ಕನ್ನಡದ ಖ್ಯಾತ ಕವಿ ಕೆ ಎಸ್ ನಿಸಾರ್ ಅಹಮದ್ ವಿಧಿವಶ

ಕನ್ನಡದ ಖ್ಯಾತ ಕವಿ, ನಿತ್ಯೋತ್ಸವ ಕವನ ಸಂಕಲನದಿಂದ ಕರ್ನಾಟಕದ ಮನೆಮಾತಾಗಿದ್ದ ಕೆ ಎಸ್ ನಿಸಾರ್ ಅಹಮದ್ ಅವರು ಮೇ 3, 2020 ರಂದು ನಿಧನರಾಗಿದ್ದಾರೆ. 84 ವರ್ಷದ ನಿಸಾರ್ ಅಹಮದ್ ಅವರು ಅನಾರೋಗ್ಯದಿಂದ ಬಳಲುತ್ತಿದ್ದರು.

ಬೆಂಗಳೂರು ಜಿಲ್ಲೆಯ ದೇವನಹಳ್ಳಿಯಲ್ಲಿ ಫೆಬ್ರವರಿ 5, 1936ರಲ್ಲಿ ಜನಿಸಿದ್ದ ಕೆ ಎಸ್ ನಿಸಾರ್ ಅಹಮದ್ ಅವರು 1956ರಲ್ಲಿ ಭೂವಿಜ್ಞಾನದಲ್ಲಿ ಸ್ನಾತಕೋತ್ತರ ಪದವಿ ಪಡೆದರು. 1994ರ ವರೆಗೆ ವಿವಿಧ ಸರಕಾರಿ ಕಾಲೇಜುಗಳಲ್ಲಿ ಅಧ್ಯಾಪಕ ಹಾಗು ಪ್ರಾಧ್ಯಾಪಕರಾಗಿ ಕೆಲಸ ಮಾಡಿ ನಿವೃತ್ತರಾದರು.

ನಿತ್ಯೋತ್ಸವ , ಮನಸು ಗಾಂಧಿ ಬಜಾರು, ನೆನೆದವರ ಮನದಲ್ಲಿ, ಸುಮಹೂರ್ತ, ಸಂಜೆ ಐದರ ಮಳೆ, ನಾನೆಂಬ ಪರಕೀಯ, ಸ್ವಯಂ ಸೇವೆಯ ಗಿಳಿಗಳು, ಅನಾಮಿಕ ಆಂಗ್ಲರು, ನವೋಲ್ಲಾಸ, ಆಕಾಶಕ್ಕೆ ಸರಹದ್ದುಗಳಿಲ್ಲ, ಅರವತ್ತೈದರ ಐಸಿರಿ ನಿಸಾರ್ ಅವರ ಪ್ರಮುಖ ಕವನಸಂಕಲನಗಳು.

ಶೇಕ್ಸ್ಪಿಯರ್ ನಾಟಕಗಳನ್ನು ಕನ್ನಡಕ್ಕೆ ತರುವಲ್ಲಿ ಪ್ರಮುಖ ಪಾತ್ರ ವಹಿಸಿದ್ದ ನಿಸಾರ್ ಅವರು ಕರ್ನಾಟಕ ಸಾಹಿತ್ಯ ಅಕಾಡೆಮಿ ಪ್ರಶಸ್ತಿ, ಗೊರೂರು ಪ್ರಶಸ್ತಿ, ಅನಕೃ ಪ್ರಶಸ್ತಿ, ಕೆಂಪೇಗೌಡ ಪ್ರಶಸ್ತಿ, ಪಂಪ ಪ್ರಶಸ್ತಿ, ರಾಜ್ಯೋತ್ಸವ ಪ್ರಶಸ್ತಿ, ನಾಡೋಜ ಪ್ರಶಸ್ತಿ, ಅರಸು ಪ್ರಶಸ್ತಿಗಳಿಗೂ ನಿಸಾರ್ ಅಹಮದ್ ಭಾಜನರಾಗಿದ್ದರು.

2006 ರಲ್ಲಿ ಡಿಸೆಂಬರಿನಲ್ಲಿ ಶಿವಮೊಗ್ಗದಲ್ಲಿ ನಡೆದ 73ನೇ ಕನ್ನಡ ಸಾಹಿತ್ಯ ಸಮ್ಮೇಳನದ ಅಧ್ಯಕ್ಷ’ರಾಗಿ ಸಮ್ಮೇಳನವನ್ನು ಯಶಸ್ವಿಯಾಗಿ ನಡೆಸಿಕೊಟ್ಟಿದ್ದರು.

ಸುಳ್ಳು ಸುದ್ದಿಗಳ ವಿರುದ್ಧದ ಹೋರಾಟಕ್ಕೆ ದೇಣಿಗೆ ನೀಡಿ ಬೆಂಬಲಿಸಿ
Spread the love

Leave a Reply

Your email address will not be published.

Verified by MonsterInsights