ಕಾವೇರಿ ಪಕ್ಕದಲ್ಲೇ ಹರಿದರು ಕುಡಿಯುವ ನೀರಿಗೆ ಹಾಹಾಕಾರ : ಇವರ ಗೋಳು ಕೇಳೋರ್ಯಾರು?

ಕೊಡಗು ಜಿಲ್ಲೆಯ ಸೋಮವಾರಪೇಟೆ ತಾಲ್ಲೂಕಿನ ಕೂಡಿಗೆ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಕಳೆದ ಮೂರು ತಿಂಗಳುಗಳಿಂದ ಶುದ್ಧ ಕುಡಿಯುವ ನೀರಿನ ಸಮಸ್ಯೆ ಉಲ್ಬಣಗೊಳ್ಳುತ್ತಿದೆ. ಸಮರ್ಪಕ ನಿರ್ವಹಣೆ ಇಲ್ಲದೇ ಶುದ್ಧ ನೀರಿನ ಘಟಕ ಮೂರು ತಿಂಗಳುಗಳಿಂದ ಸ್ಥಗಿತಗೊಂಡಿದೆ. ಈ ಕುರಿತು ಗ್ರಾಮಸ್ಥರು ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳಿಗೆ ಮತ್ತು ಜನ ಪ್ರತಿನಿಧಿಗಳಿಗೆ ಬೇಜವಾಬ್ದಾರಿ ಉತ್ತರವ ನೀಡುತ್ತಿದ್ದಾರೆ ಎಂದು ಕೂಡಿಗೆ ಗ್ರಾಮಸ್ಥರು
ಆರೋಪಿಸಿದ್ದಾರೆ.

ಇದೇ ಸಂದರ್ಭದಲ್ಲಿ ಮಾತನಾಡಿದ ಕೂಡಿಗೆ ಗ್ರಾಮ ಪಂಚಾಯಿತಿ ಮಾಜಿ ಉಪಾಧ್ಯಕ್ಷ ಕೆ ಎಸ್ ಕಾಂತರಾಜ್ ಮಾತನಾಡಿ ಕಳೆದ ಎರಡು ವರ್ಷಗಳ ಹಿಂದೆ ಕೂಡಿಗೆಯಲ್ಲಿ ಶುದ್ಧ ಕುಡಿಯುವ ನೀರಿನ ಘಟಕ ಉದ್ಘಾಟನೆಗೊಂಡು ಇಲ್ಲಿಯ ಗ್ರಾಹಕರಿಗೆ ಸಮರ್ಪಕವಾಗಿ ಶುದ್ಧ ಕುಡಿಯುವ ನೀರು ಒದಗಿಸಲಾಗುತಿತ್ತು. ಅದಕ್ಕಾಗಿ ಗ್ರಾಮ ಪಂಚಾಯಿತಿ ವತಿಯಿಂದ ಶುದ್ಧ ಕುಡಿಯುವ ನೀರಿನ ಘಟಕದಲ್ಲಿ ನೀರನ್ನು ಪಡೆಯಲು ಕಾರ್ಡನ್ನು ವಿತರಿಸಲಾಗಿತ್ತು. ಆದರೆ ಸಮರ್ಪಕವಾಗಿ ನೀರು ದೊರಕದ ಕಾರಣ ಗ್ರಾಹಕರು ಕಾರ್ಡನ್ನು ಗ್ರಾಮ ಪಂಚಾಯಿತಿಗೆ ಹಿಂತಿರುಗಿಸಲು ನಿರ್ಧರಿಸಿದ್ದಾರೆ.

ಇನ್ನೇನು ಬೇಸಿಗೆ ಆರಂಭವಾಗಲಿದ್ದು, ನೀರಿನ ಸಮಸ್ಯೆ ಮತ್ತಷ್ಟು ಉಲ್ಜಭಣಗೊಳ್ಳಲಿದೆ. ಕುಡಿಯುವ ನೀರಿನ ಘಟಕದಿಂದ ಕಾರ್ಡನ್ನು 300 ರೂ ಕೊಟ್ಟು ಗ್ರಾಮ ಪಂಚಾಯಿತಿಯಲ್ಲಿ ಕಾರ್ಡು ತೆಗೆದುಕೊಂಡರೂ ಗ್ರಾಹಕರಿಗೆ ಶುದ್ಧ ಕುಡಿಯುವ ನೀರು ದೊರಕುತ್ತಿಲ್ಲ. ಇನ್ನಾದರೂ ಕೂಡಿಗೆ ಗ್ರಾಮ ಪಂಚಾಯಿತಿಯ ಜನಪ್ರತಿನಿಧಿಗಳಾಗಲಿ, ಅಧಿಕಾರಿಗಳಾಗಲಿ ಈ ಶುದ್ಧ ಕುಡಿಯುವ ನೀರಿನ ಘಟಕವನ್ನು ಸರಿಪಡಿಸಿ ಸಾರ್ವಜನಿಕರ ಉಪಯೋಗಕ್ಕೆ ಆದಷ್ಟು ಬೇಗ ಮತ್ತೆ ಸಿಗುವಂತೆ ಮಾಡಬೇಕು ಎಂದು ಆಗ್ರಹಿಸಿದ್ದಾರೆ .

ಸುಳ್ಳು ಸುದ್ದಿಗಳ ವಿರುದ್ಧದ ಹೋರಾಟಕ್ಕೆ ದೇಣಿಗೆ ನೀಡಿ ಬೆಂಬಲಿಸಿ
Spread the love

Leave a Reply

Your email address will not be published.

Verified by MonsterInsights