ಕೊರೊನಾದಿಂದ ಸಿಎಂ ಯಡಿಯೂರಪ್ಪ ಗುಣಮುಖ: ಆಸ್ಪತ್ರೆಯಿಂದ ಡಿಸ್ಚಾರ್ಜ್

ಕೊರೊನಾ ಸೋಂಕಿಗೆ ಒಳಗಾಗಿ ಮಣಿಪಾಲ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದಿದ್ದ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ನವರು ಇಂದು ಸಂಜೆ ಡಿಸ್ಚಾರ್ಜ್ ಆಗಿದ್ದಾರೆ.

ಆಸ್ಪತ್ರೆಯಲ್ಲಿ ಸತತ 9 ದಿನಗಳ ಕಾಲ ಚಿಕಿತ್ಸೆ ಪಡೆದ ನಂತರ ಕೊರೊನಾ ಪರೀಕ್ಷೆಯಲ್ಲಿ ನೆಗೆಟಿವ್ ಬಂದಿದ್ದು, ಯಡಿಯೂರಪ್ಪನವರನ್ನು ಡಿಸ್ಚಾರ್ಜ್ ಮಾಡಲಾಗಿದೆ ಎಂದು ವೈದ್ಯರು ತಿಳಿಸಿದ್ದಾರೆ.

ಪೊಲೀಸರ ಬಿಗಿ ಭದ್ರತೆಯಲ್ಲಿ ಬಿಎಸ್ ಯಡಿಯೂರಪ್ಪನವರನ್ನು ಆಸ್ಪತ್ರೆಯಿಂದ ಮನೆಗೆ ಕರೆದೊಯ್ಯಲಾಗಿದ್ದು ಅವರು ಸಾಗುವ ಮಾರ್ಗದ ಸುತ್ತಮುತ್ತ ಭದ್ರತೆ ಒದಗಿಸಲಾಗಿದೆ.

ಇಂದು ಆಸ್ಪತ್ರೆಯಿಂದ ಬಿಡುಗಡೆಯಾಗುತ್ತಿದ್ದೇನೆ. ನಿಮ್ಮೆಲ್ಲರ ಶುಭಹಾರೈಕೆಗಳಿಂದ ಗುಣಮುಖನಾಗಿದ್ದೇನೆ. ವೈದ್ಯರ ಸಲಹೆಯಂತೆ ಇನ್ನು ಕೆಲವು ದಿನ ಮನೆಯಲ್ಲೇ ಕ್ವಾರಂಟೈನ್ ನಲ್ಲಿ ಇರಲಿದ್ದೇನೆ. ಆತ್ಮವಿಶ್ವಾಸ, ವೈದ್ಯಕೀಯ ಚಿಕಿತ್ಸೆಗಳಿಂದ ಕೊರೋನಾ ಗೆಲ್ಲಬಹುದು. ಆತಂಕ ಬೇಡ, ಮುನ್ನೆಚ್ಚರಿಕೆ ಇರಲಿ ಎಂದು ಯಡಿಯೂರಪ್ಪನವರು ಟ್ವೀಟ್‌ ಮಾಡಿದ್ದಾರೆ.

ಸುಳ್ಳು ಸುದ್ದಿಗಳ ವಿರುದ್ಧದ ಹೋರಾಟಕ್ಕೆ ದೇಣಿಗೆ ನೀಡಿ ಬೆಂಬಲಿಸಿ
Spread the love

Leave a Reply

Your email address will not be published.

Verified by MonsterInsights