ಈರುಳ್ಳಿ ಕೊರೊನಾ : ವ್ಯಾಪಾರಿಯೊಂದಿಗೆ ಕುಟುಂಬಸ್ಥರಲ್ಲೂ ಸೋಂಕು ದೃಢ – ಜನರಲ್ಲಿ ಹೆಚ್ಚಿದ ಆತಂಕ

ಬೆಳಗಾವಿಯ ಹಿರೇಬಾಗೇವಾಡಿ ಗ್ರಾಮ ಹಾಗೂ ಜಿಲ್ಲೆಯಾದ್ಯಂತ ಈರುಳ್ಳಿಗೂ ಕೊರೊನಾ ಬಂತಾ ಅನ್ನೋ ಆತಂಕ ಜನರಿಗೆ ಶುರುವಾಗಿದೆ.

ಹೌದು… ಬೆಳಗಾವಿಯ ಈರುಳ್ಳಿ ವ್ಯಾಪಾರಿ ಸೇರಿ ಆತನ ಕುಟುಂಬದ ನಾಲ್ವರಿಗೆ ಕೊರೊನಾ ಸೋಂಕು ಪತ್ತೆಯಾಗಿದ್ದು, ಈತನ ಬಳಿ ಈರುಳ್ಳಿ ಖರೀದಿ ಮಾಡಿದ ಗ್ರಾಹಕರಿಗೂ ಆತಂಕ ಹೆಚ್ಚಾಗಿದೆ. ಸಾಲದಕ್ಕೆ ಆತ ವ್ಯಾಪಾರ ಮಾಡಿದ ಸ್ಥಳಗಳಲ್ಲೆಲ್ಲಾ ಜನ ಭಯ ಭೀತಿಗೊಂಡಿದ್ದಾರೆ.

ಸೋಂಕಿತ ಸಂಖ್ಯೆ 128 ಸೇರಿದಂತೆ ತಂದೆ, ತಾಯಿ ಹಾಗೂ ಸಹೋದರನಿಗೆ ಸೋಂಕು ತಗುಲಿರುವುದು ದೃಢಪಟ್ಟಿದೆ. ರೋಗಿ ನಂ. 128 ದೆಹಲಿಯ ನಿಜಾಮುದ್ದೀನ್‍ನಲ್ಲಿ ನಡೆದ ಧಾರ್ಮಿಕ ಸಭೆಯಲ್ಲಿ ಭಾಗಿಯಾಗಿದ್ದರು. ನಂತರ ಉತ್ತರ ಪ್ರದೇಶದ ಚೇಕಡಾ ಗ್ರಾಮದಲ್ಲಿ ಸಹ ಧಾರ್ಮಿಕ ಪ್ರಚಾರ ನಡೆಸಿ, ಮಾರ್ಚ್ 22 ರಂದು ಬೆಳಗಾವಿಯ ಹಿರೇಬಾಗೇವಾಡಿ ಗ್ರಾಮಕ್ಕೆ ಆಗಮಿದ್ದರು. ಗ್ರಾಮಕ್ಕೆ ಮರಳಿದ ನಂತರ ಈರುಳ್ಳಿ ವ್ಯಾಪರದಲ್ಲಿ ತೊಡಗಿದ್ದು, ಪಾರಿಶ್ವಾಡ, ಹಿರೇಬಾಗೇವಾಡಿ, ಬಡಾಲ್ ಅಂಕಲಗಿ ಸಂತೆ ಸೇರಿದಂತೆ ವಿವಿಧೆಡೆ ವ್ಯಾಪಾರದಲ್ಲಿ ಭಾಗಿಯಾಗಿದ್ದರು.

ಇನ್ನು ರೋಗಿಯ ತಂದೆ ಹಾಗೂ ಮಕ್ಕಳು ಈರುಳ್ಳಿ ವ್ಯಾಪರ ಮಾಡುತ್ತಾರೆ. ಈ ಮೂರು ಗ್ರಾಮಗಳಲ್ಲಿ ನಡೆಯುವ ಸಂತೆಯಲ್ಲಿ 10ಕ್ಕೂ ಹೆಚ್ಚು ಗ್ರಾಮಗಳ ಜನ ಭಾಗಿಯಾಗುತ್ತಾರೆ. ಹೀಗಾಗಿ ಸದ್ಯ ಈ ಗ್ರಾಮಗಳ ಗ್ರಾಮಸ್ಥರಲ್ಲಿ ಆತಂಕ ಸೃಷ್ಟಿಯಾಗಿದೆ.

 

ಸುಳ್ಳು ಸುದ್ದಿಗಳ ವಿರುದ್ಧದ ಹೋರಾಟಕ್ಕೆ ದೇಣಿಗೆ ನೀಡಿ ಬೆಂಬಲಿಸಿ
Spread the love

Leave a Reply

Your email address will not be published.

Verified by MonsterInsights