ಆರೋಗ್ಯ ಕಾರ್ಯಕರ್ತರ ರಕ್ಷಣೆಗೆ ಸುಗ್ರೀವಾಜ್ಞೆ ತರಲಿದೆ ಕೇಂದ್ರ ಸರ್ಕಾರ

ಕೊರೊನಾ ವೈರಸ್ ಸೋಂಕು ಹರಡುತ್ತಿರುವುದರ ಈ ಸಂದರ್ಭದಲ್ಲಿ ಮಧ್ಯೆ ವೈದ್ಯರ ಮೇಲೆ ದಾಳಿ ಹೆಚ್ಚಾಗುತ್ತಿವೆ. ಹಾಗಾಗಿ ಆರೋಗ್ಯ ಕಾರ್ಯಕರ್ತರನ್ನು ರಕ್ಷಿಸಲು ಸರ್ಕಾರ ಸುಗ್ರೀವಾಜ್ಞೆಯನ್ನು ತರಲು ಮುಂದಾಗಿದೆ.

ಆರೋಗ್ಯ ಕಾರ್ಯಕರ್ತರ ಮೇಲಿನ ದಾಳಿಯನ್ನು ಜಾಮೀನು ರಹಿತ ಅಪರಾಧವೆಂದು ಪರಿಗಣಿಸಲಾಗುವುದು. ದಾಳಿ ಮಾಡಿದವರಿಗೆ ಆರು ತಿಂಗಳಿಂದ ಏಳು ವರ್ಷಗಳವರೆಗೆ ಜೈಲು ಶಿಕ್ಷೆ ವಿಧಿಸಲಾಗುವುದು ಎಂದು ಕೇಂದ್ರ ಸಚಿವ ಪ್ರಕಾಶ್ ಜಾವಡೇಕರ್ ಪ್ರಕಟಿಸಿದ್ದಾರೆ.

“COVID-19 ವಿರುದ್ದದ ಹೋರಾಟದಲ್ಲಿ ಮುನ್ನೆಲೆಯಲ್ಲಿ ನಿಂತು ಕೆಲಸ ಮಾಡುವ ಆರೋಗ್ಯ ಕಾರ್ಯಕರ್ತರಿಗೆ ಮತ್ತು ಕ್ಷೇತ್ರದಲ್ಲಿರುವವರಿಗೆ ದೇಶಾದ್ಯಂತ ಜನರು ನಮಸ್ಕರಿಸುತ್ತಿದ್ದಾರೆ.  ಆದರೆ, ಕೆಲವೆಡೆ ಅವರು ವೈರಸ್ ಹರಡುತ್ತಿದ್ದಾರೆಂದು ಭಾವಿಸಿ ಅವರ ಮೇಲೆ ಹಲ್ಲೆ ಮಾಡಲಾಗುತ್ತಿದೆ. ಅಂತಹವರ ಸಂಖ್ಯೆ ಬಹಳ ಕಡಿಮೆ. ವೈದ್ಯರು ಮತ್ತು ಆರೋಗ್ಯ ಕಾರ್ಯಕರ್ತರ ಮೇಲಿನ ದಾಳಿಯನ್ನು ಖಂಡಿತವಾಗಿಯೂ ಸಹಿಸುವುದಿಲ್ಲ”ಎಂದು ಜಾವಡೇಕರ್ ಕ್ಯಾಬಿನೆಟ್ ಸಭೆಯ ನಂತರ ಹೇಳಿದ್ದಾರೆ.

ವೈದ್ಯರು ಅಥವಾ ಆರೋಗ್ಯ ಕಾರ್ಯಕರ್ತರ ಮೇಲೆ ದಾಳಿ ಮಾಡಿದರೆ 1 ಲಕ್ಷದಿಂದ 5 ಲಕ್ಷ ರೂ.ಗಳವರೆಗೆ ದಂಡ ವಿಧಿಸಲಾಗುವುದು.

“ಈ ಕಾನೂನು ವೈದ್ಯರು, ದಾದಿಯರು, ಆರೋಗ್ಯ ಕಾರ್ಯಕರ್ತರು, ಪರಿಚಾರಕರು ಮತ್ತು ಆಶಾ ಕಾರ್ಮಿಕರನ್ನು ರಕ್ಷಿಸುತ್ತದೆ. ಆರೋಗ್ಯ ವೃತ್ತಿಪರರಿಗೆ ವಿಮಾ ರಕ್ಷಣೆಯನ್ನು ವಿಸ್ತರಿಸಲಾಗುವುದು” ಎಂದು ಅವರು ಹೇಳಿದರು. ಸುಗ್ರೀವಾಜ್ಞೆಯನ್ನು ರಾಷ್ಟ್ರಪತಿಗೆ ಕಳುಹಿಸಲಾಗಿದೆ. ಅನುಮೋದನೆ ಪಡೆದ ನಂತರ, ಅದು ತಕ್ಷಣವೇ ಜಾರಿಗೆ ಬರುತ್ತದೆ.

 

ಸುಳ್ಳು ಸುದ್ದಿಗಳ ವಿರುದ್ಧದ ಹೋರಾಟಕ್ಕೆ ದೇಣಿಗೆ ನೀಡಿ ಬೆಂಬಲಿಸಿ
Spread the love

Leave a Reply

Your email address will not be published.

Verified by MonsterInsights