ಕೊರೊನಾ ಸೋಂಕಿತ ರಾಜ್ಯಗಳಲ್ಲಿ ಕರ್ನಾಟಕ 9ನೇ ಸ್ಥಾನ: ಬಿಎಸ್ವೈ
ರಾಜ್ಯದಲ್ಲಿ ಕೊರೋನಾ ವೈರಸ್ ಸೋಂಕಿತರ ಸಂಖ್ಯೆ 124ಕ್ಕೆ ಏರಿಕೆ ಆಗಿದೆ. ಕೊರೋನಾ ಸೋಂಕಿತ ರಾಜ್ಯಗಳ ಪೈಕಿ ಕರ್ನಾಟಕ 9 ನೇ ಸ್ಥಾನದಲ್ಲಿರುವುದಾಗಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ತಿಳಿಸಿದ್ದಾರೆ.
ಪ್ರಧಾನಿ ಜೊತೆಗೆ ವಿಡಿಯೋ ಸಂವಾದದ ಬಳಿಕ ಸುದ್ದಿಗೋಷ್ಠಿಯಲ್ಲಿ ಈ ವಿಷಯ ತಿಳಿಸಿದ ಯಡಿಯೂರಪ್ಪ, ಕೊರೋನಾ ಸೋಂಕಿನ ಹಿನ್ನೆಲೆಯಲ್ಲಿ ರಾಜ್ಯದಲ್ಲಿನ ಪರಿಸ್ಥಿತಿ ಹಾಗೂ ಸರ್ಕಾರ ಕೈಗೊಂಡಿರುವ ಕ್ರಮಗಳ ಬಗ್ಗೆ ಪ್ರಧಾನಿ ನರೇಂದ್ರ ಮೋದಿ ಮಾಹಿತಿ ಪಡೆದುಕೊಂಡಿದ್ದಾರೆ ಎಂದು ತಿಳಿಸಿದರು
ಕಟ್ಟುನಿಟ್ಟಾಗಿ ಲಾಕ್ ಡೌನ್ ಪಾಲಿಸಿದ ರಾಜ್ಯಗಳನ್ನು ಪ್ರಧಾನಿ ಶ್ಲಾಘಿಸಿದ್ದು, ಲಾಕ್ ಡೌನ್ ನಿಯಮ ಉಲ್ಲಂಘನೆಯಾಗದಂತೆ ಕ್ರಮ ಕೈಗೊಳ್ಳುವಂತೆ ಸೂಚಿಸಿದ್ದಾರೆ ಕೃಷಿ ಚಟುವಟಿಕೆಗಳಿಗೆ ಲಾಕ್ ಡೌನ್ ನಿಂದ ವಿನಾಯಿತಿ ನೀಡಲಾಗಿದ್ದು, ಸಾರ್ವಜನಿಕರಿಗೆ ಅಗತ್ಯ ವಸ್ತುಗಳ ಪೂರೈಕೆಗೆ ತೊಂದರೆಯಾಗದಂತೆ ಹಾಗೂ ವಲಸಿಗರಿಗೆ ಅಗತ್ಯ ಸೌಲಭ್ಯ ಕಲ್ಪಿಸಲು ಕ್ರಮ ಕೈಗೊಳ್ಳಲು ಪ್ರಧಾನಿ ಸೂಚನೆ ನೀಡಿದ್ದಾರೆ ಎಂದರು.
ಕೊರೋನಾ ಪತ್ತೆ, ಐಸೋಲೇಷನ್ ಕಾರ್ಯ ತ್ವರಿತವಾಗಿ ನಡೆಯಬೇಕು,ಮುಂದಿನ ದಿನಗಳಲ್ಲಿ ಪರ್ಯಾಯ ವೈದ್ಯಕೀಯ ಸಿಬ್ಬಂದಿ ಹಾಗೂ ಸರ್ಕಾರೇತರ ಸ್ವಯಂ ಸೇವಾ ಸಂಸ್ಥೆಗಳ ನೆರವನ್ನು ಬಳಸಿಕೊಳ್ಳುವಂತೆ ಹಾಗೂ ಕೇಂದ್ರದ ಯೋಜನೆಗಳನ್ನು ಸರಿಯಾಗಿ ಜಾರಿ ಮಾಡುವಂತೆ ಪ್ರಧಾನಿ ಸಲಹೆ ನೀಡಿದ್ದಾರೆ ಎಂದು ತಿಳಿಸಿದರು.
ಮುಖ್ಯಮಂತ್ರಿ ಶ್ರೀ @BSYBJP ಅವರು, #ಕೋವಿಡ್19 ನಿಯಂತ್ರಣಕ್ಕೆ ಸಂಬಂಧಿಸಿದಂತೆ ಕೈಗೊಂಡಿರುವ ಕ್ರಮಗಳ ಕುರಿತು ಪ್ರಧಾನ ಮಂತ್ರಿ ಶ್ರೀ @narendramodi ಅವರು ಎಲ್ಲಾ ರಾಜ್ಯಗಳ ಮುಖ್ಯ ಮಂತ್ರಿಗಳೊಂದಿಗೆ ನಡೆಸಿದ ವಿಡಿಯೋ ಸಂವಾದದಲ್ಲಿ ಮಾಹಿತಿ ಒದಗಿಸಿದರು. 1/2 pic.twitter.com/JgE40iOClY
— CM of Karnataka (@CMofKarnataka) April 2, 2020
ಏಪ್ರಿಲ್ 14ರ ನಂತರದ ಲಾಕ್ ಡೌನ್ ಬಗ್ಗೆ ನಾವು ನಡೆದುಕೊಳ್ಳುವುದರ ಆಧಾರದ ಮೇಲೆ ನಿರ್ಧಾರವಾಗಲಿದೆ ಎಂದ ಮುಖ್ಯಮಂತ್ರಿ , ಯಾವುದೇ ಅನಾಹುತವಾಗದಂತೆ ಕ್ರಮ ಕೈಗೊಳ್ಳುವಂತೆ ಪ್ರಧಾನಿ ಸೂಚಿಸಿದ್ದಾರೆ ಎಂದು ಯಡಿಯೂರಪ್ಪ ತಿಳಿಸಿದರು.
ಕೊರೊನಾ ಸೋಂಕಿತರು ಹೆಚ್ಚಾಗಿರುವ ರಾಜ್ಯಗಳಲ್ಲಿ ಮಹರಾಷ್ಟ್ರ (339) ಮೊದಲ ಸ್ಥಾನದಲ್ಲಿದೆ. ಕೇರಳ, ತಮಿಳುನಾಡು, ದೆಹಲಿ, ರಾಜಸ್ಥಾನ, ಉತ್ತರ ಪ್ರದೇಶ, ಆಂಧ್ರ ಪ್ರದೇಶ, ತೆಲಂಗಾಣ ನಂತರ ಸ್ಥಾನಗಳಲ್ಲಿದ್ದು, ಕರ್ನಾಟಕ 09ನೇ ಸ್ಥಾನದಲ್ಲಿದೆ.