ಕಾಂಗ್ರೆಸ್‌ ಆಡಳಿತ ರಾಜ್ಯಗಳಲ್ಲಿ ಸಿಎಬಿ ಜಾರಿ ಇಲ್ಲ – ಎಎನ್‌ಐ ವರದಿ

ಪಶ್ಚಿಮ ಬಂಗಾಳ, ಪಂಜಾಬ್‌ ಮತ್ತು ಕೇರಳದಲ್ಲಿ ಸಿಎಬಿ ಜಾರಿಗೊಳಿಸುವುದಿಲ್ಲ ಎಂದು ಆ ರಾಜ್ಯದ ಮುಖ್ಯಮಂತ್ರಿಗಳು ಹೇಳಿದ ಬೆನ್ನಲೇ ಕಾಂಗ್ರೆಸ್‌ ಆಡಳಿತದ ಮಧ್ಯಪ್ರದೇಶ, ಮಹಾರಾಷ್ಟ್ರ ಮತ್ತು ಛತ್ತೀಸ್‌ಘಡದಲ್ಲಿ ಸಿಎಬಿ ಜಾರಿ ಇಲ್ಲ ಎಂದು ಘೋಷಿಸಿದ್ದಾರೆ ಎಂದು ಸುದ್ದಿ ಸಂಸ್ಥೆ ಎಎನ್‌ಐ ವರದಿ ಮಾಡಿದೆ.

ಎರಡೂ ಸದನಗಳಲ್ಲಿ ಅಂಗೀಕಾರಗೊಂಡು, ರಾಷ್ಟ್ರಪತಿಗಳಿಂದ ಸಹಿ ಪಡೆದು ಕಾಯ್ದೆಯಾಗಿರುವ ಸಿಎಬಿ ವಿರುದ್ಧ ಈಶಾನ್ಯ ರಾಜ್ಯಗಳು ಸೇರಿದಂತೆ ದೇಶಾದ್ಯಂತ ವಿರೋಧ ವ್ಯಕ್ತವಾಗಿದೆ. ಪ್ರಮುಖ ವಿರೋಧ ಪಕ್ಷಗಳಾದ ಕಾಂಗ್ರೆಸ್‌, ಟಿಎಂಸಿ, ಎನ್‌ಸಿಪಿ, ಸಿಪಿಐ, ಸಿಪಿಐ(ಎಂ), ಡಿಎಂಕೆ, ಟಿ.ಎಸ್‌.ಆರ್‌, ಎಎಪಿ ಸೇರಿದಂತೆ ಹಲವು ಪಕ್ಷಗಳು ಇದನ್ನು ವಿರೋಧಿಸಿವೆ.

ಈ ಹಿನ್ನೆಲೆಯಲ್ಲಿ ಮಹಾರಾಷ್ಟ್ರದ ಸಚಿವರಾದ ಬಾಲಸಾಹೇಬ್‌ ಥೋರಟ್‌ರವರು ನಮ್ಮ ಕಾಂಗ್ರೆಸ್‌ ಪಕ್ಷದ ನಿಲುವನ್ನು ನಾವು ಎತ್ತಿಹಿಡಿಯುತ್ತೇವೆ. ಮಹಾರಾಷ್ಟ್ರದಲ್ಲಿ ಸಿಎಬಿ ಜಾರಿಯಾಗಲು ಬಿಡುವುದಿಲ್ಲ ಎಂದಿದ್ದಾರೆ.

ಅದೇ ರೀತಿ ಮಧ್ಯಪ್ರದೇಶದ ಮುಖ್ಯಮಂತ್ರಿ ಕಮಲ್‌ ನಾಥ್‌ರವರು ನಮ್ಮ ಕೇಂದ್ರ ಕಾಂಗ್ರೆಸ್‌ನ ನಿಲುವಿಗಿಂತ ರಾಜ್ಯದ ನಿಲುವು ಬೇರೆಯಾಗಿರುವುದಿಲ್ಲ. ಹಾಗಾಗಿ ಸಿಎಬಿ ಜಾರಿಗೆ ನಮ್ಮ ಸಮ್ಮತವಿಲ್ಲ ಎಂದಿದ್ದಾರೆ.

ಛತ್ತೀಸ್‌ಘಡದ ಮುಖ್ಯಮಂತ್ರಿ ಭೂಪೇಶ್ ಭಾಘೆಲ್‌ರವರು ಸಹ ಆಲ್‌ ಇಂಡಿಯಾ ಕಾಂಗ್ರೆಸ್‌ ಯಾವ ನಿಲುವು ತೆಗೆದುಕೊಳ್ಳುತ್ತದೆಯೋ ಅದನ್ನು ನಾವು ಪಾಲಿಸುತ್ತೇವೆ ಎಂದಿದ್ದಾರೆ.

 

ಸುಳ್ಳು ಸುದ್ದಿಗಳ ವಿರುದ್ಧದ ಹೋರಾಟಕ್ಕೆ ದೇಣಿಗೆ ನೀಡಿ ಬೆಂಬಲಿಸಿ
Spread the love

Leave a Reply

Your email address will not be published.

Verified by MonsterInsights