ಆರ್ಥಿಕ ಕುಸಿತ: 09 ತಿಂಗಳುಗಳ ಕಾಲ ಹೊಸ ಯೋಜನೆಗಳಿಗೆ ತಡೆಯೊಡ್ಡಿದ ಕೇಂದ್ರ ಸರ್ಕಾರ
ದೇಶದಲ್ಲಿ ಕೊರೊನಾ ವೈರಸ್ ಮತ್ತು ಅದರ ನಿಯಂತ್ರಣಕ್ಕಾಗಿ ಹೇರಲಾಗಿದ್ದ ಲಾಕ್‌ಡೌನ್‌ನಿಂದಾಗಿ ದೇಶದ ಆರ್ಥಿಕತೆಯ ಮೇಲೆ ಗಂಭೀರ ಪರಿಣಾಮ ಬೀರಿದೆ. ಹಾಗಾಗಿ ಮುಂದಿನ ಒಂದು ವರ್ಷದ ಕಾಲ ಯಾವುದೇ ರೀತಿಯ ಹೊಸ ಯೋಜನೆಗಳನ್ನು ಜಾರಿಮಾಡುವುದಿಲ್ಲ ಎಂದು ಕೇಂದ್ರ ಸರ್ಕಾರ ಹೇಳಿದೆ.
ಈ ಕುರಿತು ಅಧಿಸೂಚನೆ ಹೊರಡಿಸಿರುವ ಕೇಂದ್ರ ವಿತ್ತ ಸಚಿವಾಲಯವು, ಕೊರೋನಾ ವೈರಸ್ ವಿರುದ್ಧದ ಹೋರಾಟಕ್ಕೆ ಸಂಪನ್ಮೂಲ ಕ್ರೋಡೀಕರಿಸಬೇಕಾಗಿದೆ. ಇದಕ್ಕೆ ಹೆಚ್ಚಿನ ಒತ್ತು ನೀಡಬೇಕಾಗಿದ್ದು, ಆತ್ಮ ನಿರ್ಭರ ಭಾರತ ಅಭಿಯಾನ ಮತ್ತು ಗರೀಬ್ ಕಲ್ಯಾಣ ಯೋಜನೆಗಳನ್ನು ಹೊರತು ಪಡಿಸಿ, ಮುಂದಿನ ಒಂಭತ್ತು ತಿಂಗಳುಗಳ ಕಾಲ (2021ರ ಮಾರ್ಚ್ 31ರವರೆಗೆ) ಯಾವುದೇ ಹೊಸ ಯೋಜನೆಗಳನ್ನು ರೂಪಿಸುವುದಿಲ್ಲ ಎಂದು ಕೇಂದ್ರ ಸರ್ಕಾರ ಹೇಳಿದೆ.
![]()
ಪ್ರಮುಖವಾಗಿ ಪ್ರಧಾನಮಂತ್ರಿಗಳ ಗರೀಬ್ ಕಲ್ಯಾಣ್ ಯೋಜನೆಗೆ ಅನುದಾನ ದೊರೆಯಲಿದ್ದು, ಉಳಿದೆಲ್ಲಾ ಯೋಜನೆಗಳಿಗೆ ಪ್ರಸ್ತುತ ಇರುವ ಅನುದಾನವನ್ನಷ್ಟೇ ಬಳಕೆ ಮಾಡಿಕೊಳ್ಳಬೇಕು. ಹಣಕಾಸು ಇಲಾಖೆಯು ಯಾವ ಹೊಸ ಯೋಜನೆಗಳಿಗೂ ಅನುದಾನವನ್ನು ನೀಡುವುದಿಲ್ಲ. ಎಲ್ಲಾ ಇಲಾಖೆಗಳು ತಮ್ಮ ಪ್ರಸ್ತಾವನೆಯನ್ನು ಸ್ಥಗಿತಗೊಳಿಸಬೇಕು ಎಂದು ತಿಳಿಸಿದೆ.
