ಕೆಪಿಸಿಸಿ ಅಧ್ಯಕ್ಷ ಸ್ಥಾನಕ್ಕೆ ಡಿ ಕೆ ಶಿವಕುಮಾರ್ ನೇಮಕ
ಲೋಕಸಭಾ ಚುನಾವಣೆ ಮತ್ತು ಕರ್ನಾಟಕ ವಿಧಾನಸಭಾ ಉಪ ಚುನಾವಣೆಯಲ್ಲಿ ಹೀನಾಯ ಸೋಲುಂಡ ಬಳಿಕ ಕೆಪಿಸಿಸಿ ಅಧ್ಯಕ್ಷ ಸ್ಥಾನಕ್ಕೆ ದಿನೇಶ್ ಗುಂಡೂರಾವ್ ಅವರು ಸೋಲಿನ ಹೊಣೆ ಹೊತ್ತು ರಾಜೀನಾಮೆ ನೀಡಿದ್ದರು. ರಾಜೀನಾಮೆ ನೀಡಿ ತಿಂಗಳುಗಳೇ ಕಳೆದಿದ್ದರೂ ಹೊಸ ಅಧ್ಯಕ್ಷರ ನೇಮಕ ಆಗಿರಲಿಲ್ಲ.
ಡಿಕೆ ಶಿವಕುಮಾರ್ ಅವರನ್ನು ಅಧ್ಯಕ್ಷರನ್ನಾಗಿ ನೇಮಿಸುವಂತೆ ಕಾಂಗ್ರೆಸ್ ಪಡಸಾಲೆಯಲ್ಲಿ ಚರ್ಚೆಯಾಗಿತ್ತು. ಆದರೆ, ಆಗ ತಾನೇ ಡಿಕೆಶಿ ಇಡಿ ತನಿಖೆಗೆ ಒಳಪಟ್ಟಿದ್ದರಿಂದ ಅಧ್ಯಕ್ಷರಾಗಿ ನೇಮಕವಾಗುವುದು ಅನುಮಾನ ಎನ್ನಲಾಗಿತ್ತು. ಎಲ್ಲಾ ಬೆಳವಣಿಗೆಗಳ ಬಳಿಕ ಡಿ.ಕೆ.ಶಿವಕುಮಾರ್ ಅವರನ್ನು ಕೆಪಿಸಿಸಿ ಅಧ್ಯಕ್ಷರನ್ನಾಗಿ ಕಾಂಗ್ರೆಸ್ ಹೈಕಮಾಂಡ್ ನೇಮಕ ಮಾಡಿದೆ.

