ಕರ್ನಾಟಕದ ಇಬ್ಬರು ಕೇಂದ್ರ ಸಚಿವರು ಯಡಿಯೂರಪ್ಪರನ್ನು ಮುಗಿಸಲು ಪ್ರಯತ್ನಿಸುತ್ತಿದ್ದಾರೆ – ಯತ್ನಾಳ್

ಕರ್ನಾಟಕದ ಇಬ್ಬರು ಕೇಂದ್ರ ಸಚಿವರು ಯಡಿಯೂರಪ್ಪ ಅವರನ್ನು ಮುಗಿಸಲು ಪ್ರಯತ್ನಿಸುತ್ತಿದ್ದಾರೆ ಎಂದು ಹೇಳುವ ಮೂಲಕ ರಾಜ್ಯ ರಾಜಕೀಯದಲ್ಲಿ ಹೊಸ ಸಂಚಲ ಮೂಡಿಸಿದ್ದಾರೆ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ .

ಹೌದು.. ಮಮತಾ ಬ್ಯಾನರ್ಜಿ ಪ್ರಧಾನಿ ಭೇಟಿಗೆ ಅವಕಾಶ ಕಲ್ಪಿಸಲಾಗುತ್ತಿದೆ. ಆದರೆ ರಾಜ್ಯದ ಸಚಿವರಿಬ್ಬರ ಕುತಂತ್ರದಿಂದ ಯಡಿಯೂರಪ್ಪ ಭೇಟಿಗೆ ಅವಕಾಶ ನಿರಾಕರಿಸಲಾಗುತ್ತದೆ ಎಂದು ಅಸಮಾಧಾನ ವ್ಯಕ್ತಪಡಿಸಿದರು.

ನಗರದಲ್ಲಿಂದು ಸುದ್ದಿಗಾರೊಂದಿಗೆ ಮಾತನಾಡಿದ ಯಾತ್ನಾಳ್,  ಪ್ರವಾಹ ಸಂತ್ರಸ್ತರ ಬಗ್ಗೆ ನಾನು ಧ್ವನಿ ಎತ್ತದಿದ್ದರೆ ಸಿಎಂ ಬಿ ಎಸ್. ಯಡಿಯೂರಪ್ಪ 15 ದಿನದಲ್ಲಿ ರಾಜೀನಾಮೆ ನೀಡುವ ಪರಿಸ್ಥಿತಿ ಎದುರಾಗುತಿತ್ತು ಎಂದು ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಹೊಸ ಬಾಂಬ್ ಸಿಡಿಸಿದ್ದಾರೆ.

ಬಿಎಸ್‍ವೈ ಬಗ್ಗೆ ನಿಮಗೆ ಅಸಮಾಧಾವಿದ್ದರೆ 76 ವರ್ಷವಾಗಿದೆ ಎಂದು ಕರೆಯಿಸಿ ರಾಜೀನಾಮೆ ಪಡೆದುಕೊಳ್ಳಲಿ. ಅನಂತಕುಮಾರ್ ಮತ್ತು ಯಡಿಯೂರಪ್ಪ ಈ ಹಿಂದೆ ಜಗಳವಾಡುತ್ತಿದ್ದರು. ಆದರೆ ಪಕ್ಷ, ಕರ್ನಾಟಕ, ದೇಶದ ಹಿತ ಬಂದಾಗ ಒಗ್ಗೂಡುತ್ತಿದ್ದರು. ಆದರೆ ಈಗ ರಾಜ್ಯದಲ್ಲಿ ನಡೆಯುತ್ತಿರುವುದೇ ಬೇರೆ ಎಂದು ಕಳವಳ ವ್ಯಕ್ತಪಡಿಸಿದರು.

ಶಿಸ್ತು ಉಲ್ಲಂಘಿಸದ ನಾನು ಶೋಕಾಸ್ ನೋಟಿಸಿಗೆ ಉತ್ತರ ನೀಡುವುದಿಲ್ಲ. ಆದ್ದರಿಂದ ನಾನು ನನ್ನ ಅಭಿಪ್ರಾಯ ವ್ಯಕ್ತಪಡಿಸಲು ಅವಕಾಶ ನೀಡುವಂತೆ ಪ್ರಧಾನಿ ನರೇಂದ್ರ ಮೋದಿ, ಅಮಿತ್ ಶಾ ಮತ್ತು ಜೆ.ಪಿ. ನಡ್ಡಾ ಅವರಿಗೆ ಪತ್ರ ಬರೆದಿದ್ದೇನೆ. ಪ್ರಧಾನಿ ಬಳಿ ರಾಜ್ಯದ ಜನರ ಭಾವನೆ ಹೇಳಿಕೊಳ್ಳಲು ನಾನೇನೂ ಹೆದರಲ್ಲ. ನಾನು ಹೇಳಿಕೆ ನೀಡಿದ ಮೇಲೆ ಇಬ್ಬರು ಸಚಿವರು ದೆಹಲಿಗೆ ಹೋಗಿದ್ದರು. ಅವರು ಪ್ರವಾಹ ಪರಿಹಾರ ತರಲು ಹೋಗಿರಲಿಲ್ಲ. ಆದರೆ ನನಗೆ ನೋಟಿಸ್ ಕೊಡಿಸಲು ಹೋಗಿದ್ದರು. ಇಂಥ ಚಾಡಿಕೋರ ಸಚಿವರಿಂದ ರಾಜ್ಯದಲ್ಲಿ ಬಿಜೆಪಿ ಹಾಳಾಗುತ್ತಿದೆ ಎಂದು ಗುಡುಗಿದರು.

 

ಸುಳ್ಳು ಸುದ್ದಿಗಳ ವಿರುದ್ಧದ ಹೋರಾಟಕ್ಕೆ ದೇಣಿಗೆ ನೀಡಿ ಬೆಂಬಲಿಸಿ
Spread the love

Leave a Reply

Your email address will not be published.

Verified by MonsterInsights