ಆನ್‌‌ಲೈನ್‌ ಪರೀಕ್ಷೆ: ಲ್ಯಾಪ್‌ಟಾಪ್‌ ಕಡ್ಡಾಯ, ವಿದ್ಯಾರ್ಥಿಗಳು ಕಂಗಾಲು!

ಎಂಜಿನಿಯರಿಂಗ್ ಪರೀಕ್ಷೆಗಳನ್ನು ಆನ್‌ಲೈನ್‌ನಲ್ಲಿ ನಡೆಸಲು ನಿರ್ಧರಿಸಲಾಗಿದೆ. ಹಾಗಾಗಿ ವಿದ್ಯಾರ್ಥಿಗಳು ಆನ್‌ಲೈನ್‌ನಲ್ಲಿ ಪರೀಕ್ಷೆಗಳನ್ನು ಬರೆಯಲು ಲ್ಯಾಪ್‌ಟಾಪ್‌ಗಳನ್ನು ಹೊಂದಿರಲೇಬೇಕು ಎಂದು ಸೂಚಿಸಲಾಗಿದೆ.

ಎಂಜಿನಿಯರಿಂಗ್‌ ಕಾಲೇಜುಗಳು ಪ್ರಥಮ ವರ್ಷದಲ್ಲೇ ಲ್ಯಾಪ್‌ಟಾಪ್‌ ಕಡ್ಡಾಯ ಮಾಡಿವೆ. ಇದರಿಂದಾಗಿ ವಿದ್ಯಾರ್ಥಿಳು ಲಾಪ್‌ಟಾಪ್‌ ಇಲ್ಲದೆ ಪರದಾಡುವಂತಹ ಸ್ಥಿತಿ ನಿರ್ಮಾಣವಾಗಿದೆ. ಅಲ್ಲದೆ, ಈಗ ಆನ್‌ಲೈನ್‌ನಲ್ಲಿಯೇ ಪರೀಕ್ಷೆಗಳನ್ನು ನಡೆದಲಾಗುತ್ತದೆ ಎಂದು ತಿಳಿದ ಮೇಲೆ ವಿದ್ಯಾರ್ಥಿಗಳು ಆತಂಕಗೊಂಡಿದ್ದಾರೆ.

ದೇಶದಲ್ಲಿ ಲಾಕ್‌ಡೌನ್‌ ಹೇರಿದ್ದರಿಂದಾಗಿ ಆರ್ಥಿಕ ಸಂಕಷ್ಟ ಎದುರಾಗಿದೆ. ಹಾಗಾಗಿ ಜೂನ್‌ನಲ್ಲಿ ಆನ್‌ಲೈನ್‌ ಮೂಲಕ ಪರೀಕ್ಷೆಗಳನ್ನು ನಡೆಸಲಾಗುವುದು, ಎಲ್ಲರೂ ಲ್ಯಾಪ್‌ಟಾಪ್‌ಗಳನ್ನು ಇಟ್ಟುಕೊಂಡಿರಬೇಕು ಎಂದು ಸೂಚಿಲಾಗಿದೆ.

ಆದರೆ, ಎತ್ತಿಗೆ ಜ್ವರ ಬಂದರೆ ಎಮ್ಮೆಗೆ ಬರೆ ಎಳೆದಂತೆ’ ಎಂಜಿನಿಯರಿಂಗ್‌ ಕಾಲೇಜುಗಳು ಆರ್ಥಿಕ ಸಂಕಷ್ಟದ ಹೊರೆಯನ್ನು ವಿದ್ಯಾರ್ಥಿಗಳ ಮೇಲೆ ಹೇರಲು ಮುಂದಾಗಿವೆ. ಇಗಾಗಲೇ ವಿದ್ಯಾರ್ಥಿಗಳು ಪರೀಕ್ಷಾ ಶುಲ್ಕವನ್ನೂ ಭರಿಸಿದ್ದು, ಈಗ ಮತ್ತೆ ಲ್ಯಾಪ್‌ಟಾಪ್‌ ಕೊಂಡುಕೊಳ್ಳಲು ಹರಸಾಹಸ ಪಡಬೇಕಾಗಿದೆ.

ಲಾಕ್‌ಡೌನ್‌ನಿಂದಾಗಿ ವಿದ್ಯಾರ್ಥಿಗಳ ಕುಟುಂಬದ ಆರ್ಥಿಕ ಪರಿಸ್ಥಿತಿಯೂ ಹದಗೆಟ್ಟಿದ್ದು, ಲ್ಯಾಪ್‌ಟಾಪ್‌ ಕೊಳ್ಳಲು ಹಣವಿಲ್ಲದ ಸಮಸ್ಯೆಯನ್ನೂ ಎದುರಿಸುತ್ತಿದ್ದಾರೆ.

ಹಾಗಾಗಿ ‘ಆನ್‌ಲೈನ್ ಪರೀಕ್ಷೆ ನಡೆಸಿದರೆ ತೊಂದರೆ ಆಗುತ್ತದೆ’. ಆನ್‌ಲೈನ್‌ ಪರೀಕ್ಷೆಯನ್ನು ರದ್ದುಗೊಳಿಸಿ ಎಂದು ಕೆಲ ವಿದ್ಯಾರ್ಥಿಗಳು ಮುಖ್ಯಮಂತ್ರಿಗೆ ಪತ್ರ ಬರೆದಿದ್ದಾರೆ.

ಸುಳ್ಳು ಸುದ್ದಿಗಳ ವಿರುದ್ಧದ ಹೋರಾಟಕ್ಕೆ ದೇಣಿಗೆ ನೀಡಿ ಬೆಂಬಲಿಸಿ
Spread the love

Leave a Reply

Your email address will not be published.

Verified by MonsterInsights