ಇಡಿ ಕೋರ್ಟ್ ನಲ್ಲಿ ಕಾಂಗ್ರೆಸ್ ಶಾಸಕಿ ಲಕ್ಷ್ಮಿ ಹೆಬ್ಬಾಳ್ಕರ್ ವಿಚಾರಣೆ….

ಡಿ.ಕೆ. ಶಿವಕುಮಾರ್ ಜೈಲು ಸೇರಿದ್ದಾರೆ. ಈ ಮಧ್ಯೆ ಇಡಿ ಕೋರ್ಟ್ ನಲ್ಲಿ ಕಾಂಗ್ರೆಸ್ ಶಾಸಕಿ ಲಕ್ಷ್ಮಿ ಹೆಬ್ಬಾಳ್ಕರ್  ವಿಚಾರಣೆ ನಡೆಯುತ್ತಿದೆ. ಡಿ.ಕೆ. ಶಿವಕುಮಾರ್ ಜೊತೆಗಿನ ವ್ಯವಹಾರದ ಬಗ್ಗೆ ಅಧಿಕಾರಿಗಳು ಮಾಹಿತಿ ಪಡೆಯುತ್ತಿದ್ದಾರೆ. ಹಾಗೆ ಲಕ್ಷ್ಮಿ ವ್ಯವಹಾರದ ಬಗ್ಗೆ ಮಾಹಿತಿ ಪಡೆಯುತ್ತಿದ್ದಾರೆ ಎನ್ನಲಾಗಿದೆ.

ಇಬ್ಬರ ಮಧ್ಯೆ ಹಣಕಾಸಿನ ವ್ಯವಹಾರಗಳು ಏನಿದೆ ಎಂಬುದ ಬಗ್ಗೆ ಇಡಿ ಅಧಿಕಾರಿಗಳು ಮಾಹಿತಿ ಪಡೆಯಲಿದ್ದಾರೆ. ಬಳ್ಳಾರಿ ಸೋಲಾರ್ ಪ್ಲ್ಯಾಂಟ್, ಮಲೇಶಿಯಾದಲ್ಲಿ ನಡೆದಿದೆ ಎನ್ನಲಾದ ಹೂಡಿಕೆ ಬಗ್ಗೆ ಮಾಹಿತಿ ಪಡೆಯಲಾಗುತ್ತಿದೆ. ಲಕ್ಷ್ಮಿ ಹೆಬ್ಬಾಳ್ಕರ್ ಜೊತೆ ಎಷ್ಟು ಗಂಟೆಗಳ ಕಾಲ ವಿಚಾರಣೆ ನಡೆಯಲಿದೆ ಎನ್ನುವುದು ತಿಳಿದಿಲ್ಲ.

ಡಿ.ಕೆ. ಶಿವಕುಮಾರ್ ಜೊತೆ 10 ವರ್ಷಗಳ ವ್ಯವಹಾರಿಕ ಸಂಬಂಧ ಏನು ಎನ್ನುವ ಬಗ್ಗೆ ಪ್ರಶ್ನೆ ಕೇಳುವ ಸಾಧ್ಯತೆಯಿದೆ. ತಮ್ಮನ ಹೆಸರಿನಲ್ಲಿ ಡಿ.ಕೆ.ಶಿವಕುಮಾರ್ ಎಷ್ಟು ಬೇನಾಮಿ ಆಸ್ತಿ ಮಾಡಿದ್ದಾರೆ ಎಂಬುದ್ರಿಂದ ಹಿಡಿದು, ನಿಮ್ಮ ವ್ಯವಹಾರಕ್ಕೆ ಅವ್ರು ಎಷ್ಟು ಸಹಾಯ ಮಾಡಿದ್ದಾರೆ ಎಂಬ ಪ್ರಶ್ನೆಗಳಿಗೆ ಉತ್ತರ ಪಡೆಯಲಿದ್ದಾರೆ.

ಸುಳ್ಳು ಸುದ್ದಿಗಳ ವಿರುದ್ಧದ ಹೋರಾಟಕ್ಕೆ ದೇಣಿಗೆ ನೀಡಿ ಬೆಂಬಲಿಸಿ
Spread the love

Leave a Reply

Your email address will not be published.

Verified by MonsterInsights