ಅಮೆರಿಕಾ-ಇರಾನ್ ನಡುವಿನ ಸಂಘರ್ಷ : ಗಗನಕ್ಕೇರಿದ ಚಿನ್ನ.. ರೂಪಾಯಿಗೆ ಗುನ್ನಾ..!
ಅಮೆರಿಕಾ-ಇರಾನ್ ಮಧ್ಯೆ ನಡೆಯುತ್ತಿರುವ ಗಲಾಟೆಯಿಂದ ಬಂಗಾರದ ಬೆಲೆ ಗಗನಕ್ಕೇರುತ್ತಿದೆ. ಸೋಮವಾರ ಬಂಗಾರದ ಬೆಲೆ ದಾಖಲೆ ಮಟ್ಟದಲ್ಲಿ ಏರಿದೆ. ಷೇರುಮಾರುಕಟ್ಟೆಯಲ್ಲಿ ಆಗ್ತಿರುವ ಇಳಿಕೆಯಿಂದ ಹೂಡಿಕೆದಾರರು ಸುರಕ್ಷಿತ ಹೂಡಿಕೆಯತ್ತ ಒಲವು ತೋರುತ್ತಿದ್ದಾರೆ. ಹಾಗಾಗಿ ದೆಹಲಿ ಮಾರುಕಟ್ಟೆಯಲ್ಲಿ ಬಂಗಾರದ ಬೆಲೆ 41 ಸಾವಿರ ಗಡಿ ದಾಟಿದೆ.
ಅಂತರರಾಷ್ಟ್ರೀಯ ಮಾರುಕಟ್ಟೆಯಲ್ಲಿ ಸುಮಾರು ಆರೂವರೆ ವರ್ಷಗಳ ನಂತರ ಚಿನ್ನದ ಬೆಲೆ ಉನ್ನತ ಮಟ್ಟ ತಲುಪಿದೆ. ಅಂತರರಾಷ್ಟ್ರೀಯ ಮಟ್ಟದಲ್ಲಿ ಬೆಳ್ಳಿಯ ಬೆಲೆ ಕೂಡ ದಾಖಲೆ ಏರಿಕೆ ಕಂಡಿದೆ. ಅಂತರಾಷ್ಟ್ರೀಯ ಮಾರುಕಟ್ಟೆಯಲ್ಲಿ ಚಿನ್ನದ ಬೆಲೆ ಶೇಕಡಾ 1.4ರ ಏರಿಕೆ ನಂತ್ರ 1,573.14 ಡಾಲರ್ ಪ್ರತಿ ಔನ್ಸ್ ಆಗಿದೆ.
ದೆಹಲಿಯಲ್ಲಿ 22 ಕ್ಯಾರೆಟ್ ಚಿನ್ನದ ಬೆಲೆ 10 ಗ್ರಾಂಗೆ 41,395 ರೂಪಾಯಿಯಾಗಿದೆ. ಮುಂಬೈನಲ್ಲಿ 22 ಕ್ಯಾರೆಟ್ ಚಿನ್ನದ ಬೆಲೆ 10 ಗ್ರಾಂಗೆ 41,330 ರೂಪಾಯಿಯಾಗಿದೆ. ದೆಹಲಿಯಲ್ಲಿ ಬೆಳ್ಳಿಯ ಬೆಲೆ ಪ್ರತಿ ಕೆ.ಜಿ.ಗೆ 48,370 ರೂಪಾಯಿಯಾಗಿದೆ.