ಕ್ವಾರಂಟೈನ್‌ನಲ್ಲಿದ್ದ ಯುವಕ ನೇಣು ಬಿಗಿದುಕೊಂಡು ಆತ್ಮಹತ್ಯೆ

ಮುಂಬೈನಿಂದ ಬಂದು ಕ್ವಾರಂಟೈನ್‍ನಲ್ಲಿದ್ದ ಯುವಕನೋರ್ವ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿರುವ ಘಟನೆ ಜಿಲ್ಲೆಯ ಔರಾದ್ ತಾಲೂಕಿನ ವನಮಾರಪ್ಪಳ್ಳಿ ಗ್ರಾಮದಲ್ಲಿ ಮಂಗಳವಾರ ಬೆಳಗ್ಗೆ ನಡೆದಿದೆ.

ಆತ  ಮುಂಬೈನಿಂದ‌ ತನ್ನ ಪತ್ನಿಯೊಂದಿಗೆ ಜಿಲ್ಲೆಗೆ ವಾಪಸ್ಸಾಗಿದ್ದು, ಇಬ್ಬರನ್ನೂ ಔರಾದ್ ತಾಲೂಕಿನ ವನಮಾರಪ್ಪಳ್ಳಿ ಗ್ರಾಮದ ಕಿತ್ತೂರ ರಾಣಿ ಚೆನ್ನಮ್ಮ ವಸತಿ ನಿಲಯದಲ್ಲಿ ಕ್ವಾರಂಟೈನ್ ಮಾಡಲಾಗಿತ್ತು.

ಮೃತ ಯುವಕ ಔರಾದ ಮೂಲದ ಯುವತಿಯನ್ನು ಪ್ರೀತಿಸಿ ಮದುವೆಯಾಗಿದ್ದ, ಆತ ಔರದ್‌ ಬಳಿಯ ನಾರಾಯಣಪುರ ಗ್ರಾಮದವರು ಎನ್ನಲಾಗಿದೆ.

ಇಂದು ಬೆಳಗಿನ ಜಾವ ಆತ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾನೆ.

ಆತ್ಮಹತ್ಯೆಗೆ ನಿಖರವಾದ ಕಾರಣ ತಿಳಿದು ಬಂದಿಲ್ಲ. ಮಾಹಿತಿ ತಿಳಿಯುತ್ತಿದ್ದಂತೆ ಸ್ಥಳಕ್ಕೆ ಔರಾದ ಪೊಲೀಸರು ಭೇಟಿ ನೀಡಿದ್ದು, ತನಿಖೆ ಕೈಗೊಂಡಿದ್ದಾರೆ.

ಸುಳ್ಳು ಸುದ್ದಿಗಳ ವಿರುದ್ಧದ ಹೋರಾಟಕ್ಕೆ ದೇಣಿಗೆ ನೀಡಿ ಬೆಂಬಲಿಸಿ
Spread the love

Leave a Reply

Your email address will not be published.

Verified by MonsterInsights