ಕೊರೊನಾ ಸಾವಿನ ಸಂಖ್ಯೆ ಹೆಚ್ಚುತ್ತಲೇ ಇವೆ; ಲಾಕ್‌ಡೌನ್‌ ಕಟ್ಟುಟ್ಟಾಗಿ ಪಾಲಿಸಿ: ಯಡಿಯೂರಪ್ಪ

ಕರ್ನಾಟಕದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ ದಿನೇದಿನೇ ಹೆಚ್ಚಾಗುತ್ತಲೇ ಇವೆ. ಕೊರೊನಾ ವೈರಸ್‌ಗೆ ಬಲಿಯಾಗುತ್ತಿರುವವರ ಸಾವಿನ ಸಂಖ್ಯೆಯೂ​ ಹೆಚ್ಗುಚಾಗುತ್ತಿವೆ. ಕೊರೊನಾದಿಂದಾಗಿ ಉಂಟಾಗಿರುವ ಸಂಕಷ್ಟಗಳ ಕುರಿತು ಮುಖ್ಯಮಂತ್ರಿ ಬಿ.ಎಸ್​​ ಯಡಿಯೂರಪ್ಪ ತೀವ್ರ ಕಳವಳ ವ್ಯಕ್ತಪಡಿಸಿದ್ದಾರೆ. ವಿಶ್ವದಾದ್ಯಂತ ಕೋವಿಡ್ – 19 ಸೋಂಕಿನಿಂದ ಉಂಟಾಗುತ್ತಿರುವ ಹಾನಿ ಎಲ್ಲರಿಗೂ ತಿಳಿದಿದೆ. ಪ್ರಧಾನ ಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಜನರ ಜೀವ ರಕ್ಷಣೆಗಾಗಿ ದೇಶಾದ್ಯಂತ 14.04.2020 ರವರೆಗೆ ಲಾಕ್‍ಡೌನ್ ಘೋಷಣೆ ಮಾಡಿದ್ದಾರೆ. ಹಾಗಾಗಿ ರಾಜ್ಯದ ಜನತೆ ಲಾಕ್​​ಡೌನ್ ಅನ್ನು ಕಟ್ಟುನಿಟ್ಟಾಗಿ ಪಾಲಿಸುವಂತೆ  ಪತ್ರಿಕಾ ಹೇಳಿಕೆಯಲ್ಲಿ ಬಿ.ಎಸ್​​ ಯಡಿಯೂರಪ್ಪ ಮನವಿ ಮಾಡಿದ್ದಾರೆ.

ಇನ್ನು, ನಮ್ಮ ರಾಜ್ಯದಲ್ಲಿಯೂ ಬೀದರ್, ಮೈಸೂರು, ಮಂಗಳೂರು, ಬೆಂಗಳೂರು ನಗರ, ಕಲಬುರಗಿ ಜಿಲ್ಲೆಗಳಲ್ಲಿ ವೈರಸ್ ಪೀಡಿತರ ಸಂಖ್ಯೆ ದಿನೇ ದಿನೇ ಗಣನೀಯವಾಗಿ ಹೆಚ್ಚುತ್ತಿದೆ. ಈ ವೈರಸ್ ನಿಯಂತ್ರಣಕ್ಕಾಗಿ ಗಡಿ ಪ್ರದೇಶಗಳನ್ನು ಮುಚ್ಚುವುದು, ಸಾರ್ವಜನಿಕವಾಗಿ ಹೆಚ್ಚು ಹೆಚ್ಚು ಓಡಾಡುವಂತಹ ಪ್ರದೇಶಗಳಿಗೆ ನಿರ್ಬಂಧಗಳನ್ನು ವಿಧಿಸಿರುವುದು, ಧಾರ್ಮಿಕ ಸ್ಥಳಗಳಲ್ಲಿ ಜನರು ಸೇರದಂತೆ ನಿರ್ಬಂಧಿಸುವುದರ ಜೊತೆಗೆ ಕೊರೋನಾ ವೈರಸ್ ಹರಡುವಿಕೆಯನ್ನು ನಿಯಂತ್ರಿಸುವ ನಿಟ್ಟಿನಲ್ಲಿ ಸರ್ಕಾರವು ಹಲವಾರು ಮುಂಜಾಗ್ರತಾ ಕ್ರಮಗಳನ್ನು ಕೈಗೊಂಡಿದೆ. ಆದ್ದರಿಂದ ಲಾಕ್ ಡೌನ್​​ನ ಹಿಂದಿನ ಆಶಯವನ್ನು ಹಾಗೂ ದೇಶಕ್ಕೆ ಎದುರಾಗಬಹುದಾದ ಅಪಾಯವನ್ನು ಅರಿತು ಕಟ್ಟುನಿಟ್ಟಾಗಿ ಲಾಕ್ ಡೌನ್ ಆದೇಶ ಪಾಲಿಸಬೇಕಾಗಿದೆ.” ಎಂದರು ಯಡಿಯೂರಪ್ಪ.

ಪಾಶ್ಚಿಮಾತ್ಯ ದೇಶಗಳಲ್ಲಿ ಈಗಾಗಲೇ ಕೋವಿಡ್-19 ನಿಯಂತ್ರಣಕ್ಕೆ ಸಿಗದ ಸ್ಥಿತಿ ತಲುಪಿದೆ. ಪ್ರಸ್ತುತ ಮಾನ್ಯ ಪ್ರಧಾನ ಮಂತ್ರಿಯವರು ಸೂಚಿಸಿರುವ ದೇಶವ್ಯಾಪ್ತಿ ಲಾಕ್‍ಡೌನ್ ಅವಧಿಯು ಏಪ್ರಿಲ್ 14 ರಂದು ಮುಕ್ತಾಯಗೊಳ್ಳುತ್ತಿದ್ದು, ಈ ಲಾಕ್‍ಡೌನನ್ನು ವಿಸ್ತರಿಸಬೇಕೋ ಬೇಡವೋ ಎಂಬ ಬಗ್ಗೆ ಕೂಲಂಕುಷವಾಗಿ ಪರಿಶೀಲಿಸಿ ಮುಂದಿನ ಕ್ರಮ ತೆಗೆದುಕೊಳ್ಳಬೇಕಾಗುತ್ತದೆ. ಆದುದರಿಂದ ಈ ಕುರಿತಂತೆ ಸಲಹೆ ಸೂಚನೆಗಳನ್ನು ನೀಡುವಂತೆ ಮುಖ್ಯಮಂತ್ರಿಗಳು ಮನವಿ ಮಾಡಿದ್ದಾರೆ.

ಸುಳ್ಳು ಸುದ್ದಿಗಳ ವಿರುದ್ಧದ ಹೋರಾಟಕ್ಕೆ ದೇಣಿಗೆ ನೀಡಿ ಬೆಂಬಲಿಸಿ
Spread the love

Leave a Reply

Your email address will not be published.

Verified by MonsterInsights