ಐಟಿ ದಾಳಿಯಲ್ಲಿ ಸಿಕ್ತು ಒಟ್ಟು 4.5 ಕೋಟಿ ರೂ. ನಗದು : ಕೋಟಿ ಕೋಟಿ ತೆರಿಗೆ ಕಟ್ಟದ ಪರಮೇಶ್ವರ್

ಆದಾಯ ತೆರಿಗೆ ಇಲಾಖೆ ದಾಳಿ ವೇಳೆ ಮಾಜಿ ಡಿಸಿಎಂ ಜಿ.ಪರಮೇಶ್ವರ್ ಅವರ ನಿವಾಸದಲ್ಲಿ ಕಂತೆ ಕಂತೆ ಹಣ ಪತ್ತೆಯಾಗಿದೆ. ಕಾಂಗ್ರೆಸ್ ಮುಖಂಡ ಪರಮೇಶ್ವರ್ ಅವರ ಸದಾಶಿವನಗರ ನಿವಾಸದಲ್ಲಿಯೇ 70 ಲಕ್ಷ ರೂ. ನಗದು ಪತ್ತೆಯಾಗಿದೆ. ಜೊತೆಗೆ ಆಪ್ತ, ನೆಲಮಂಗಲ ಪುರಸಭೆ ಸದಸ್ಯ ಶಿವಕುಮಾರ್ ನಿವಾಸದಲ್ಲಿ 1.8 ಕೋಟಿ ರೂ. ನಗದು ಐಟಿ ಅಧಿಕಾರಿಗಳಿಗೆ ಸಿಕ್ಕಿದೆ.

ಮಾಜಿ ಉಪಮುಖ್ಯಮಂತ್ರಿ ಪರಮೇಶ್ವರ್ ಒಡೆತನದ ಸಿದ್ಧಾರ್ಥ್ ಮೆಡಿಕಲ್ ಕಾಲೇಜು ಗ್ರಾಮ ಪಂಚಾಯಿತಿಗೆ ಪಾವತಿಸಬೇಕಿದ್ದ 45,26,688 ರೂ. ತೆರಿಗೆ ಹಣವನ್ನು ಬಾಕಿ ಉಳಿಸಿಕೊಂಡಿದೆ.

ನೆಲಮಂಗಲ ತಾಲೂಕಿನ ಕುಲವನಹಳ್ಳಿ ಗ್ರಾಮ ಪಂಚಾಯತಿಗೆ ವ್ಯಾಪ್ತಿಯಲ್ಲಿ ಇರುವ ಮೆಡಿಕಲ್ ಕಾಲೇಜ್ ಗ್ರಾಮ ಪಂಚಾಯಿತಿಗೆ ಲಕ್ಷ ಲಕ್ಷ ತೆರಿಗೆಯನ್ನು ಕಟ್ಟಬೇಕಿದೆ. ಈ ವಿಚಾರವಾಗಿ ಗ್ರಾಮ ಪಂಚಾಯತಿ ಕಾರ್ಯಾಲಯ ಸಾಕಷ್ಟು ಬಾರಿ ನೋಟಿಸ್ ನೀಡಿದ್ದರೂ ಕಾಲೇಜು ಆಡಳಿತ ಮಂಡಳಿ ತೆರಿಗೆ ಮಾತ್ರ ಕಟ್ಟಿರಲಿಲ್ಲ.

ಈ ಮೆಡಿಕಲ್ ಕಾಲೇಜಿನಲ್ಲಿ ಸೀಟ್ ಬ್ಲಾಕ್ ಮಾಡಿ ಅಕ್ರಮವಾಗಿ ಹಣ ಸಂಗ್ರಹಣೆ ಮಾಡುತ್ತಿದೆ ಎಂಬ ಆರೋಪವು ಕೇಳಿ ಬಂದಿದೆ. ಈ ವಿಚಾರವಾಗಿ ಇಬ್ಬರು ವಿದ್ಯಾರ್ಥಿಗಳು ನಮ್ಮ ಸೀಟ್‍ನ್ನು ಬ್ಲಾಕ್ ಮಾಡಲಾಗಿತ್ತು ಎಂದು ಐಟಿ ಅಧಿಕಾರಗಳ ಮುಂದೆ ಒಪ್ಪಿಕೊಂಡಿದ್ದಾರೆ ಎನ್ನುವ ವಿಚಾರ ತಿಳಿದು ಬಂದಿದೆ.

ಸುಳ್ಳು ಸುದ್ದಿಗಳ ವಿರುದ್ಧದ ಹೋರಾಟಕ್ಕೆ ದೇಣಿಗೆ ನೀಡಿ ಬೆಂಬಲಿಸಿ
Spread the love

Leave a Reply

Your email address will not be published.

Verified by MonsterInsights