ಕೊರೋನಾ : 7 ರಾಜ್ಯಗಳಲ್ಲಿ ಶತಕ ದಾಟಿದ ಸೋಂಕಿತರ ಸಂಖ್ಯೆ, 4 ರಾಜ್ಯಗಳು ಶತಕದ ಸಮೀಪ

ಕರ್ನಾಟಕವೂ ಸೇರಿದಂತೆ ದೇಶದ ಏಳು ರಾಜ್ಯಗಳಲ್ಲಿ ಕೊರೋನಾ ಬಾಧಿತರ ಸಂಖ್ಯೆ ಶತಕ ಬಾರಿಸಿ ಮುನ್ನಡಿದಿದೆ. ದಿಲ್ಲಿ ನಮಾಜ್‌ ನಂತರ ದೇಶಾದ್ಯಂತ ಕೊರೋನಾ ಕೇಸುಗಳ ಸಂಖ್ಯೆಯಲ್ಲಿ ಹೆಚ್ಚಳ ಕಂಡುಬಂದಿದ್ದು ನಾನಾ ರಾಜ್ಯಗಳಲ್ಲಿ ಮತ್ತಷ್ಟು ಹೊಸ ಪ್ರಕರಣಗಳು ಪತ್ತೆಯಾಗುತ್ತಿವೆ.

ಇದೇ ರೀತಿ ಸದ್ಯದ ಮಟ್ಟಿಗೆ ಏಳು ರಾಜ್ಯಗಳಲ್ಲಿ ನೂರಕ್ಕೂ ಹೆಚ್ಚಿನ ಸಂಖ್ಯೆಯಲ್ಲಿ ಕೊರೋನಾ ಸೋಂಕು ಪೀಡಿತರು ಇರುವುದು ದಾಖಲಾಗಿದೆ. ಕರ್ನಾಟಕ (105) ಹೊರತಾಗಿ ಮಹಾರಾಷ್ಟ್ರ, ಕೇರಳ, ತಮಿಳುನಾಡು, ದೆಹಲಿ, ರಾಜಾಸ್ಥಾನ ಮತ್ತು ಉತ್ತರ ಪ್ರದೇಶದಲ್ಲಿ ಕರೋನಾ ಬಾಧಿತರ ಸಂಖ್ಯೆ ನೂರು ದಾಟಿದೆ.

ಈ ರಾಜ್ಯಗಳ ಪೈಕಿ ಮಹಾರಾಷ್ಟ್ರ 325 ಪ್ರಕರಣಗಳೊಮದಿಗೆ ತ್ರಿಶತಕದ ಗಡಿ ದಾಟಿದೆ. 265 ಮಂದಿ ಸೋಂಕಿತರು ಪತ್ತೆಯಾಗಿದ್ದಾರೆ. ತಮಿಳುನಾಡಿನಲ್ಲಿ ಈ ಸಂಖ್ಯೆ 234ಕ್ಕೇರಿದೆ. ಉಳಿದಂತೆ ತೆಲಂಗಾಣ, ಗುಜರಾತ್, ಆಂಧ್ರ ಪ್ರದೇಶ ಮತ್ತು ಮಧ್ಯಪ್ರದೇಶದಲ್ಲಿ ಸಹ ಸೋಂಕಿತರ ಸಂಖ್ಯೆ ಶತಕದ ಸಮೀಪ ಬಂದಿದೆ.

ಇದೇ ವೇಳೆ ಕಳೆದ 24 ಗಂಟೆಯಲ್ಲಿ 388 ಜನರಲ್ಲಿ ಕೊರೊನಾ ಸೋಂಕು ಪತ್ತೆಯಾಗಿದೆ.‌ ದೇಶಾದ್ಯಂತ 38 ಮಂದಿ ಸಾವನ್ನಪ್ಪಿದ್ದಾರೆ ಎಂದು
ಕೇಂದ್ರ ಗೃಹ ಇಲಾಖೆ ಮಾಹಿತಿ ನೀಡಿದೆ. ದೇಶಾದ್ಯಂತ 21,486 ಪುನರ್ವಸತಿ ಕೇಂದ್ರಗಳನ್ನು ಆರಂಭಿಸಲಾಗಿದೆ. ಇದರಲ್ಲಿ 6.75 ಲಕ್ಷ ವಲಸಿಗರಿಗೆ ಆಶ್ರಯ ಒದಗಿಸಲಾಗಿದೆ. ದೇಶಾದ್ಯಂತ 25 ಲಕ್ಷ ಜನರಿಗೆ ಊಟೋಪಚಾರದ ವ್ಯವಸ್ಥೆ ಮಾಡಲಾಗಿದೆ.

ಪ್ರಧಾನಮಂತ್ರಿ ಗರೀಬ್ ಕಲ್ಯಾಣ ಯೋಜನೆಯಡಿ ಘೋಷಿಸಿರುವ ಕಾರ್ಯಕ್ರಮಗಳ ತ್ವರಿತ ಅನುಷ್ಠಾನಕ್ಕೆ ರಾಜ್ಯಗಳಿಗೆ ಸೂಚನೆ ನೀಡಲಾಗಿದೆ. ದೇಶಾದ್ಯಂತ 121 ಲ್ಯಾಬ್ ಗಳು ಕಾರ್ಯನಿರ್ವಹಿಸುತ್ತಿವೆ. ಖಾಸಗಿಯಾಗಿ 51 ಲ್ಯಾಬ್ ಗಳಿಗೆ ಅನುಮತಿ ನೀಡಲಾಗಿದೆ. 46981 ಜನರಿಗೆ ಸೋಂಕು ಪರೀಕ್ಷೆ ನಡೆಸಲಾಗಿದೆ ಎಂದು ಇಲಾಖೆ ಹೇಳಿದೆ,

ಸುಳ್ಳು ಸುದ್ದಿಗಳ ವಿರುದ್ಧದ ಹೋರಾಟಕ್ಕೆ ದೇಣಿಗೆ ನೀಡಿ ಬೆಂಬಲಿಸಿ
Spread the love

Leave a Reply

Your email address will not be published.

Verified by MonsterInsights