ಕೊನೆಗೂ ಸಿಇಟಿ ಪರೀಕ್ಷೆಗೆ ದಿನಾಂಕ ಫಿಕ್ಸ್ : ಜುಲೈ 30, 31 ರಂದು ಪರೀಕ್ಷೆ ನಡೆಸಲು ನಿರ್ಧಾರ!

ಈ ಹಿಂದೆ ಏಪ್ರಿಲ್ 22, 24 ರಂದು ನಿಗಧಿಯಾಗಿದ್ದ ಸಿಇಟಿ ಪರೀಕ್ಷೆಗಳನ್ನು ಕೊರೊನಾ ಲಾಕ್ ಡೌನ್ ನಿಂದಾಗಿ ಮುಂದೂಡಿದ್ದ ಉನ್ನತ ಶಿಕ್ಷಣ ಇಲಾಖೆ ಸದ್ಯ ಸಿಇಟಿ ಪರೀಕ್ಷೆಗಳಿಗೆ ದಿನಾಂಕ ನಿಗಧಿ ಮಾಡಿದೆ.

ಹೌದು…  ಜುಲೈ 30 ಮತ್ತು 31 ರಂದು ಸಿಇಟಿ ಪರೀಕ್ಷೆ ನಡೆಸಲಾಗುತ್ತಿದ್ದು, ಎಂದಿನಂತೆ ಆಫ್ ಲೈನ್ ನಲ್ಲಿ ಈ ಬಾರಿಯೂ ಪರೀಕ್ಷೆ ನಡೆಯಲಿದೆ ಎಂದಿದ್ದಾರೆ. ಪರೀಕ್ಷಾ ಕೊಠಡಿಗಳಲ್ಲಿ ಮುಂಜಾಗೃತ ಕ್ರಮವಾಗಿ ಎಲ್ಲಾ ಸಿದ್ಧತೆಗಳಿಗೆ ಸೀಚಿಸಲಾಗಿದ್ದು, ಅಗತ್ಯ ವ್ಯವಸ್ಥೆಯನ್ನು ಕಲ್ಪಿಸಲಾಗುವುದು ಎಂದು ಇಂದು ವಿಧಾನಸೌಧದಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಸಚಿವ ಅಶ್ವಥ್ ನಾರಾಯಣ್ ಮಾಹಿತಿ ನೀಡಿದ್ದಾರೆ.

ಜೊತೆಗೆ ಸಿಇಟಿ ಪರೀಕ್ಷೆಗಳಿಗೆ ಹಾಜರಾಗುವ ವಿದ್ಯಾರ್ಥಿಗಳಿಗೆ ಮಾಸ್ಕ್ ಕಡ್ಡಾಯ ಮಾಡಲಾಗಿದ್ದು, ಸಾಮಾಜಿಕ ಅಂತರ ಕಾಯ್ದುಕೊಳ್ಳಲು ಕೊಠಡಿಯಲ್ಲಿ ಕಡಿಮೆ ಸಂಖ್ಯೆಯಲ್ಲಿ ವಿದ್ಯಾರ್ಥಿಗಳನ್ನು ಕೂರಿಸಲು ಸೂಚಿಸಲಾಗಿದೆ. ಇದರಿಂದಾಗಿ ಈ ಬಾರಿ ಪರೀಕ್ಷಾ ಕೇಂದ್ರಗಳ ಸಂಖ್ಯೆ ಕೂಡ ಅಧಿಕವಾಗುವ ಸಾಧ್ಯತೆಗಳು ಇವೆ. ಇದರ ಜೊತೆಗೆ ದ್ವೀತಿಯ ಪಿಯುಸಿ ಇಂಗ್ಲಿಷ್ ಪರೀಕ್ಷೆ ಮಾತ್ರ ಬಾಕಿ ಇದ್ದು, ಶೀಘ್ರವೇ ಪಿಯುಸಿ ಬೋರ್ಡ್ ದಿನಾಂಕವನ್ನು ನಿಗದಿ ಮಾಡಲಿದೆ.

ಈ ವೇಳೆ  ಎಂಜಿನಿಯರಿಂಗ್ ಸೀಟ್ ಶುಲ್ಕ ಹೆಚ್ಚಳ ವಿಚಾರದ ಬಗ್ಗೆ ಮಾತನಾಡಿದ ಅವರು, ಕೊರೊನಾ ಇರುವ ಕಾರಣ ಈ ಬಾರಿ ಅಡ್ಮಿಷನ್ ಆಗುವುದೇ ದೊಡ್ಡ ವಿಷಯವಾಗಲಿದೆ. ಶುಲ್ಕ ಹೆಚ್ಚಳದ ಬಗ್ಗೆ ವೈಜ್ಞಾನಿಕ ದೃಷ್ಟಿಯಿಂದ ಚಿಂತನೆ ಮಾಡಿ ನಿರ್ಧಾರ ಮಾಡಲಾಗುವುದು ಎಂದು ತಿಳಿಸಿದರು.

ಡಿಗ್ರಿ ಕಾಲೇಜ್ ಗಳು ಈ ವರ್ಷದ ಸೆಪ್ಟೆಂಬರ್ ಮೊದಲ ವಾರದಲ್ಲಿ ಆರಂಭವಾಗಲಿದೆ. ಪರೀಕ್ಷೆ, ಫಲಿತಾಂಶ ವಿಚಾರಕ್ಕೆ ಸಂಬಂಧಿಸಿದಂತೆ ಅಗತ್ಯ ಕ್ರಮಗಳನ್ನು ತೆಗೆದುಕೊಳ್ಳಲಾಗುತ್ತದೆ ಎಂದು ಮಾಹಿತಿ ನೀಡಿದರು. ಮೆಡಿಕಲ್ ಸೀಟ್ ಬ್ಲಾಕಿಂಗ್ ವಿಚಾರದ ಬಗ್ಗೆ ಕೇಳಲಾದ ಪ್ರಶ್ನೆಗೆ, ಈಗಾಗಲೇ ಕಮಿಟಿ ರಚನೆ ಮಾಡಿ ವರದಿ ನೀಡಿದೆ. ವರದಿ ಏನಿದೆ ಅಂತ ಸಚಿವರು ನೋಡಿ ಕ್ರಮ ತೆಗೆದುಕೊಳ್ಳಲಿದ್ದಾರೆ ಎಂದು ಅಶ್ವಥ್ ನಾರಾಯಣ್ ಉತ್ತರಿಸಿದರು.

 

ಸುಳ್ಳು ಸುದ್ದಿಗಳ ವಿರುದ್ಧದ ಹೋರಾಟಕ್ಕೆ ದೇಣಿಗೆ ನೀಡಿ ಬೆಂಬಲಿಸಿ
Spread the love

Leave a Reply

Your email address will not be published.

Verified by MonsterInsights