ಕೊರೋನಾ ವಿರುದ್ಧದ ಹೋರಾಡೊಣ, ಆದರೆ ರೈತರ ಸಮಸ್ಯೆ ಮರೆಯದಿರೋಣ : HDK..

ಕೊರೋನಾ ಲಾಕ್‌ಡೌನ್‌ನಿಂದ ರೈತರು ಎದುರಿಸುತ್ತಿರುವ ಸಂಕಷ್ಟಕ್ಕೆ ಕೂಡಲೇ ಸ್ಪಂದಿಸುವಂತೆ ಮಾಇ ಸಿಎಂ ಕುಮಾರಸ್ವಾಮಿ ಅವರು ರಾಜ್ಯ ಸರಕಾರವನ್ನು ಕೋರಿದ್ದಾರೆ. ಕೊರೋನಾ ಹೆಮ್ಮಾರಿ ವಿರುದ್ಧದ ಹೋರಾಟದಲ್ಲಿ ರೈತರನ್ನು ಮರೆಯಬಾರದು. ಅವರ ಸಂಕಷ್ಟಗಳಿಗೆ ಕುರುಡಾಗಬಾರದು ಎಂದು ಎಚ್ಡಿಕೆ ಹೇಳಿದ್ದಾರೆ.

ಮಂಡ್ಯದಲ್ಲಿ ಸಪೋಟವನ್ನು ರಸ್ತೆಗೆ ಸುರಿದ, ಚಿಕ್ಕಬಳ್ಳಾಪುರದಲ್ಲಿ ದ್ರಾಕ್ಷಿಯನ್ನು ತಿಪ್ಪೆಗೆ ಹಾಕಿದ, ಶಿವಮೊಗ್ಗದಲ್ಲಿ ಹೈನುಗಾರರಿಂದ ಹಾಲು ಖರೀದಿ ನಿಲ್ಲಿಸಲಾಗಿದೆ.

ಇದೇ ರೀತಿ ಕೋಲಾರದಲ್ಲಿ ಟೊಮೆಟೊ ನಾಶ ಮಾಡಿದ ಘಟನೆಗಳು ರೈತರು ಎದುರಿಸುತ್ತಿರುವ ದುಸ್ಥಿತಿಯನ್ನು ವಿವರಿಸುತ್ತಿದೆ.ಇನ್ನು ಕೆಲವೇ ದಿನಗಳಲ್ಲಿ ಇದು ವಿಕೋಪಗೊಳ್ಳುವ ಆತಂಕ ನನ್ನನ್ನು ಕಾಡುತ್ತಿದೆ

ಸರ್ಕಾರ ರೈತರ ಉತ್ಪನ್ನ ಖರೀದಿಗೆ ಶೀಘ್ರವೇ ವ್ಯವಸ್ಥೆ ಮಾಡುವ ಅನಿವಾರ್ಯತೆ ಎದುರಾಗಿದೆ. ಇಲ್ಲದಿದ್ದರೇ ಹೋದರೆ ಕೃಷಿ ವಲಯ ತೊಂದರೆಗೀಡಾಗುತ್ತದೆ. ಅದರ ಪರಿಣಾಮ ಭೀಕರ ಎಂದು ಅವರು ಎಚ್ಚರಿಸಿದ್ದಾರೆ.

ಇಂತಹ ಪರಿಸ್ಥಿತಿ ಮುಂದುವರಿದರೇ ಅದು ರೈತ ಕುಟುಂಬಗಳನ್ನು ಆಪೋಷನ ತೆಗೆದುಕೊಳ್ಳುವ ಜೊತೆಗೆ, ಆರ್ಥಿಕತೆಗೆ ತೀವ್ರ ಪೆಟ್ಟು ನೀಡುತ್ತದೆ. ಅದನ್ನು ನೆನೆದು ನನಗಂತೂ ಆತಂಕವಾಗಿದೆ‌.

ರೈತರಿಂದ ನೇರವಾಗಿ ಖರೀದಿಸಿದ ಉತ್ಪನ್ನಗಳಸೂಕ್ತ ವಿತರಣೆಗೆ ವ್ಯವಸ್ಥೆ ಮಾಡಬೇಕು. ಸಣ್ಣ ಅಂಗಡಿಗಳಿಗೆ ರೈತರು ತಮ್ಮ ದಾಸ್ತಾನು ನೇರವಾಗಿ ಮಾರಾಟ ಮಾಡಲು ಅನುಕೂಲ ಕಲ್ಪಸಬೇಕು ಎಂದು ಎಚ್ಡಿಕೆ ಹೇಳಿದ್ದಾರೆ.

ಹಲವು ರೈತರು, ಕೃಷಿ ಉತ್ಪನ್ನ ಮಾರಾಟಗಾರರು ಈಗಾಗಲೆ ತಮ್ಮ ಪರಿಧಿಯಲ್ಲೇ ಸಾಗಾಟ, ವ್ಯಾಪಾರಕ್ಕೆ ವ್ಯವಸ್ಥೆ ಮಾಡಿಕೊಂಡಿದ್ದಾರೆ. ಆದರೆ ಅವರ ಪ್ರಯತ್ನಕ್ಕೆ ಅಧಿಕಾರಿಗಳು ಅಡ್ಡಿಯಾಗಿದ್ದಾರೆ.

ಉತ್ಪನ್ನ ಸಾಗಿಸುವಾಗ ತಡೆಯುವ, ದುಡ್ಡು ಪೀಕುವ ಕುರಿತು ಮಾಹಿತಿ ಇದೆ. ಕೃಷಿ ಉತ್ಪನ್ನ ಸರ್ಕಾರ ನಿರ್ಬಂಧ ಹೇರಬಾರದು. ಇದು ರೈತರ ಬದುಕಿನ, ಜನರ ಆಹಾರದ ಪ್ರಶ್ನೆ ಎಂದು ಅವರು ಕಿವಿಮಾತು ಹೇಳಿದ್ದಾರೆ.

ಹಾಪ್ ಕಾಮ್ಸ್, ಕೆಎಂಎಫ್ ಸೇರಿದಂತೆ ಸ್ವಯಂ ಸೇವಕರ ಗುಂಪುಗಳನ್ನು ಬಳಸಿಕೊಂಡು ರೈತರಿಂದ ಉತ್ಪನ್ನಗಳನ್ನು ಸರ್ಕಾರವೇ ಮುಂದೆ ನಿಂತು ಖರೀದಿಸಿ ಮಾರಾಟ ಮಾಡಲಿ ಎಂದು ಸಲಹೆ ನೀಡಿದ್ದಾರೆ.

ಕೊರೊನಾ ನಮ್ಮ ಮುಂದಿರುವ ಅಗೋಚರ ಯುದ್ಧ. ಯುದ್ಧದ ನಡುವೆಯೂ ರೈತರನ್ನು ರಕ್ಷಿಸಿ ಸಾರ್ವಜನಿಕರಿಗೆ ಅಗತ್ಯಗಳನ್ನು ಪೂರೈಸೋಣ ಎಂದು ಎಚ್ಡಿಕೆ ಟ್ಟೀಟಿಸಿದ್ದಾರೆ.

ಸುಳ್ಳು ಸುದ್ದಿಗಳ ವಿರುದ್ಧದ ಹೋರಾಟಕ್ಕೆ ದೇಣಿಗೆ ನೀಡಿ ಬೆಂಬಲಿಸಿ
Spread the love

Leave a Reply

Your email address will not be published.

Verified by MonsterInsights