ಆತ್ಮವಿಶ್ವಾಸ ಕಳೆದುಕೊಳ್ಳಬೇಡಿ; ಮುನ್ನಡೆಯಿರಿ: SSLC ವಿದ್ಯಾರ್ಥಿಗಳಿಗೆ ಶುಭಕೋರಿದ ಸಿಎಂ

ಕೊರೊನಾ ಸಂಕಷ್ಟದಿಂದಾಗಿ ತಡವಾಗಿ ನಡೆದಿದ್ದ ಎಸ್‌ಎಸ್‌ಎಲ್‌ಸಿ ಪರೀಕ್ಷೆಯ ಫಲಿತಾಂಶ ಇಂದು ಪ್ರಕಟವಾಗಿಲಿದ್ದು, ಪರೀಕ್ಷೆ ಬರೆದಿರುವ ವಿದ್ಯಾರ್ಥಿಗಳಿಗೆ ಮುಖ್ಯಮಂತ್ರಿ ಯಡಿಯೂರಪ್ಪನವರು ಶುಭಕೋರಿದ್ದು, ಧೈರ್ಯ ತುಂಬಿದ್ದಾರೆ.

ಎಸ್‌ಎಸ್‌ಎಲ್‌ಸಿ ಪರೀಕ್ಷೆ ಬಗ್ಗೆ ಟ್ವೀಟ್‌ ಮಾಡಿರುವ ಮುಖ್ಯಮಂತ್ರಿ ಯಡಿಯೂರಪ್ಪ, ಇಂದು ಎಸ್.ಎಸ್.ಎಲ್.ಸಿ ಪರೀಕ್ಷೆ ಫಲಿತಾಂಶಗಳು ಪ್ರಕಟವಾಗಲಿದ್ದು, ಎಲ್ಲ ವಿದ್ಯಾರ್ಥಿ ವಿದ್ಯಾರ್ಥಿನಿಯರಿಗೂ ನನ್ನ ಶುಭ ಹಾರೈಕೆಗಳು. ಫಲಿತಾಂಶ ಏನೇ ಬರಲಿ, ಆತ್ಮವಿಶ್ವಾಸ ಕಳೆದುಕೊಳ್ಳಬೇಡಿ. ನಿಮ್ಮ ತಂದೆ, ತಾಯಿ, ಗುರು ಹಿರಿಯರ ಮಾರ್ಗದರ್ಶನದಲ್ಲಿ ಮುನ್ನಡೆಯಿರಿ. ಶುಭವಾಗಲಿ ಎಂದು ಆಶಿಸಿದ್ದಾರೆ.

ಇಂದು (ಸೋಮವಾರ) ಮಧ್ಯಾಹ್ನ 3 ಗಂಟೆಗೆ ಇಲಾಖೆಯ ವೆಬ್‌ಸೈಟ್‌ನಲ್ಲಿ ಫಲಿತಾಂಶ ಪ್ರಕಟವಾಗಲಿದೆ. ವಿದ್ಯಾರ್ಥಿಗಳು ಮತ್ತು ಪೋಷಕರು kseeb.kar.nic.in ಅಥವಾ karresults.nic.in ವೆಬ್​ಸೈಟ್​ನಲ್ಲಿ ವೀಕ್ಷಿಸಬಹುದು. ಅಲ್ಲದೆ, examresults.net ಮತ್ತು indiaresults.com ವೆಬ್​ಸೈಟ್​ನಲ್ಲಿಯೂ ಸಹ ಫಲಿತಾಂಶ ವೀಕ್ಷಿಸಬಹುದಾಗಿದೆ.

ಕೊರೊನಾ ಸಾಂಕ್ರಾಮಿಕದ ಭೀತಿಯ ಕಾರಣಕ್ಕಾಗಿ ಎಸ್‌ಎಸ್‌ಎಲ್‌ಸಿ ಪರೀಕ್ಷೆ ನಡೆಸಬೇಕೊ ಬೇಡವೋ ಎಂಬ ಬಗ್ಗೆ ಹಲವು ಚರ್ಚೆಗಳು ನಡೆದಿದ್ದು, ಅಂತಿಮವಾಗಿ ಸುರಕ್ಷ ನಿಯಮಗಳೊಂದಿಗೆ ಕರ್ನಾಟಕ ರಾಜ್ಯ ಸರ್ಕಾರವು ಜೂನ್ 24 ರಿಂದ ಜುಲೈ 3ರವರೆಗೆ ಪರೀಕ್ಷೆಗಳನ್ನು ನಡೆಸಿತ್ತು. ಸುಮಾರು 8.4 ಲಕ್ಷ ವಿದ್ಯಾರ್ಥಿಗಳು ಪರೀಕ್ಷೆ ಬರೆದಿದ್ದು ಫಲಿತಾಂಶಕ್ಕಾಗಿ ಎದುರು ನೋಡುತ್ತಿದ್ದಾರೆ.

ಸುಳ್ಳು ಸುದ್ದಿಗಳ ವಿರುದ್ಧದ ಹೋರಾಟಕ್ಕೆ ದೇಣಿಗೆ ನೀಡಿ ಬೆಂಬಲಿಸಿ
Spread the love

Leave a Reply

Your email address will not be published.

Verified by MonsterInsights