ಕೊರೋನಾ ವೈರಸ್ ನೀಡಿರುವ ಆರ್ಥಿಕ ಬಿಕ್ಕಟ್ಟಿನಿಂದ ದೇಶವನ್ನು ಮೇಲೆತ್ತಲು ಎಲ್ಲಾ ವರ್ಗಗಳ ಹಿತವನ್ನು ಗಮನದಲ್ಲಿಟ್ಟುಕೊಂಡು ಕೇಂದ್ರ ಸರ್ಕಾರ ರೂ.20 ಲಕ್ಷ ಕೋಟಿ ವಿಶೇಷ ಆರ್ಥಿಕ ಪ್ಯಾಕೇಜ್ ಬಿಡುಗಡೆ ಮಾಡಿದೆ. ಈ ಪ್ಯಾಕೇಜ್ ವಿಶ್ವದ ಮೂರನೇ ಅತೀದೊಡ್ಡ ಆರ್ಥಿಕ ಪ್ಯಾಕೇಜ್ ಎಂಬ ಹೆಗ್ಗಳಿಕೆಯನ್ನೂ ಪಡೆದುಕೊಂಡಿದೆ ಎಂದು ಕೇಂದ್ರ ಸರ್ಕಾರ ಸಮರ್ಥಿಸಿಕೊಂಡಿದೆ.
![]()
ಹಾಗಾಗಿ, ಕೊರೋನಾ ವೈರಸ್ ವಿರುದ್ಧ ಹೋರಾಡಲು ಸಂಪನ್ಮೂಲದ ಕ್ರೋಡೀಕರಣ ಮಾಡಬೇಕಿರುವ ಹಿನ್ನೆಲೆಯಲ್ಲಿ ಪ್ರಸಕ್ತ ವರ್ಷದಲ್ಲಿ ಹಣಕಾಸು ಪರಿಸ್ಥಿತಿಯನ್ನು ಕಟ್ಟುನಿಟ್ಟಾಗಿ ನಿಬಾಯಿಸಬೇಕಿದೆ ಎಂದು ತಿಳಿಸಿದೆ.
ಕಂಟ್ರೋಲರ್ ಜನರಲ್ ಆಫ್ ಅಕೌಂಟ್ಸ್ (ಸಿಜಿಎ) ಪ್ರಕಾರ ಏಪ್ರಿಲ್ 2020 ರಲ್ಲಿ ಲಭ್ಯವಿರುವ ಒಟ್ಟು ಆದಾಯ 27,548 ಕೋಟಿ ರೂ.ಗಳಷ್ಟಿದ್ದು, ಇದು ಬಜೆಟ್‌ನ 1.2% ನಷ್ಟಿದೆ. ಸಿಜಿಎ ದತ್ತಾಂಶದ ಪ್ರಕಾರ ಹಣಕಾಸಿನ ವರ್ಷದ ಮೊದಲ ತಿಂಗಳಲ್ಲಿ ಅಂದಾಜು ಮಾಡಲಾದ ಆದಾಯದ ಮೂರನೇ ಒಂದು ಭಾಗದಷ್ಟು ಈಗಾಗಲೇ ಕೊರತೆಯಾಗಿದೆ ಎಂದು ತೋರಿಸುತ್ತದೆ.
ಆರ್ಥಿಕ ಬಿಕ್ಕಟ್ಟನ್ನು ನಿವಾರಿಸಲು, ಪ್ರಸಕ್ತ ಹಣಕಾಸು ವರ್ಷದಲ್ಲಿ ಮಾರುಕಟ್ಟೆ ಸಾಲವನ್ನು 4.2 ಲಕ್ಷ ಕೋಟಿ ರೂ.ಗಳಿಂದ ಅಂದಾಜು 12 ಲಕ್ಷ ಕೋಟಿಗೆ ಹೆಚ್ಚಿಸುವುದಾಗಿ ಸರ್ಕಾರ ಘೋಷಿಸಿದೆ.


I do accept as true with all the ideas you’ve offered
to your post. They’re very convincing and will certainly work.
Still, the posts are too quick for newbies. May you please lengthen them a bit from subsequent time?
Thank you for the post.