ಐಎಂಎ ಆರೋಪಿ ಮನ್ಸೂರ್ ಖಾನ್ ಪರಾರಿಗೆ ಸಹಾಯ ಮಾಡಿದವನಿಗೆ ಜೈಲಿನಿಂದ ಅದ್ದೂರಿ ಸ್ವಾಗತ…!

ಐಎಂಎ ಬಹುಕೋಟಿ ವಂಚನೆ ಪ್ರಕರಣಕ್ಕೆ ಸಂಬಂಧಿಸಿದಂತೆ ಐಎಂಎ ಜ್ಯುವೆಲ್ಸ್ ಮಾಲೀಕ ಮನ್ಸೂರ್ ಖಾನ್ ನನ್ನ ವಶಕ್ಕೆ ಪಡೆದು ವಿಚಾರಣೆ ನಡೆಸಲಾಗುತ್ತಿದೆ. ಈ ಪ್ರಕರಣದಲ್ಲಿ ಭಾಗಿಯಾದವನಿಗೆ ಸದ್ಯ ರಾಜ ಮರ್ಯಾದೆ ನೀಡಲಾಗುತ್ತಿದೆ. ಹೌದು. ಐಎಂಎ ಜ್ಯುವೆಲ್ಸ್ ವಂಚನೆ ಪ್ರಕರಣದಲ್ಲಿ ಅಮಾಯಕರ ಹಣ ತಿಂದವನಿಗೆ ಜೈಲಿನಿಂದ ಹೊರಬರುತ್ತಿದ್ದಂತೆ ಅದ್ದೂರಿ ಸ್ವಾಗತ ನೀಡಲಾಗಿದೆ.

ಐಎಂಎ ಕೇಸಲ್ಲಿ ಮುಖ್ಯ ಆರೋಪಿ ಆಗಿರುವ ಐಎಂಎ ಜ್ಯುವೆಲ್ಸ್ ಮಾಲೀಕ ಮನ್ಸೂರ್ ಖಾನ್ ಪರಾರಿಯಾಗಲು ಮುಜಾಹಿದ್ದೀನ್ ಸಹಾಯ ಮಾಡಿದ್ದನು. ಈ ಹಿನ್ನೆಲೆಯಲ್ಲಿ ಆತನನ್ನು ಬಂಧಿಸಲಾಗಿತ್ತು. ಆದರೆ ಈಗ ಮುಜಾಹಿದ್ದೀನ್ ಜಾಮೀನಿನ ಮೇಲೆ ಬಿಡುಗಡೆಯಾಗಿದ್ದಾನೆ. ಈತನನ್ನು ಬೆಂಬಲಿಗರು ಪಟಾಕಿ ಸಿಡಿಸಿ, ಹಾರ ಹಾಕಿ ಸ್ವಾಗತಿಸಿದ್ದಾರೆ. ಬೆಂಗಳೂರಿನ ಫ್ರೆಜರ್‍ಟೌನ್ ನಲ್ಲಿ ಘಟನೆ ನಡೆದಿದ್ದು, ತಡವಾಗಿ ಬೆಳಕಿಗೆ ಬಂದಿದೆ.

ಇದೇ ತಿಂಗಳ 11ರಂದು ಮುಜಾಹಿದ್ದೀನ್‍ಗೆ ಹೈಕೋರ್ಟ್ ಏಕಸದಸ್ಯ ಪೀಠ ಜಾಮೀನು ನೀಡಿತ್ತು. ಮನ್ಸೂರ್ ಖಾನ್ ಎಸ್ಕೇಪ್ ಆಗಲು ಸಹಾಯ ಮಾಡಿದ್ದ ಮುಜಾಯಿದ್ದೀನ್ ಮೇಲೆ ಎಸ್‍ಐಟಿ ರೇಡ್ ಮಾಡಿ ಅರೆಸ್ಟ್ ಮಾಡಿತ್ತು.

 

ಸುಳ್ಳು ಸುದ್ದಿಗಳ ವಿರುದ್ಧದ ಹೋರಾಟಕ್ಕೆ ದೇಣಿಗೆ ನೀಡಿ ಬೆಂಬಲಿಸಿ
Spread the love

Leave a Reply

Your email address will not be published.

Verified by MonsterInsights