ಉಪಚುನಾವಣೆಯ ಮತ ಎಣಿಕೆ ಆರಂಭ : ಯಾರು ಮುನ್ನಡೆ? ಯಾರಿಗೆ ಹಿನ್ನಡೆ..?

ಉಪಚುನಾವಣೆಯ ಮತ ಎಣಿಕೆ ಪ್ರಾರಂಭವಾಗಿದ್ದು ಆರಂಭಿಕ ಒಂದು ಗಂಟೆಯಲ್ಲಿ ಬಿಜೆಪಿ 10, ಕಾಂಗ್ರೆಸ್ 2, ಜೆಡಿಎಸ್ 2, ಇತರರು ಒಂದು ಕ್ಷೇತ್ರದಲ್ಲಿ ಮುನ್ನಡೆ ಸಾಧಿಸಿದ್ದಾರೆ.

ಯಲ್ಲಾಪುರ, ಕಾಗವಾಡ, ಅಥಣಿ, ಗೋಕಾಕ್, ಕೆಆರ್ ಪುರಂ, ಚಿಕ್ಕಬಳ್ಳಾಪುರ, ಹಿರೇಕೆರೂರು, ಮಹಾಲಕ್ಷ್ಮಿ ಲೇಔಟ್, ರಾಣೇಬೆನ್ನೂರು, ವಿಜಯನಗರದಲ್ಲಿ ಬಿಜೆಪಿ ಮುನ್ನಡೆ ಸಾಧಿಸಿದೆ.

ಶಿವಾಜಿನಗರ ಮತ್ತು ಹುಣಸೂರಿನಲ್ಲಿ ಕಾಂಗ್ರೆಸ್, ಯಶವಂತಪುರ  ಮತ್ತು ಕೆ.ಆರ್.ಪೇಟೆಯಲ್ಲಿ ಜೆಡಿಎಸ್ ಅಭ್ಯರ್ಥಿಗಳು ಮುನ್ನಡೆ ಸಾಧಿಸಿದ್ದರೆ, ಹೊಸಕೋಟೆಯಲ್ಲಿ ಪಕ್ಷೇತರ ಅಭ್ಯರ್ಥಿ ಶರತ್ ಬಚ್ಚೇಗೌಡ ಮುನ್ನಡೆ ಸಾಧಿಸಿದ್ದಾರೆ.

ಮೊದಲ ಹಂತದಿಂದಲೂ ಯಲ್ಲಾಪುರದ ಬಿಜೆಪಿ ಅಭ್ಯರ್ಥಿ ಶಿವರಾಂ ಹೆಬ್ಬಾರ್ ಅವರ ಮುನ್ನಡೆಯ ಅಂತರ ಹೆಚ್ಚಾಗುತ್ತಲೇ ಇದೆ.

ಸುಳ್ಳು ಸುದ್ದಿಗಳ ವಿರುದ್ಧದ ಹೋರಾಟಕ್ಕೆ ದೇಣಿಗೆ ನೀಡಿ ಬೆಂಬಲಿಸಿ
Spread the love

Leave a Reply

Your email address will not be published.

Verified by MonsterInsights