ಅಮೆರಿಕಾದಲ್ಲಿ ಪೊಲೀಸರಿಂದ ಮತ್ತೋರ್ವ ಕಪ್ಪುವರ್ಣೀಯನ ಹತ್ಯೆ!

ಆಫ್ರಿಕಾ ಮೂಲಕ ಅಮೆರಿಕಾ ಪ್ರಜೆ ಜಾರ್ಜ್ ಪ್ಲಾಯ್ಡ್‌ ಹತ್ಯೆಯನ್ನು ವಿರೋಧಿಸಿ ಅಮೆರಿಕದಾದ್ಯಂತ ಪ್ರತಿಭಟನೆಗಳು ನಡೆಯುತ್ತಿವೆ. ಕೆಲವೆಡೆ ಪ್ರತಿಭಟನೆ ಹಿಂಸಾಚಾರಕ್ಕೂ ತಿರುಗಿದೆ. ಇಂತಹ ಸಂದರ್ಭದಲ್ಲಿಯೇ ಅಮೆರಿಕಾ ಪೊಲೀಸರು ಮತ್ತೊಬ್ಬ ಕಪ್ಪು ವರ್ಣಿಯನನ್ನು ಗುಂಡಿಕ್ಕಿ ಹತ್ಯೆ ಮಾಡಿದ್ದಾರೆ.

ಜಾರ್ಜ್‌ ಫ್ಲಾಯ್ಡ್‌ ಹತ್ಯೆ ಸಂಬಂಧ ಅಮೆರಿಕಾದ್ಯಂತ ಪ್ರತಿಭಟನೆ ನಡೆಯುತ್ತಿರುವ ಹೊತ್ತಿನಲ್ಲೇ, ಮತ್ತೊಬ್ಬ ಕಪ್ಪು ವರ್ಣೀಯನನ್ನು ಅಟ್ಲಾಂಟಾದಲ್ಲಿ ಪೊಲೀಸರು ಗುಂಡಿಕ್ಕಿ ಹತ್ಯೆ ಮಾಡಿದ್ದು, ಇದು ಆಕಸ್ಮಿಕವಾಗಿ ನಡೆದಿದೆ ಎಂದು ಪೊಲೀಸರು ಸಮರ್ಥಿಸಿಕೊಂಡಿದ್ದಾರೆ.

ಪೊಲೀಸ್ ಮೂಲಗಳ ಪ್ರಕಾರ 27 ವರ್ಷದ ರೇಶರ್ಡ್‌ ಬ್ರೂಕ್ಸ್‌ ಎಂಬಾತ ಪೊಲೀಸರ ಗುಂಡಿಗೆ ಬಲಿಯಾಗಿದ್ದಾನೆ.  ಈ ಘಟನೆ ಖಂಡಿಸಿ ಅಟ್ಲಾಂಟಾದಲ್ಲಿ ಭಾರಿ ಪ್ರತಿಭಟನೆ ನಡೆದಿದೆ. ಈ ಘಟನೆ ನಡೆದ ಕೆಲವೇ ಗಂಟೆಗಳ ನಂತರ, ಅಟ್ಲಾಂಟಾ ಪೊಲೀಸ್‌ ಮುಖ್ಯಸ್ಥೆ ಎರಿಕಾ ಶೀಲ್ಡ್ಸ್‌ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ.

ವೆಂಡಿ ರೆಸ್ಟೋರೆಂಟ್‌ನ ವಾಹನ ಪಾರ್ಕಿಂಗ್‌ ಸ್ಥಳದಲ್ಲಿರುವ ಕಾರೊಂದರಲ್ಲಿ ಯುವಕನೊಬ್ಬ ಮಲಗಿದ್ದು, ಇತರ ವಾಹನಗಳ ಸಂಚಾರಕ್ಕೆ ಅಡ್ಡಿಯಾಗಿದೆ ಎಂದು ಕೆಲವರು ಪೊಲೀಸರಿಗೆ ದೂರು ನೀಡಿದ್ದಾರೆ. ಈ ವೇಳೆ ಸ್ಥಳಕ್ಕೆ ತೆರಳಿದ್ದ ಪೊಲೀಸರು, ಕಾರಿನಲ್ಲಿದ್ದ ಯುವಕ ಬ್ರೂಕ್ಸ್ ಮದ್ಯಪಾನ ಮಾಡಿರುವ ಶಂಕೆ ವ್ಯಕ್ತಪಡಿಸಿ, ಪರೀಕ್ಷೆಗೆ ಒಳಗಾಗುವಂತೆ‌ ಸೂಚನೆ ನೀಡಿದ್ದಾರೆ.

ಈ ಪರೀಕ್ಷೆಗೆ ಒಳಪಡಲು ನಿರಾಕರಿಸಿದ ಬ್ರೂಕ್ಸ್‌, ಓಡಿ ಹೋಗಲು ಯತ್ನಿಸಿದ್ದಾನೆ. ಓಡಿ ಹೋಗುತ್ತಿದ್ದವನಿಗೆ ಪೊಲೀಸರು ಗುಂಡು ಹಾರಿಸಿದ್ದಾರೆ ಎಂದು ಜಾರ್ಜಿಯಾ ಬ್ಯುರೋ ಆಫ್‌ ಇನ್ವೆಸ್ಟಿಗೇಷನ್‌ (ಜಿಬಿಐ) ಅಧಿಕಾರಿಗಳು ಹೇಳಿದ್ದಾರೆ.

ಸುಳ್ಳು ಸುದ್ದಿಗಳ ವಿರುದ್ಧದ ಹೋರಾಟಕ್ಕೆ ದೇಣಿಗೆ ನೀಡಿ ಬೆಂಬಲಿಸಿ
Spread the love

Leave a Reply

Your email address will not be published.

Verified by MonsterInsights