‘ಉತ್ತಮ ಮಳೆ ಸುರಿಸಿದಾವು, ಸರ್ವರು ಎಚ್ಚರ’ ಬೀರೂರಿನ ಮೈಲಾರಲಿಂಗಸ್ವಾಮಿ ಕಾರ್ಣೀಕ ಭವಿಷ್ಯ….

ಚಿಕ್ಕಮಗಳೂರು ಜಿಲ್ಲೆ ಕಡೂರು ತಾಲ್ಲೂಕಿನ ಬೀರೂರಿನ ಸರಸ್ವತಿಪುರಂನಲ್ಲಿ ನೆಲೆಸಿರುವ ಇತಿಹಾಸ ಪ್ರಸಿದ್ದ ಶ್ರೀ ಮೈಲಾರಲಿಂಗಸ್ವಾಮಿಯ ಕಾರ್ಣೀಕ ಇಂದು ಮುಂಜಾನೆ ಸಂಪನ್ನಗೊಂಡಿದೆ. ಇಟ್ಟ ರಾಮನ ಬಾಣಕ್ಕೆ ಹುಸಿಯಿಲ್ಲ. ಪಂಜರದ ಗಿಳಿಗಳು ಹಾರಿ ಹೋದಾವು. ಕಟ್ಟಿದ ಕೋಟೆ ಪರರದಾಯಿತು .ಉತ್ತಮ ಮಳೆ ಸುರಿಸಿದಾವು. ಸರ್ವರು ಎಚ್ಚರದಿಂದಿರಬೇಕು.‌ ಇದು, ರಾಷ್ಟ್ರ ಮತ್ತು ರಾಜ್ಯದ ಆಗುಹೋಗುಗಳ ಮೇಲೆ ಶ್ರೀ ಮೈಲಾರಲಿಂಗಸ್ವಾಮಿ ಧಶರಥ ಪೂಜಾರರ ಬಾಯಲ್ಲಿ ಬಂದ ಕಾರ್ಣೀಕದ ನುಡಿಗಳು.

ಬುಧವಾರ ಬೆಳಗಿನ ಜಾವ 5 ಗಂಟೆಗೆ ಇಲ್ಲಿನ ಮಹಾನವಮಿ ಬಯಲಿನಲ್ಲಿ ಸಾವಿರಾರು ಭಕ್ತರ ಸಮ್ಮುಖದಲ್ಲಿ ಬೆಣ್ಣೆ ಮೆತ್ತಿದ ದೊಡ್ಡಬಿಲ್ಲಯ್ಯನನ್ನ ಏರಿದ ಪೂಜಾರರು ಕಾರ್ಣಿಕದ ನುಡಿಗಳನ್ನಾಡಿದರು. ಮಹಾನವಮಿ ಬಯಲಿನಲ್ಲಿ ಮೈಲಾರಲಿಂಗ ಕುಣಿತ ಅದ್ಬುತವಾಗಿರುವುದನ್ನು ನೋಡಲು ಭಕ್ತರು ಸಾವಿರಾರು ಸಂಖ್ಯೆಯಲ್ಲಿ ನಾ ಮುಂದು ತಾ ಮುಂದು ಎನ್ನುತ್ತಿರುತ್ತಾರೆ. ನಂತರ ಮೈಲಾರಲಿಂಗ ಸ್ವಾಮಿ ಪೂಜಾರರನ್ನು ಕಾರ್ಣಿಕ ನುಡಿಯಲು ಪ್ರೇರೆಪಿಸುತ್ತಿದ್ದಂತೆ ಗೊರವಯ್ಯನವರ ಢಮರುಗ ಶಬ್ದ ಎಂತವರನ್ನು ಭಕ್ತಿಯ ಅಲೆಯಲ್ಲಿ ತೇಲಿಸುತ್ತದೆ.

ಮಹಾನವಮಿ ಬಯಲಿನಲ್ಲಿ ಅಂಬನ್ನು ಮೂರು ಬಾರಿ ಪ್ರದಕ್ಷಿಣೆ ಹಾಕಿ ಜಯಘೋಷ ಮೊಳಗಿ ಕಾರ್ಣಿಕ ನುಡಿಯುವ ಸಮಯ ಬಂದಾಗ ಹುಟ್ಟಿದ ಕೂಸು ಸಹ ಅಳು ನಿಲ್ಲಿಸುತ್ತದೆ ಎಂಬ ಮಾತಿದೆ. ಇಲ್ಲಿ ನುಡಿಯುವ ಕಾರ್ಣಿಕ ಕೇಳಲು ಸಾವಿರಾರು ಭಕ್ತರು ಆಗಮಿಸುತ್ತಾರೆ.‌ ಮೈಲಾರಲಿಂಗನ ಕಾರ್ಣಿಕ ಕೇಳಿ ಅಂಬನ್ನು ಹೊಡೆದಾಗ ದಸರಾ ಮುಕ್ತಾಯವಾಗುತ್ತದೆ.

ಸುಳ್ಳು ಸುದ್ದಿಗಳ ವಿರುದ್ಧದ ಹೋರಾಟಕ್ಕೆ ದೇಣಿಗೆ ನೀಡಿ ಬೆಂಬಲಿಸಿ
Spread the love

Leave a Reply

Your email address will not be published.

Verified by MonsterInsights