ಒಂದೇ ಕಂಪನಿಯ 49 ಸಿಬ್ಬಂದಿಗೆ ಕೊರೊನಾ; ಮೊಬೈಲ್ ತಯಾರಿಕಾ ಘಟಕ ಬಂದ್!

ಪಕ್ಕದ ರಾಜ್ಯ ತಮಿಳುನಾಡಿನಲ್ಲಿ ಕೊರೋನಾ ವೈರಸ್ ಹಾವಳಿ ಹೆಚ್ಚಾಗುತ್ತಲೇ ಇದೆ. ನೋಕಿಯಾ ಫೋನ್ ತಯಾರಿಕಾ ಘಟಕದಲ್ಲಿ ಕೆಲಸ ಮಾಡುತ್ತಿದ್ದ ಸಿಬ್ಬಂದಿಗಳಲ್ಲಿ 49 ಮಂದಿಗೆ ಸೋಂಕು ತಗುಲಿರುವುದು ದೃಢಪಟ್ಟಿರುವುದರಿಂದ ಇಡೀ ಘಟಕವನ್ನು ಸ್ಥಗಿತಗೊಳಿಸಲಾಗಿದೆ.

ತಮಿಳುನಾಡಿನ ಶ್ರೀಪೆರಂಬದೂರಿನಲ್ಲಿರುವ ನೋಕಿಯಾ ಫೋನ್ ತಯಾರಿಕಾ ಘಟಕದಲ್ಲಿನ 49 ಸಿಬ್ಬಂದಿಗಳಲ್ಲಿ ಸೋಂಕು ಕಾಣಿಸಿಕೊಂಡಿದ್ದು, ಇದೇ ಕಾರಣಕ್ಕೆ ಇಡೀ ಘಟಕವನ್ನು ಸ್ಥಗಿತಗೊಳಿಸಲಾಗಿದೆ ಎಂದು ಹೇಳಲಾಗಿದೆ. ಕಳೆದ ವಾರವಷ್ಟೇ ಶ್ರೀಪೆರಂಬದೂರಿನಲ್ಲಿರುವ ತಯಾರಿಕ ಘಟಕವನ್ನು ಸಿಮೀತ  ಸಿಬ್ಬಂದಿ, ಸಾಮಾಜಿಕ ಅಂತರ ಹಾಗೂ ಅಗತ್ಯ ಸುರಕ್ಷತಾ ಕ್ರಮಗಳೊಂದಿಗೆ ಕಾರ್ಯಾರಂಭ ಮಾಡಲಾಗಿತ್ತು. ಆದರೆ ನೌಕರರಲ್ಲಿ ಮತ್ತೆ ಸೋಂಕು ಪತ್ತೆಯಾಗಿರುವುದರಿಂದ ಸಂಪೂರ್ಣ ಕಾರ್ಯಾಚರಣೆಯನ್ನು ಸ್ಥಗಿತಗೊಳಿಸಲಾಗಿದೆ ಎಂದು ನೋಕಿಯಾ ಕಂಪನಿ ತಿಳಿಸಿದೆ.

ಇದೇ ವೇಳೆ ಅಗತ್ಯ ಸುರಕ್ಷತಾ ಕ್ರಮಗಳೊಂದಿಗೆ ಶೀಘ್ರದಲ್ಲೇ ಘಟಕ ಮತ್ತೆ ಕಾರ್ಯಾರಂಭ ಮಾಡಲಿದೆ ಎಂದು ಕಂಪನಿ ತಿಳಿಸಿದೆ. ಪ್ರಸ್ತುತ ಸಂಸ್ಥೆಯಲ್ಲಿ ಎಷ್ಟು ಸಿಬ್ಬಂದಿಗೆ ಸೋಂಕು ವ್ಯಾಪಿಸಿದೆ ಎಂಬುದನ್ನು ಸಂಸ್ಥೆ ತಿಳಿಸಿಲ್ಲ. ಆದರೆ 49 ಸಿಬ್ಬಂದಿಗಳಲ್ಲಿ ಸೋಂಕು ಕಾಣಿಸಿಕೊಂಡಿದೆ ಎಂದು  ಮೂಲಗಳು ತಿಳಿಸಿವೆ.

ಇತ್ತೀಚೆಗಷ್ಟೇ ದೆಹಲಿಯಲ್ಲಿ ಕಾರ್ಯಾರಂಭ ಮಾಡಿದ್ದ ಒಪ್ಪೊ ಮೊಬೈಲ್ ತಯಾರಿಕಾ ಕಂಪನಿಯಲ್ಲಿ ಕೂಡ ಕನಿಷ್ಠ 9 ನೌಕರರಲ್ಲಿ ಕೊರೋನಾ ವೈರಸ್ ಪತ್ತೆಯಾಗಿದ್ದರಿಂದ ಆ ಘಟಕ ತನ್ನ ಕಾರ್ಯಾಚರಣೆಯನ್ನು ಸ್ಥಗಿತಗೊಳಿಸಿತ್ತು.

ಸುಳ್ಳು ಸುದ್ದಿಗಳ ವಿರುದ್ಧದ ಹೋರಾಟಕ್ಕೆ ದೇಣಿಗೆ ನೀಡಿ ಬೆಂಬಲಿಸಿ
Spread the love

Leave a Reply

Your email address will not be published.

Verified by MonsterInsights