ಕನ್ನಡ ಸಿನಿಮಾ ರಿಲೀಸ್ – ಮಲ್ಟಿಪ್ಲೆಕ್ಸ್ ಮಾಲೀಕರ ಕೆಂಗಣ್ಣಿಗೆ ಗುರಿ!

ಕೊರೊನಾ ಲಾಕ್ ಡೌನ್ ನಿಂದಾಗಿ ಯಾವುದೇ ಸಿನಿಮಾಗಳು ತೆರೆ ಕಾಣುವುದಿರಲಿ ಚಿತ್ರೀಕರಣ ಕೂಡ ಕಂಪ್ಲೀಟ್ ಸ್ಟಾಪ್ ಆಗಿದೆ. ಇದರಿಂದ ಚಿತ್ರರಂಗ ಭಾರಿ ನಷ್ಟವನ್ನು ಅನುಭವಿಸುತ್ತಿದೆ. ಸದ್ಯಕ್ಕೆ ಚಿತ್ರೀಕರಣ ಪೂರ್ಣಗೊಂಡು ತೆರೆಕಾಣಲು ಸಿದ್ದವಾಗಿರುವ ಸಿನಿಮಾಗಳನ್ನು ಮೆಜಾನ್ ಪ್ರೈಮ್ ಮತ್ತು ಡಿಜಿಟಲ್ ಪ್ಲಾಟ್‌ಫಾರ್ಮ್‌ಗಳಲ್ಲಿ ಬಿಡುಗಡೆ ಮಾಡಲು ಮುಂದಾಗಿದ್ದಾರೆ.

ಹೌದು….. ಚಿತ್ರರಂಗದಲ್ಲಿ ಆರ್ಥಿಕ ಹೊರೆಯನ್ನು ತಗ್ಗಿಸಿಕೊಳ್ಳಲು ಅನೇಕ ನಿರ್ಮಾಪಕರಿಗೆ ಒಟಿಟಿ ಬಿಡುಗಡೆ ಅನಿವಾರ್ಯವಾಗಿವೆ. ಮುಂದಿನ ತಿಂಗಳಿನಿಂದ ವಿವಿಧ ಭಾಷೆಗಳ, ಪ್ರಮುಖ ನಟರು ನಟಿಸಿರುವ ಸಿನಿಮಾಗಳು ಅಮೆಜಾನ್ ಪ್ರೈಮ್‍ನಲ್ಲಿ ತೆರೆಕಾಣುತ್ತಿವೆ. ಈ ಕುರಿತು ಅಮೆಜಾನ್ ಪ್ರೈಮ್ ಹಾಗೂ ನಿರ್ಮಾಣ ಸಂಸ್ಥೆಗಳು ಅಧಿಕೃತವಾಗಿ ತಿಳಿಸಿವೆ. ಇದು ಸದ್ಯ ಅನೇಕ ಚಿತ್ರಮಂದಿರಗಳು ಮತ್ತು ಮಲ್ಟಿಪ್ಲೆಕ್ಸ್ ಮಾಲೀಕರ ಕೆಂಗಣ್ಣಿಗೆ ಗುರಿಯಾಗಿದ್ದು ವಿರೋಧ ವ್ಯಕ್ತವಾಗುತ್ತಿದೆ.

ಪಿಆರ್‌ಕೆ ಪ್ರೊಡಕ್ಷನ್ಸ್ ನಿರ್ಮಿಸಿರುವ ‘ಲಾ’ ಮತ್ತು ‘ಫ್ರೆಂಚ್ ಬಿರಿಯಾನಿ’ ಸಿನಿಮಾಗಳು ಒಟಿಟಿ ಪ್ಲಾಟ್ ಫಾರ್ಮ್ ನ ಅಮೆಜಾನ್ ಪ್ರೈಮ್‍ನಲ್ಲಿ ಬಿಡುಗಡೆ ಮಾಡುವುದಾಗಿ ಪುನೀತ್ ರಾಜ್‍ಕುಮಾರ್ ತಿಳಿಸಿದ್ದಾರೆ. ಈ ಮೂಲಕ ಕನ್ನಡ ನಿರ್ಮಾಕಪರು ಕೂಡ ಒಟಿಟಿ ಪ್ಲಾಟ್ ಫಾರ್ಮ್ ನಲ್ಲಿ ಸಿನಿಮಾ ರಿಲೀಸ್ ಮಾಡಲು ಮುಂದಾಗಿರುವುದು ಸ್ಪಷ್ಟವಾಗಿದೆ.

‘ಲಾ’ ಸಿನಿಮಾ ಜೂನ್ 26ರಂದು, ‘ಫ್ರೆಂಚ್ ಬಿರಿಯಾನಿ’ ಚಿತ್ರವು ಜುಲೈ 24ರಂದು ಅಮೆಜಾನ್ ಪ್ರೈಮ್ ಮೂಲಕ ಜಗತ್ತಿನಾದ್ಯಂತ ತೆರೆ ಕಾಣುತ್ತಿವೆ ಎಂದು ಪಿಆರ್‌ಕೆ ಪ್ರೊಡಕ್ಷನ್ಸ್ ಅಧಿಕೃತವಾಗಿ ಮಾಹಿತಿ ತಿಳಿಸಿದೆ.

ಅಮೆಜಾನ್ ಫ್ರೈಂನಲ್ಲಿ ಸಿನಿಮಾ ಬಿಡುಗಡೆ ಮಾಡುವುದಕ್ಕೆ ಪಿವಿಆರ್ ಮತ್ತು ಐನಾಕ್ಸ್ ಮಲ್ಟಿಪ್ಲೆಕ್ಸ್ ಪ್ರದರ್ಶಕರು ವಿರೋಧ ವ್ಯಕ್ತಪಡಿಸುತ್ತಿದ್ದಾರೆ. ಚಿತ್ರ ನಿರ್ಮಾಣ ಸಂಸ್ಥೆಯೊಂದು ತನ್ನ ಸಿನಿಮಾಗಳನ್ನು ಒಟಿಟಿ ಪ್ಲಾಟ್‍ಫ್ಲಾಮಂ ಮೂಲಕ ರಿಲೀಸ್ ಮಾಡಲು ಮುಂದಾಗಿದೆ. ಈ ಮೂಲಕ ಥಿಯೇಟರ್‌ನಲ್ಲಿ ಸಿನಿಮಾ ತೆರೆಕಾಣುವ ಸಂಪ್ರದಾಯವನ್ನು ಬ್ರೇಕ್ ಮಾಡಿದೆ. ಸಂಸ್ಥೆಯ ನಿರ್ಧಾರದಿಂದ ನಮಗೆ ಬೇಸರವಾಗಿದೆ ಎಂದು ಐನಾಕ್ಸ್ ಪತ್ರದ ಮೂಲಕ ತಿಳಿಸಿದೆ.

 

ಸುಳ್ಳು ಸುದ್ದಿಗಳ ವಿರುದ್ಧದ ಹೋರಾಟಕ್ಕೆ ದೇಣಿಗೆ ನೀಡಿ ಬೆಂಬಲಿಸಿ
Spread the love

Leave a Reply

Your email address will not be published.

Verified by MonsterInsights