ಕೊರೊನಾ ಎಫೆಕ್ಟ್ : ತೆಲಂಗಾಣದಲ್ಲಿ ಮೇ. 29ರವರೆಗೆ ಲಾಕ್​ಡೌನ್​ ವಿಸ್ತರಣೆ

ದೇಶಾದ್ಯಂತ ದಿನೇ ದಿನೇ ಕೊರೊನಾ ಸೋಂಕಿತರ ಸಂಖ್ಯೆ ಹೆಚ್ಚಳವಾಗುತ್ತಿದ್ದು, ನಿಯಂತ್ರಣಕ್ಕೆ ಬರುವ ಲಕ್ಷಣಗಳು ಕಂಡುಬರುತ್ತಿಲ್ಲ. ಹೀಗಾಗಿ ಮೇ 17ರವರೆಗೆ ಲಾಕ್​ಡೌನ್​ ವಿಸ್ತರಿಸಲಾಗಿದೆ. ಈಗಾಗಲೇ ಒಂದು ತಿಂಗಳಿಗೂ ಅಧಿಕ ಲಾಕ್ ಡೌನ್ ಜಾರಿಯಾಗಿರುವುದರಿಂದ ಕರ್ನಾಟಕ ಸೇರಿದಂತೆ ಕೆಲ ರಾಜ್ಯಗಳಲ್ಲಿ ಲಾಕ್ ಡೌನ್ ಸಡಿಲಗೊಳಿಸಲಾಗಿದೆ. ಆದರೆ, ತೆಲಂಗಾಣದಲ್ಲಿ ಕೊರೋನಾ ಸೋಂಕಿತರ ಸಂಖ್ಯೆ ಏರಿಕೆಯಾಗಿರುವುದರಿಂದ ಮೇ 29ರವರೆಗೆ ಲಾಕ್​ಡೌನ್ ವಿಸ್ತರಿಸಲಾಗಿದೆ.

ತೆಲಂಗಾಣದ ಮುಖ್ಯಮಂತ್ರಿ ಕೆ. ಚಂದ್ರಶೇಖರ್ ರಾವ್ ಈ ಬಗ್ಗೆ ಘೋಷಣೆ ಮಾಡಿದ್ದು, ತೆಲಂಗಾಣದಲ್ಲಿ ಮೇ 17ರ ಬದಲಾಗಿ ಮೇ 29ರವರೆಗೆ ಲಾಕ್​ಡೌನ್​ ಇರಲಿದೆ. ಸಾರ್ವಜನಿಕರು ಸಂಜೆ 6 ಗಂಟೆಯೊಳಗೆ ಅಗತ್ಯ ವಸ್ತುಗಳನ್ನು ಖರೀದಿಸಬೇಕು. ಸಂಜೆ 6 ರಿಂದ ಬೆಳಗ್ಗೆ 7 ಗಂಟೆಯವರೆಗೆ ಕರ್ಫ್ಯೂ ಜಾರಿಯಲ್ಲಿರುತ್ತದೆ ಎಂದು ತೆಲಂಗಾಣ ಸಿಎಂ ತಿಳಿಸಿದ್ದಾರೆ.

ಇದರೊಂದಿಗೆ ದೇಶದಲ್ಲಿ ಮೇ 17ರ ಬಳಿಕವೂ ಲಾಕ್​ಡೌನ್ ವಿಸ್ತರಣೆಗೊಳಿಸಿದ ಮೊದಲ ರಾಜ್ಯ ತೆಲಂಗಾಣವಾಗಿದೆ. ಸಂಪುಟದ ಸಚಿವರ ಜೊತೆ ಮಾತುಕತೆ ನಡೆಸಿದ ಬಳಿಕ ಸಿಎಂ ಕೆ.ಸಿ. ರಾವ್ ಈ ನಿರ್ಧಾರಕ್ಕೆ ಬಂದಿದ್ದಾರೆ. ರೆಡ್​ಜೋನ್​ ಪ್ರದೇಶಗಳಲ್ಲಿ ಸ್ಟೀಲ್, ಸಿಮೆಂಟ್, ಹಾರ್ಡ್​ವೇರ್ ಮತ್ತು ಎಲೆಕ್ಟ್ರಿಕ್ ಅಂಗಡಿಗಳನ್ನು ಮಾತ್ರ ತೆರೆಯಲು ಅವಕಾಶ ನೀಡಲಾಗಿದೆ. ಉಳಿದ ಪ್ರದೇಶಗಳಲ್ಲಿ ಅಂಗಡಿಗಳೆಲ್ಲ ತೆರೆದಿರುತ್ತವೆ. ತೆಲಂಗಾಣದಲ್ಲಿ ಮಂಗಳವಾರ 11 ಹೊಸ ಕೊರೋನಾ ಪ್ರಕರಣಗಳು ಪತ್ತೆಯಾಗಿವೆ. ಈ ಮೂಲಕ ತೆಲಂಗಾಣದಲ್ಲಿ 1,096 ಜನರಿಗೆ ಸೋಂಕು ತಗುಲಿದಂತಾಗಿದೆ.

ಸುಳ್ಳು ಸುದ್ದಿಗಳ ವಿರುದ್ಧದ ಹೋರಾಟಕ್ಕೆ ದೇಣಿಗೆ ನೀಡಿ ಬೆಂಬಲಿಸಿ
Spread the love

Leave a Reply

Your email address will not be published.

Verified by MonsterInsights