ಆಸ್ಪತ್ರೆಗೆ ದಾಖಲಾಗಿದ್ದ ರಾಜ್ಯಪಾಲ ವಜುಬಾಯಿ ವಾಲಾ ಡಿಸ್ಚಾರ್ಜ್…
ಆನಾರೋಗ್ಯದಿಂದಾಗಿ ನಗರದ ಖಾಸಗಿ ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದ ರಾಜ್ಯಪಾಲ ವಜುಬಾಯಿ ವಾಲಾ ಅವರು ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ.
ನ.24ರಂದು ಬನ್ನೇರುಘಟ್ಟದ ಫೋರ್ಟಿಸ್ ಆಸ್ಪತ್ರೆಗೆ ದಾಖಲಾಗಿದ್ದ ಅವರು ಹೃದಯ ಶಸ್ತ್ರ ಚಿಕಿತ್ಸೆಗೆ ಒಳಗಾಗಿದ್ದರು. ನ.25ರಂದು ಆಸ್ಪತ್ರೆಯ ಕಾರ್ಡಿಯಾ ವಾಸ್ಕ್ಯುಲರ್ ಸರ್ಜನ್ ಡಾ ವಿವೇಕ್ ಜವಲಿ ಅವರಿಗೆ ಸರ್ಜರಿ ನಡೆಸಿದ್ದರು, ಇದಾದ ಬಳಿಕ ಐದು ದಿನಗಳ ಕಾಲ ಅವರನ್ನು ಗಮನಿಸಲಾಗುತ್ತಿತ್ತು, ಅವರ ಆರೋಗ್ಯ ಈಗ ಸ್ಥಿರವಾಗಿದ್ದು, ಇಂದು ಬೆಳಗ್ಗೆ ಡಿಸ್ಚಾರ್ಜ್ ಮಾಡಲಾಗಿದೆ ಎಂದು ವೈದ್ಯರು ತಿಳಿಸಿದ್ದಾರೆ.