ಈರುಳ್ಳಿ ಲೈಸೆನ್ಸ್ : ಅಕ್ರಮ ಈರುಳ್ಳಿ ದಾಸ್ತಾನು ಮಾಡಿದ್ರೆ ಹುಷಾರ್…!

ಈರುಳ್ಳಿ ಬೇಲೆ ದುಬಾರಿ ಹಿನ್ನಲೆಯಲ್ಲಿ ಮೈಸೂರಿನಲ್ಲಿ ಈರುಳ್ಳಿ ಮಾರಾಟಕ್ಕೆ ಲೈಸನ್ಸ್ ಪಡೆಯಬೇಕೆಂದು ಮೈಸೂರು ಜಿಲ್ಲಾಧಿಕಾರಿಯಿಂದ ಆದೇಶ ಹೊರಡಿಸಲಾಗಿದೆ.

ಅಗತ್ಯ ವಸ್ತುಗಳ ಪರವಾಗಿನಿಗೆ ಆದೇಶ 1986(ತಿದ್ದುಪಡಿ 2019)ರ ಪ್ರಕಾರ ಲೈಸೆನ್ಸ್ ಪಡೆಯಬೇಕು. ನಗರ ವ್ಯಾಪಾರಿಗಳು ಜಿಲ್ಲಾಧಿಕಾರಿ ಕಚೇರಿಯಿಂದ ಲೈಸೆನ್ಸ್ ಪಡೆದು ಮಾರಾಟ ಮಾಡಬೇಕು. ತಾಲ್ಲೂಕಿನಲ್ಲಿ ತಹಶಿಲ್ದಾರರ್‌ರಿಂದ ಲೈಸೆನ್ಸ್ ಪಡೆದು ಮಾರಾಟ ಮಾಡಬೇಕು. ಸರ್ಕಾರದ ಆದೇಶದಂತೆ ಈರುಳ್ಳಿ ಸಗಟು ವ್ಯಾಪಾರಿಗಳು 250ಕ್ವಿಂಟಾಲ್ ದಾಸ್ತಾನು ಮಾಡಬೇಕು. ಚಿಲ್ಲರೆ ವ್ಯಾಪಾರಿಗಳು 50ಕ್ವಿಂಟಾಲ್ ದಾಸ್ತಾನು ಮಾಡಬೇಕು. ಲೈಸೆನ್ಸ್ ಇಲ್ಲದೆ ಅದಕ್ಕಿಂತ ಹೆಚ್ಚಿನ ಈರುಳ್ಳಿ ದಾಸ್ತಾನು ಮಾಡಿದ್ರೆ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು  ಮೈಸೂರು ಜಿಲ್ಲಾಧಿಕಾರಿಯಿಂದ ಆದೇಶ ಹೊರಡಿಸಿದೆ.

ಅಕ್ರಮ ದಾಸ್ತಾನು ಗಮನಕ್ಕೆ ಬಂದರೆ ಆಹಾರ ಇಲಾಖೆಯಿಂದ ಈರುಳ್ಳಿ ಅಂಗಡಿಗಳ ಮೇಲೂ ದಾಳಿ ಮಾಡುವ ಸಾಧ್ಯತೆ ಇದೆ. ಇದರಿಂದ ಜಿಲ್ಲಾಧಿಕಾರಿ ಆದೇಶದಿಂದ ಈರುಳ್ಳಿಗೆ ಅಕ್ರಮ ದಾಸ್ತಾನು ಮಾಡಿಕೊಂಡವರಲ್ಲಿ ಆತಂಕ ಸೃಷ್ಟಿಯಾಗಿದೆ.

ಸುಳ್ಳು ಸುದ್ದಿಗಳ ವಿರುದ್ಧದ ಹೋರಾಟಕ್ಕೆ ದೇಣಿಗೆ ನೀಡಿ ಬೆಂಬಲಿಸಿ
Spread the love

Leave a Reply

Your email address will not be published.

Verified by MonsterInsights