ಕೊರೊನಾ ರೋಗಿಗಳ ಚಿಕಿತ್ಸೆಗಾಗಿ 450 ಹಾಸಿಗೆಗಳ ಆಸ್ಪತ್ರೆ ನಿರ್ಮಾಣ ಮಾಡಿದ ವಿಪ್ರೋ ಸಂಸ್ಥೆ

ವಿಪ್ರೋ ಕಂಪನಿಯು ಮಹಾರಾಷ್ಟ್ರದ ಪುಣೆಯಲ್ಲಿರುವ ತನ್ನ ಹಿಂಜವಾಡಿ ಐಟಿ ಪಾರ್ಕ್‌ ಕ್ಯಾಂಪಸ್‌ ಅನ್ನು ಕೊರೊನಾ ಚಿಕಿತ್ಸೆ ನೀಡುವ ಉದ್ದೇಶದಿಂದ ಕೊರೊನಾ ಆಸ್ಪತ್ರೆಯಾಗಿ ಮರುರೂಪಿಸಿದೆ. 450 ಹಾಸಿಗೆಗಳುಳ್ಳ ಈ ಆಸ್ಪತ್ರೆಯನ್ನು  ಮಹಾರಾಷ್ಟ್ರ ಮುಖ್ಯಮಂತ್ರಿ ಉದ್ಧವ್ ಠಾಕ್ರೆ ಅವರು ಉದ್ಘಾಟೆ ಮಾಡಿದ್ದಾರೆ.

“ವಿಪ್ರೊ ಕಂಪನಿಯ ಪುಣೆಯಲ್ಲಿರುವ ಕ್ಯಾಂಪಸ್‌ ಅನ್ನು 450 ಹಾಸಿಗೆಗಳುಳ್ಳ ಆಸ್ಪತ್ರೆಯಾಗಿ ಪರಿವರ್ತಿಸಿದ್ದು, ಇದನ್ನು ಉದ್ಘಾಟಿಸಿದ ಮುಖ್ಯಮಂತ್ರಿ ಉದ್ದವ್ ಠಾಕ್ರೆಯವರಿಗೆ ಧನ್ಯವಾದಗಳು. ಒಂದು ತಿಂಗಳ ವಹಿವಾಟನ್ನು ಸಕ್ರಿಯಗೊಳಿಸಲು ಬೆಂಬಲಿ ನೀಡಿದ್ದಕ್ಕಾಗಿ ಮಹಾರಾಷ್ಟ್ರ ಸರ್ಕಾರಕ್ಕೆ ಧನ್ಯವಾದ” ಎಂದು ವಿಪ್ರೋದ ಅಧ್ಯಕ್ಷ ಇಷಾದ್ ಪ್ರೇಮ್‌ಜಿ ಟ್ವೀಟ್‌ ಮಾಡಿದ್ದಾರೆ.

ಕೊರೊನಾ ರೋಗಿಗಳ ಚಿಕಿತ್ಸೆಗಾಗಿ ಕಡಿಮೆ ಅವಧಿಯಲ್ಲಿ ಸಾಕಷ್ಟು ಆರೋಗ್ಯ ಸೌಲಭ್ಯಗಳನ್ನು ಒದಗಿಸುವಲ್ಲಿ ರಾಜ್ಯ ಸರ್ಕಾರ ಯಶಸ್ವಿಯಾಗಿದೆ ಉದ್ಘಾಟನಾ ಸಮಾರಂಭದಲ್ಲಿ ಠಾಕ್ರೆ ಹೇಳಿದ್ದಾರೆ.

“ಕೊರೊನಾ ಏಕಾಏಕಿ ಕಾಣಿಸಿಕೊಂಡಿದ್ದರಿಂದಾಗಿ. ಆರಂಭಿಕ ಹಂತದಲ್ಲಿ ರಾಜ್ಯದಲ್ಲಿ ಆರೋಗ್ಯ ಮೂಲಸೌಕರ್ಯಗಳು ಸಮರ್ಪಕವಾಗಿರಲಿಲ್ಲ. ಆದರೆ ಈಗ ನಾವು ಸಾಕಷ್ಟು ಸಂಖ್ಯೆಯ ಸೌಲಭ್ಯಗಳನ್ನು ಅಭಿವೃದ್ಧಿಪಡಿಸುವಲ್ಲಿ ಯಶಸ್ವಿಯಾಗಿದ್ದೇವೆ” ಎಂದು ಮುಖ್ಯಮಂತ್ರಿ ವಿಡಿಯೋ-ಕಾನ್ಫರೆನ್ಸ್ ಮೂಲಕ ಹೇಳಿದರು.

“ರಾಜ್ಯದ ಗ್ರಾಮೀಣ ಪ್ರದೇಶಗಳಲ್ಲಿ ಇದೇ ರೀತಿಯ ಸೌಲಭ್ಯಗಳನ್ನು ಹೆಚ್ಚಿಸಲು ಸರ್ಕಾರವು ಹಣವನ್ನು ಖರ್ಚು ಮಾಡುತ್ತದೆ” ಎಂದು ಅವರು ಹೇಳಿದರು.

मुख्यमंत्री ने किया विप्रो के ...

“ಈ ಆರೋಗ್ಯ ಸೌಲಭ್ಯವನ್ನು ಮಾನವೀಯ ನೆಲೆಯಲ್ಲಿ ಒದಗಿಸಲು ನಾವು ಮುಂದಾಗಿದ್ದೇವೆ. ನಮ್ಮ ಪ್ರಸ್ತಾಪಕ್ಕೆ ಸರ್ಕಾರ ಸಕಾರಾತ್ಮಕವಾಗಿ ಸ್ಪಂದಿಸಿದೆ. ನಾವು ದೇಶಾದ್ಯಂತ ಅಗತ್ಯವಿರುವವರಿಗೆ ಆಹಾರ ಮತ್ತು ಔಷಧಿಗಳನ್ನು ಪೂರೈಸಲು ಪ್ರಯತ್ನಿಸುತ್ತೇವೆ” ಎಂದು ವಿಪ್ರೋ ಅಧ್ಯಕ್ಷ ರಿಷಾದ್‌ ಪ್ರೇಮ್‌ಜಿ ಹೇಳಿದರು.

ಕೊರೊನಾ ಸೋಂಕಿತ ರೋಗಿಗಳಿಗೆ ಒಂದು ವರ್ಷದವರೆಗೆ ಚಿಕಿತ್ಸೆ ನೀಡಲು ರಾಜ್ಯ ಸರ್ಕಾರವು ಕಂಪನಿಯೊಂದಿಗೆ ಒಪ್ಪಂದಕ್ಕೆ ಸಹಿ ಹಾಕಿದೆ.

 

ಸುಳ್ಳು ಸುದ್ದಿಗಳ ವಿರುದ್ಧದ ಹೋರಾಟಕ್ಕೆ ದೇಣಿಗೆ ನೀಡಿ ಬೆಂಬಲಿಸಿ
Spread the love

Leave a Reply

Your email address will not be published.

Verified by MonsterInsights