ಕೋವಿಡ್-19 : ಐಸಿಸಿ ವಿಶ್ವ ಟೆಸ್ಟ್ ಚಾಂಪಿಯನ್‌ಶಿಪ್ ಮುಂದೂಡಲು ಬಿಸಿಸಿಐ ಸೂಚನೆ

ಜಗತ್ತಿನಾದ್ಯಂತ ವೇಗವಾಗಿ ಹರಡುತ್ತಿರುವ ಕೊರೊನಾಕ್ಕೆ ಕ್ರೀಡಾ ಚಟುವಟಿಕೆಗಳು ಸ್ಥಗಿತಗೊಳ್ಳುತ್ತಿವೆ. ಕೋವಿಡ್ -19 ಜಾಗತಿಕ ಮಟ್ಟದಲ್ಲಿ ಹರಡುತ್ತಿರುವುದರಿಂದ ಐಸಿಸಿ ವಿಶ್ವ ಟೆಸ್ಟ್ ಚಾಂಪಿಯನ್‌ಶಿಪ್ ಅನ್ನು ಮುಂದೂಡಬೇಕೆಂದು ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿ (ಬಿಸಿಸಿಐ) ಸೂಚಿಸಿದೆ.

ವಿಶ್ವದ ನಂಬರ್ ಒನ್ ಟೆಸ್ಟ್ ತಂಡವು ಭಾರತ ಟೆಸ್ಟ್ ಚಾಂಪಿಯನ್‌ಶಿಪ್ ಅಂಕಪಟ್ಟಿಯಲ್ಲಿ ಮೊದಲ ಸ್ಥಾನದಲ್ಲಿದೆ ಮತ್ತು ಫೈನಲ್‌ಗೆ ಅರ್ಹತೆ ಪಡೆಯುವ ಪ್ರಬಲ ಸ್ಪರ್ಧೆ ಒಡ್ಡಲಿದೆ. ಆಸ್ಟ್ರೇಲಿಯಾ ಎರಡನೇ ಸ್ಥಾನದಲ್ಲಿದೆ. ಭಾರತ ಮತ್ತು ಆಸ್ಟ್ರೇಲಿಯಾ ಈ ವರ್ಷದ ಕೊನೆಯಲ್ಲಿ ನಾಲ್ಕು ಟೆಸ್ಟ್‌ ಪಂದ್ಯಗಳನ್ನು ಆಡಲಿದ್ದು, ಆಸ್ಟ್ರೇಲಿಯಾ ಈ ಐದು ಟೆಸ್ಟ್‌ಗಳ ಸರಣಿಯನ್ನು ನಡೆಸಲು ಯೋಜಿಸುತ್ತಿದೆ.

ಅಂತರರಾಷ್ಟ್ರೀಯ ಕ್ರಿಕೆಟ್ ಸಮಿತಿ (ಐಸಿಸಿ) ತನ್ನ ಮುಂದಿನ ಕಾರ್ಯಕ್ರಮಗಳಲ್ಲಿ ಬದಲಾವಣೆಗಳನ್ನು 2023 ರ ವೇಳೆಗೆ ಪರಿಗಣಿಸುತ್ತದೆ. ಈ ಬಗ್ಗೆ ಗುರುವಾರ ನಡೆದ ವಿಡಿಯೋ ಕಾನ್ಪ್ ರೆನ್ಸ್ ನಲ್ಲಿ ಈ ಬಗ್ಗೆ ಚರ್ಚೆ ನಡೆಸಲಾಯಿತು.

ಐಸಿಸಿಯ 12 ಪೂರ್ಣ ಸಮಯದ ಸದಸ್ಯರು ಮತ್ತು ಮೂರು ಅಂಗಸಂಸ್ಥೆ ಪ್ರತಿನಿಧಿ ರಾಷ್ಟ್ರಗಳ ಸಿಇಒಗಳು ಅಗತ್ಯವಿರುವಂತೆ 2023 ರ ವೇಳೆಗೆ ಭವಿಷ್ಯದ ಪ್ರವಾಸಗಳು ಮತ್ತು ಕಾರ್ಯಕ್ರಮಗಳಲ್ಲಿ (ಎಫ್‌ಟಿಪಿ) ಬದಲಾವಣೆಗಳನ್ನು ಮಾಡಲು ಒಪ್ಪಿದ್ದರು.

ಸುಳ್ಳು ಸುದ್ದಿಗಳ ವಿರುದ್ಧದ ಹೋರಾಟಕ್ಕೆ ದೇಣಿಗೆ ನೀಡಿ ಬೆಂಬಲಿಸಿ
Spread the love

Leave a Reply

Your email address will not be published.

Verified by MonsterInsights