ಕ್ಯಾನ್ಸರ್ ನಿಂದ ಬಳಲುತ್ತಿದ್ದ ಮಾಜಿ ಭೂಗತ ಪಾತಕಿ ಮುತ್ತಪ್ಪ ರೈ ಇನ್ನಿಲ್ಲ…!
ಕ್ಯಾನ್ಸರ್ ಗಾಗಿ ಚಿಕಿತ್ಸೆ ಪಡೆಯುತ್ತಿದ್ದ ಜಯ ಕರ್ನಾಟಕ ಸಂಘಟನೆಯ ಮುಖ್ಯಸ್ಥ ಹಾಗೂ ಮಾಜಿ ಭೂಗತ ಪಾತಕಿ ಮುತ್ತಪ್ಪ ರೈ ಅವರ ಆರೋಗ್ಯ ಸ್ಥಿತಿ ಬಿಗಡಾಯಿಸಿದ್ದರಿಂದ ಮಣಿಪಾಲ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಕಾರಿಯಾಗದೇ ಕೊನೆಯುಸಿರೆಳೆದಿದ್ದಾರೆ.
ಹೌದು… ಕೆಲವು ದಿನಗಳಿಂದ ಮುತ್ತಪ್ಪ ರೈ ಅವರ ಆರೋಗ್ಯದಲ್ಲಿ ಏರುಪೇರಾಗಿದ್ದು, ಅವರ ಸ್ಥಿತಿ ಸ್ಥಿತಿ ಚಿಂತಾಜನಕವಾಗಿತ್ತು. ಕ್ಯಾನ್ಸರ್ ನಿಂದ ಬಳಲುತ್ತಿದ್ದ ಈ ಮಾಜಿ ಭೂಗತ ಪಾತಕಿ ಮುತ್ತಪ್ಪ ರೈ ಆರೋಗ್ಯ ಸ್ಥಿತಿ ಬಿಗಡಾಯಿಸಿದ್ದರಿಂದ ಕಳೆದ ಏ.28ರಿಂದ ಬೆಂಗಳೂರಿನ ಮಣಿಪಾಲ್ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಅವರ ಪರಿಸ್ಥಿತಿ ಮತ್ತಷ್ಟು ಬಿಗಾಡಿಯಿಸಿದ ಪರಿಣಾಮ ಅವರು ಕಳೆದ ಮೂರು ದಿನಗಳಿಂದ ಕೋಮಾದಲ್ಲಿ ಇದ್ದಾರೆ ಎನ್ನುತ್ತಿವೆ ಆಸ್ಪತ್ರೆಯ ಮೂಲಗಳು ತಿಳಿಸಿದ್ದವು.
ಕಳೆದ ಮೂರು ದಿನಗಳಿಂದಲೂ ಅವರು ಕೋಮಾ ಸ್ಥಿತಿಯಲ್ಲೇ ಇದ್ದ ಕಾರಣ ಅವರಿಗೆ ನೀರು, ಆಹಾರವನ್ನೂ ಸಹಜವಾಗಿ ನೀಡಲು ಸಾಧ್ಯವಾಗುತ್ತಿರಲಿಲ್ಲ. ಚಿಕಿತ್ಸೆ ಫಲಕಾರಿಯಾಗದೇ ಇಂದು ನಿಧನರಾಗಿದ್ದಾರೆ.
ಹಿಂದೊಮ್ಮೆ ಭೂಗತ ಜಗತ್ತಿನ ಜೊತೆ ನಂಟನ್ನು ಹೊಂದಿದ್ದ ಮುತ್ತಪ್ಪ ರೈ, ಕೆಲವು ವರ್ಷಗಳ ಹಿಂದೆಯೇ ಅದನ್ನೆಲ್ಲಾ ಬಿಟ್ಟು ಬಂದು ಸಾಮಾನ್ಯ ಜೀವನವನ್ನು ನಡೆಸುತ್ತಿದ್ದರು. ಅಲ್ಲದೆ ಜಯಕರ್ನಾಟಕ ಸಂಘಟನೆಯನ್ನು ಕೂಡಾ ಹುಟ್ಟು ಹಾಕಿ ಕನ್ನಡಕ್ಕಾಗಿ ಹೋರಾಟವನ್ನು ಅವರು ನಡೆಸುವ ಜೊತೆಗೆ ಅನೇಕ ಸಾಮಾಜಿಕ ಕಾರ್ಯಗಳ ಮೂಲಕ ಕೂಡಾ ಅವರು ತಮ್ಮನ್ನು ತಾವು ಗುರುತಿಸಿಕೊಂಡಿದ್ದರು.

