ಏ.5 ರಾತ್ರಿ 9ಗಂಟೆಗೆ 9 ನಿಮಿಷ ಟಾರ್ಚ್ ಹಚ್ಚಿ – ಮೋದಿ ಬೆಳಕಿನ ಸಂದೇಶ

ಕೊರೊನಾ ವೈರಸ್ ಅಟ್ಟಹಾಸ ದಿನೇ ದಿನೇ ಹೆಚ್ಚಾಗುತ್ತಿದ್ದು, ಇಂದು ದೇಶವನ್ನುದ್ದೇಶಿಸಿ ಮೋದಿ ಮಾತನಾಡಿದ್ದಾರೆ. ಇಂದು ಬೆಳಿಗ್ಗೆ 9 ಗಂಟೆಗೆ ವಿಡಿಯೋವೊಂದನ್ನ ಬಿಡುಗಡೆ ಮಾಡಿದ್ದಾರೆ.

ಕೊರೊನಾ ಸೋಂಕು ಹರಡದಂತೆ ನಮ್ಮ ದೇಶದಲ್ಲಿ ನಾನಾ ಕ್ರಮಗಳನ್ನು ಕೈಗೊಳ್ಳಲಾಗಿದೆ. ಇದೇ ಭಾನುವಾರ ಏಪ್ರಿಲ್ 5 ರಂದು ರಾತ್ರಿ 9 ಗಂಟೆಗೆ 9 ನಿಮಿಷ ಎಲ್ಲಾರು ಮನೆಯ ಲೈಟ್ ಆಫ್ ಮಾಡಿ. ಕೈಯಲ್ಲಿ ದೀಪ/ಮೊಬೈಲ್ ಟಾರ್ಚ್/ ಟಾರ್ಚ್/ಮೇಣದ ಬತ್ತಿ ಹಿಡಿಯಬೇಕು. ಆ ಮೂಲಕ ನಮ್ಮ ಶಕ್ತಿ ಪ್ರದರ್ಶನ ಮಾಡಿ ಎಂದು 130 ಕೋಟಿ ಭಾರತೀಯರಲ್ಲಿ ಮನವಿ ಮಾಡಿಕೊಂಡಿದ್ದಾರೆ.

ಈ ವೇಳೆ ಸಾಮಾಜಿಕ ಅಂತರ ಕಾಯ್ದುಕೊಳ್ಳುವುದು ಮುಂದುವರೆಯುತ್ತದೆ ಎಂದು ಹೇಳಿದ್ದಾರೆ. ಆದರೆ ಏಪ್ರಿಲ್ 14 ರಂದು ಲಾಕ್ ಡೌನ್ ಅಂತ್ಯಗೊಳ್ಳುವ ಬಗ್ಗೆ ಯಾವುದೇ ಮಾಹಿತಿಯನ್ನು ಮೋದಿಜಿ ಹೇಳಿಲ್ಲ.

https://twitter.com/narendramodi/status/1245916540819525635

ಸುಳ್ಳು ಸುದ್ದಿಗಳ ವಿರುದ್ಧದ ಹೋರಾಟಕ್ಕೆ ದೇಣಿಗೆ ನೀಡಿ ಬೆಂಬಲಿಸಿ
Spread the love

Leave a Reply

Your email address will not be published.

Verified by MonsterInsights