ಕರ್ನಾಟಕದಲ್ಲಿ ಮಳೆ ಆರ್ಭಟ; ಪಶ್ಚಿಮಘಟ್ಟ ತಪ್ಪಲಿನಲ್ಲಿ ಕಂಪ್ಲೀಟ್‌ ಅಲರ್ಟ್‌!

ಕಳೆದ ಕೆಲವು ದಿನಗಳಿಂದ ರಾಜ್ಯದ ಮಲೆನಾಡು ಮತ್ತು ದಕ್ಷಿಣ ಕನ್ನಡ ಜಿಲ್ಲೆಗಳಲ್ಲಿ ಭಾರಿ ಮಳೆಯಾಗುತ್ತಿರುವ ಹಿನ್ನಲೆಯಲ್ಲಿ 7 ಜಿಲ್ಲೆಗಳಲ್ಲಿ ರೆಡ್​ ಅಲರ್ಟ್​ ಘೋಷಿಸಲಾಗಿದೆ. ಜನಜೀವನ ಸಂಪೂರ್ಣ ಅಸ್ತವ್ಯಸ್ಥಗೊಂಡಿದ್ದು, ಅಪಾರ ಪ್ರಮಾಣದ ಹಾನಿ ಉಂಟಾಗಿದೆ.. ಬೆಳೆ ಹಾನಿಯಲ್ಲದೆ, ಜೀವ ಹಾನಿಯು ಉಂಟಾಗಿದೆ.. ಸರಕಾರದ ಸಹಾಯ ಹಸ್ತ ಸಂಸ್ರಸ್ಥರಿಗೆ ಸಿಗುತ್ತಿಲ್ಲ ಎಂಬ ಕೂಗು ಜೋರಾಗಿ ಕೇಲೀಬರುತ್ತಿದೆ..

ಈ ಮಧ್ಯ ಮಲೆನಾಡು ಪ್ರದೇಶಗಳಾದ ಚಿಕ್ಕಮಗಳೂರು, ಶಿವಮೊಗ್ಗ ಮತ್ತು ಹಾಸನ, ಉತ್ತರ ಕನ್ನಡ, ದಕ್ಷಿಣ ಕನ್ನಡ ಜಿಲ್ಲೆಗಳಲ್ಲಿ ಆ.13ರ ವರೆಗೂ ಮಳೆ ಆರ್ಭಟ ಮುಂದುವರೆಯಲಿದೆ ಎಂದು ಹವಾಮಾನ ಇಲಾಖಾ ತಿಳಿಸಿದೆ. ಮಂಗಳವಾರ ಕರಾವಳಿ ಭಾಗದಲ್ಲಿ ಮಳೆಯ ಆರ್ಭಟ ಕಡಿಮೆಯಾಗಲಿದ್ದು ಅಂದು ಆರೆಂಜ್ ಅಲರ್ಟ್​ ಹಾಗೂ ಬುಧವಾರ ಮತ್ತು ಗುರುವಾರದಂದು ಯೆಲ್ಲೋ ಅಲರ್ಟ್​ ಘೋಷಿಸಿಲಾಗಿದೆ.

ಕೊಡಗಿನಲ್ಲಿ ಭಾರೀ ಮಳೆಯಾಗುತ್ತಿರುವುದರಿಂದ ಶ್ರೀರಂಗಪಟ್ಟಣದ ಕೆಆರ್​ಎಸ್​ ಜಲಾಶಯಕ್ಕೆ ಭಾರೀ ಪ್ರಮಾಣದ ನೀರು ಹರಿದು ಬರುತ್ತಿದೆ. ಆಣೆಕಟ್ಟೆಯಿಂದಲೂ ನೀರನ್ನ ಬಿಡಲಾಗುತ್ತಿದೆ. ನದಿ ದಡದಲ್ಲಿರುವವರಿಗೆ ಎಚ್ಚರದಿಂದ ಇರಿಸಲಾಗಿದೆ.

ಸಾವರ್ಜನಿಕರಿಗೆ ಈ ಪ್ರಧೇಶಗಳಲ್ಲಿ ಬರದಂತೆ ನಿರ್ಬಂಧ ವಿಧಿಸಲಾಗಿದೆ. ಮಂಗಳೂರು ಮತ್ತು ಕಾರವಾದಲ್ಲಿ ಸಮುದ್ರದಲ್ಲಿ 4 ಮೀಟರ್ ಎತ್ತರದ ಅಲೆಗಳು ಕಂಡು ಬರಲಿವೆ. ಮೀನುಗಾರರಿಗೆ ಸಮುದ್ರಕ್ಕಿಳಿಯದಂತೆ ಎಚ್ಚರ ನೀಡಲಾಗಿದೆ. ಮುಂದಿನ ಎರಡೂ ದಿನಗಳಲ್ಲಿ ಒಳನಾಡಲ್ಲಿ ಕಡಿಮೆ ಮಳೆ ಆಗಲಿದ್ದು ಯೆಲ್ಲೋ ಅಲರ್ಟ್​ ಘೋಷಿಸಲಾಗಿದೆ.

ಶ್ರೀರಂಗಪಟ್ಟಣದ ಬಲಮುರಿ, ಎಡಮುರಿ ಶ್ರೀರಂಗನಾಥ ಸ್ನಾನಘಟ್ಟ, ಗೆಂಡೆಹೊಸಹಳ್ಳಿ ಪಕ್ಷಿ ಧಾಮ, ವೆಲ್ಲಸ್ಲಿ ಸೇತುವೆ. ಗೋಸಾಯಿ ಘಾಟ್​, ಮುತ್ತತ್ತಿ ಸೇರಿದಂತೆ ನದಿ ಹರಿಯುವ ಪ್ರಮುಖಸ ಸ್ಥಳಗಳಲ್ಲಿ ಬಿಗಿ ಭದ್ರತೆ ಕೈಗೊಳ್ಳಲಾಗಿದೆ.

ಇದೇ ಸಂದರ್ಭದಲ್ಲಿ ಕೃಷ್ಟಾ ಕೊಳ್ಳದಲ್ಲಿ ಅಪಾರ ಪ್ರಮಾಣದ ಮಳೆಯಾಗುತ್ತಿದ್ದು ಜಲಾಶಯಗಳಿಂದ ಬಾರಿ ಪ್ರಮಾಣದ ನೀರನ್ನು ಹೊರ ಬಿಡಲಾಗುತ್ತಿದೆ, ಇನ್ನು ಹೆಚ್ಚಿನ ನೀರು ಹೊರಬಿಡುವ ಸಾಧ್ಯತೆ ಇದ್ದು ಕೆಳಮಟ್ಟದಲ್ಲಿ ವಾಸಿಸುವವರು ಎಚ್ಚರಿಕೆಯಿಂದ ಇರಬೇಕೇಂದು ಸೂಚಿಸಲಾಗಿದೆ…

ಸುಳ್ಳು ಸುದ್ದಿಗಳ ವಿರುದ್ಧದ ಹೋರಾಟಕ್ಕೆ ದೇಣಿಗೆ ನೀಡಿ ಬೆಂಬಲಿಸಿ
Spread the love

Leave a Reply

Your email address will not be published.

Verified by MonsterInsights