ಕೊರೊನಾ ಸೋಂಕಿತ ವ್ಯಕ್ತಿಯ ಮೃತ ದೇಹ ನಾಪತ್ತೆ; ಆಸ್ಪತ್ರೆ ಸಿಬ್ಬಂದಿ ವಿರುದ್ಧ FIR
ಕೊಲೆಯಾಗಿದ್ದ 27 ವರ್ಷದ ವ್ಯಕ್ತಿಯೊಬ್ಬರ ಮೃತ ದೇಹವನ್ನು ಕೊರೋನಾ ಪರೀಕ್ಷೆಗೆ ಒಳಪಡಿಸಲಾಗಿದ್ದು, ಪರೀಕ್ಷೆಯಲ್ಲಿ ಕೊರೊನಾ ಸೋಂಕು ಇರುವುದು ದೃಢಪಟ್ಟಿದೆ. ಆದರೆ, ಆತನ ಶವ ನಾಪತ್ತೆಯಾಗಿದೆ ಎಂದು ಮುಂಬೈ ಪೊಲೀಸರು ತಿಳಿಸಿದ್ದಾರೆ.
ಆರೋಪಿಸಿದ್ದಾರೆ. ಈ ಸಂಬಂಧ ರಾಜವಾಡಿ ಆಸ್ಪತ್ರೆಯ ನೌಕರರ ವಿರುದ್ಧ ಎಫ್ಐಆರ್ ದಾಖಲಿಸಲಾಗಿದೆ.
ಕೌಟುಂಬಿಕ ಕಲಹದಿಂದಾಗಿ ಸೋದರ ಸಂಬಂಧಿಯೊಬ್ಬರು 27 ವರ್ಷದ ಯುವಕನ ಹೊಟ್ಟೆಗೆ ಇರಿದಿದ್ದರು. ಆತನನ್ನು ರಾಜವಾಡಿ ಆಸ್ಪತ್ರೆಗೆ ಸೇರಿಸಲಾಗಿದ್ದು, ಆತ ಸಾವನ್ನಪ್ಪಿದ್ದಾನೆ. ಸಾವನ್ನಪ್ಪಿದ ನಂತರ ದೇಹವನ್ನು ಕೊರೊನಾ ಪರೀಕ್ಷೆಗೆ ಒಳಪಡಿಸಿದಾಗ ಸೋಂಕು ಇರುವುದು ದೃಢಪಟ್ಟಿತ್ತು. ಆದರೆ, ಶವವೇ ಆಸ್ಪತ್ರೆಯಲ್ಲಿ ನಾಪತ್ತೆಯಾಗಿದೆ.
ಈ ಬಗ್ಗೆ ಮೃತರ ಕುಟುಂಬ ಸ್ಥಳೀಯ ಪೊಲೀಸರಿಗೆ ದೂರು ನೀಡಿದ್ದು, ರಾಜವಾಡಿ ಆಸ್ಪತ್ರೆಯ ನೌಕರರ ವಿರುದ್ಧ ಎಫ್ಐಆರ್ ದಾಖಲಿಸಲಾಗಿದೆ. ಘಟನೆಯ ಬಗ್ಗೆ ಬೃಹತ್ ಮುಂಬೈ ಮಹಾನಗರ ಪಾಲಿಕೆ (ಬಿಎಂಸಿ) ತನಿಖೆ ಆರಂಭಿಸಿದೆ.
ಕೌಟುಂಬಿಕ ಕಲಹದ ಬಗ್ಗೆ ದೇವನಾರ್ ಪೊಲೀಸ್ ಠಾಣೆಯಲ್ಲಿ ಕೊಲೆ ಪ್ರಕರಣ ದಾಖಲಾಗಿದ್ದು, ಘಟನೆಗೆ ಸಂಬಂಧಿಸಿದಂತೆ ಐವರನ್ನು ಬಂಧಿಸಲಾಗಿದೆ.

