ಇಂದು ಧಾರ್ಮಿಕ ಸ್ಥಳಗಳು ಓಪನ್ : ಎರಡುವರೆ ತಿಂಗಳ ಬಳಿಕ ದೇವರ ದರ್ಶನ ಪಡೆದ ಜನ..

ಎರಡುವರೆ ತಿಂಗಳುಗಳ ಕಾಲ ಕೊರೊನಾ ವೈರಸ್ ಹರಡುವ ಭೀತಿಯಿಂದಾಗಿ ಬಂದ್ ಮಾಡಲಾಗಿದ್ದ ಧಾರ್ಮಿಕ ಸ್ಥಳಗಳಲ್ಲಿಂದು ಪೂಜೆ, ಪ್ರಾರ್ಥನೆ ಪ್ರಾರಂಭ ವಾಗಿವೆ. ಇಂದು ಮುಂಜಾನೆಯಿಂದಲೇ ದೇವಸ್ಥಾನಗಳಲ್ಲಿ ಪೂಜೆ ಆರಂಭವಾಗಿದ್ದು, ಸರತಿ ಸಾಲಿನಲ್ಲಿ ನಿಂತ ಜನ ದೇವರ ದರ್ಶನ ಪಡೆದು ಪನೀತರಾಗುತ್ತಿದ್ದಾರೆ.

ಕೊರೊನಾ ಲಾಕ್ ಡೌನ್ ಬಳಿಕ ಬಂದ್ ಮಾಡಲಾಗಿದ್ದ ಧಾರ್ಮಿಕ ಸ್ಥಳಗಳಿಗೆ ಸದ್ಯ ಜೀವ ಕಳೆ ಬಂದಂತಾಗಿದೆ. ನೂರಾರು ಜನ ಪ್ರಸಿದ್ಧ ದೇವಾಲಯಗಳಿಗೆ ಭೇಟಿ  ನೀಡಿ ಪೂಜೆ ಪುನಸ್ಕಾರಗಳಲ್ಲಿ ಭಾಗಿಯಾಗುತ್ತಿದ್ದಾರೆ. ಸರ್ಕಾರದ ಮಾರ್ಗ ಸೂಚಿಯಂತೆ ಸಾಮಾಜಿಕ ಅಂತರ, ಮಾಸ್ಕ್, ಸ್ಯಾನಿಟೈಸರ್,ಥರ್ಮಲ್ ಸ್ಕ್ರೀನಿಂಗ್ ಕಡ್ಡಾಯವಾಗಿದೆ. ನಿಯಮ ಪಾಲಿಸದೇ ಇರುವವರಿಗೆ ದೇವಸ್ಥಾನಗಳಲ್ಲಿ ಪ್ರವೇಶವೇ ಇಲ್ಲ ಎಂದು ದೇವಸ್ಥಾನದ ಆಡಳಿತ ಮಂಡಳಿ ತಿಳಿಸಿದೆ. ಕೊರೊನಾ ವೈರಸ್ ಸೋಂಕು ಹರಡದಂತೆ ಸೂಕ್ತ ಮುನ್ನೆಚ್ಚರಿಕಾ ಕ್ರಮಗಳನ್ನು ತೆಗೆದುಕೊಳ್ಳಬೇಕಾಗಿದೆ. ಇದರ ಜೊತೆಗೆ ಕಂಟೇನ್ಮೆಂಟ್ ಝೋನ್ ಗಳಿಂದ ಹೊರಭಾಗಗಳಲ್ಲಿ ಮಾತ್ರ ಧಾರ್ಮಿಕ ಕೇಂದ್ರಗಳನ್ನು ತೆರೆಯಲು ಅವಕಾಶ ನೀಡಲಾಗಿದೆ.

ಇನ್ನೂ ದೇವಸ್ಥಾನಗಳಲ್ಲಿ ತೀರ್ಥ, ಪ್ರಸಾದ  ವಿತರಣೆಗೆ ನಿರ್ಭಂಧ ಹೇರಲಾಗಿದೆ.  ವಿಶ್ವ ವಿಖ್ಯಾತ ಬೇಲೂರಿನ ಚನ್ನಕೇಶವ ದೇವಾಲಯ,ಶ್ರೀರಂಗಪಟ್ಟಣದ ಪ್ರಸಿದ್ಧ ನಿಮಿಷಾಂಭ ದೇವಾಲಯ, ಮಂಗಳೂರಿನ ಕದ್ರಿ ಮಂಜುನಾಥಸ್ವಾಮಿ, ಕುದ್ರೋಳಿ ಶ್ರೀ ಗೋಕರ್ಣನಾಥೇಶ್ವರ, ಗಣಪತಿ ದೇವಸ್ಥಾನ ಮತ್ತು ಮಂಗಳಾದೇವಿ ದೇವಸ್ಥಾನ, ಬೆಂಗಳೂರಿನ ಕೆಲವು ಪ್ರಸಿದ್ಧ ದೇವಸ್ಥಾನಗಳು ಓಪನ್ ಆಗಿವೆ.

ಸುಳ್ಳು ಸುದ್ದಿಗಳ ವಿರುದ್ಧದ ಹೋರಾಟಕ್ಕೆ ದೇಣಿಗೆ ನೀಡಿ ಬೆಂಬಲಿಸಿ
Spread the love

Leave a Reply

Your email address will not be published.

Verified by MonsterInsights