ಕೆಎಸ್ಆರ್‌ಟಿಸಿ ಬಸ್ಸಿನಲ್ಲಿ ಹೆಣ್ಣು ಮಗುವಿಗೆ ಜನ್ಮ ನೀಡಿದ ತಾಯಿ…!

ಗರ್ಭಿಣಿ ಮಹಿಳೆಯೊಬ್ಬರು ಕೆಎಸ್ಆರ್‌ಟಿಸಿ ಬಸ್ಸಿನಲ್ಲೇ ಹೆಣ್ಣು ಮಗುವಿಗೆ ಜನ್ಮ ನೀಡಿರುವ ಘಟನೆ ಹಾಸನದಲ್ಲಿ ನಡೆದಿದೆ.

ಷಹೀನಾ ಬಸ್ಸಿನಲ್ಲಿ ಮಗುವಿಗೆ ಜನ್ಮ ನೀಡಿದ ಮಹಿಳೆ. ಹುಬ್ಬಳ್ಳಿ ಮೂಲದ ಈಕೆಯನ್ನು ಮಡಿಕೇರಿಯ ಹುಡುಗನೊಂದಿಗೆ ಮದುವೆ ಮಾಡಿಕೊಡಲಾಗಿತ್ತು. ಮಂಗಳವಾರ ಪೋಷಕರ ಜೊತೆ ಬಸ್ಸಿನಲ್ಲಿ ಬರುತ್ತಿದ್ದಾಗ ಹಾಸನದ ಕೆಎಸ್ಆರ್‌ಟಿಸಿ ಬಸ್ ನಿಲ್ದಾಣದ ಬಳಿ ಹೆರಿಗೆ ನೋವು ಕಾಣಿಸಿಕೊಂಡಿದೆ. ತಕ್ಷಣ ಬಸ್ ಚಾಲಕ ಮತ್ತು ನಿರ್ವಾಹಕ ಸ್ವಲ್ಪ ಸಮಯ ಕೆಎಸ್ಆರ್‌ಟಿಸಿ ಬಸ್ ನಿಲ್ದಾಣದಲ್ಲೇ ಬಸ್ ನಿಲ್ಲಿಸಿದ್ದಾರೆ. ಸ್ವಲ್ಪ ಸಮಯದ ನಂತರ ಷಹೀನಾ ಹೆಣ್ಣು ಮಗುವಿಗೆ ಜನ್ಮ ನೀಡಿದ್ದಾರೆ.

ನಂತರ ಅಂಬುಲೆನ್ಸ್ ಗೆ ಕರೆ ಮಾಡಿ ಮಗು ಮತ್ತು ತಾಯಿಯನ್ನು ಹಾಸನದ ಹಿಮ್ಸ್ ಆಸ್ಪತ್ರೆಗೆ ಕಳುಹಿಸಿಕೊಟ್ಟಿದ್ದಾರೆ. ಸದ್ಯ ತಾಯಿ ಮಗು ಆರೋಗ್ಯವಾಗಿದ್ದಾರೆ.

ಸುಳ್ಳು ಸುದ್ದಿಗಳ ವಿರುದ್ಧದ ಹೋರಾಟಕ್ಕೆ ದೇಣಿಗೆ ನೀಡಿ ಬೆಂಬಲಿಸಿ
Spread the love

Leave a Reply

Your email address will not be published.

Verified by MonsterInsights