ಏ.14ರ ನಂತರವೂ ಲಾಕ್‍ಡೌನ್ ಅಗತ್ಯ- ಏ.11ಕ್ಕೆ ಸಿಎಂಗಳೊಂದಿಗೆ ಸಭೆ – ಮೋದಿ ಸೂಚನೆ

ಸಾಮಾನ್ಯ ಜನರ ಬದುಕನ್ನು ಬೀದಿ ಪಾಲು ಮಾಡಿದ ಕೊರೊನಾಕ್ಕೆ ಮದ್ದೇ ಇಲ್ಲ. ಹೀಗಾಗಿ ಕೊರೊನಾ ತಡೆಗೆ ದೇಶದಲ್ಲಿ ಲಾಕ್ ಡೌನ್ ಜಾರಿಗೊಳಿಸಲಾಗಿದೆ. ಆದರೆ ದಿನದಿಂದ ದಿನಕ್ಕೆ ಸೋಂಕು ಹರಡುತ್ತಿರುವುದು ಹೆಚ್ಚಾಗುತ್ತಿರುವುದರಿಂದ ಲಾಕ್‍ಡೌನ್ ಮುಂದುವರೆಸಲು ಸದ್ಯ ಚಿಂತನೆ ನಡೆಸಲಾಗುತ್ತಿದೆ. ಈ ಕುರಿತಾಗಿ ಇಂದು ಪ್ರಧಾನಿ ನರೇಂದ್ರ ಮೋದಿ ವಿಪಕ್ಷಗಳ ಜೊತೆ ಸಭೆ ನಡೆಸಿದ್ದಾರೆ.

ದೆಹಲಿಯ ಲೋಕ ಕಲ್ಯಾಣ್ ಮಾರ್ಗ್‍ನಲ್ಲಿರುವ ತಮ್ಮ ನಿವಾಸದಲ್ಲಿ ವಿಡಿಯೋ ಕಾನ್ಫರೆನ್ಸ್ ಮೂಲಕ ಸಭೆ ನಡೆಸಿದ ಪ್ರಧಾನಿ ಮೋದಿ, ಲೋಕಸಭಾ ಮತ್ತು ರಾಜ್ಯಸಭೆಯ ವಿಪಕ್ಷ ನಾಯಕರು ಹಾಗೂ ಸಂಸದೀಯ ನಾಯಕರ ಜೊತೆ ಚರ್ಚೆ ನಡೆಸಿದರು.

ಕೊರೋನಾ ಸೋಂಕು ನಿಯಂತ್ರಣಕ್ಕೆ ಬಾರದೆ ದಿನದಿಂದ ದಿನಕ್ಕೆ ಸೋಂಕಿತರ ಸಂಖ್ಯೆ ಮತ್ತು ಮೃತಪಡುವವರು ಸಂಖ್ಯೆ ಏರಿಕೆಯಾಗುತ್ತಲೇ ಇದೆ. ಏ. 14 ರ ನಂತರವೂ ಲಾಕ್​ಡೌನ್​ ಮುಂದುವರೆಸಬೇಕೇ ಬೇಡವೇ ಎಂಬ ವಿಚಾರವಾಗಿ ಪ್ರಧಾನಿ ಮೋದಿ ಅವರು ಇಂದು ಸರ್ವಪಕ್ಷಗಳ ಸಭೆ ನಡೆಸಿದರು. ಸದ್ಯದ ಪರಿಸ್ಥಿತಿಯಲ್ಲಿ ಲಾಕ್​ಡೌನ್​ ಮುಂದುವರೆಸುವುದು ಅತ್ಯಗತ್ಯ ಎಂದು ಪ್ರಧಾನಿ ಮೋದಿ ಹೇಳಿದ್ದಾರೆ.

ಈ ಬಗ್ಗೆ ಏಪ್ರಿಲ್ 11 ಕ್ಕೆ ಎಲ್ಲಾ ಸಿಎಂಗಳ ಜೊತೆ ಸಭೆ ನಡೆಸಲಾಗುವುದು. ಆ ಬಳಿಕ ಲಾಕ್ ಡೌನ್ ಮುಂದುವರೆಸುವ ಬಗ್ಗೆ ತೀರ್ಮಾನ ಕೈಗೊಳ್ಳಲಾಗುವುದು. ಈಗಾಗಲೇ ಮಹಾರಾಷ್ಟ್ರ, ತೆಲಂಗಾಣ, ಆಂಧ್ರಪ್ರದೇಶ, ಜಾರ್ಖಂಡ್, ಪುದುಚೇರಿ ಸೇರಿ 8 ರಾಜ್ಯಗಳು ಲಾಕ್‍ಡೌನ್ ವಿಸ್ತರಣೆಗೆ ಆಸಕ್ತಿ ತೋರಿದ್ದು ಉಳಿದ ರಾಜ್ಯಗಳ ಅಭಿಪ್ರಾಯವನ್ನು ಮೋದಿ ಅವರು ಸಂಗ್ರಹಿಸಿ ನಿರ್ಧಾರ ತೆಗೆದುಕೊಳ್ಳಲಿದ್ದಾರೆ.

ಹೀಗಾಗಿ ದೇಶದಲ್ಲಿ ಕೊರೊನಾ ಮಟ್ಟಹಾಕಲು ಆರ್ಥಿಕ ವ್ಯವಸ್ಥೆ ಕುಗ್ಗಿ ಹೋಗಿದೆ. ಹೀಗಾಗಿ ಮುಂದಿನ ದಿನಗಳಲ್ಲಿ ಸಂಬಳ ಸಿಗದೇ ಇರುವ ಸಾಧ್ಯತೆ ಕೂಡ ಅಧಿಕವಾಗಿದೆ. ಯಾವುದಕ್ಕೂ ಖರ್ಚು ಕಡಿಮೆ ಮಾಡಿ ಮುಂದಾಗುವ ಸಮಸ್ಯೆಗಳಿಂದ ದೂರವಿರಿ.

ಸುಳ್ಳು ಸುದ್ದಿಗಳ ವಿರುದ್ಧದ ಹೋರಾಟಕ್ಕೆ ದೇಣಿಗೆ ನೀಡಿ ಬೆಂಬಲಿಸಿ
Spread the love

Leave a Reply

Your email address will not be published.

Verified by MonsterInsights