ಗಂಡ ಹೆಂಡತಿ ಖ್ಯಾತಿಯ ನಟಿ ಸಂಜನಾ ವಿರುದ್ಧ ಬಾಲಿವುಡ್ ನಿರ್ಮಾಪಕಿ ದೂರು..!

ಹಲವು ವಿವಾದಗಳಿಂದ ಸದ್ದು ಮಾಡಿರುವ ಗಂಡ ಹೆಂಡತಿ ಖ್ಯಾತಿಯ ನಟಿ ಸಂಜನಾ ವಿರುದ್ಧ ಈಗ ಹೊಸ ಆರೋಪ ಕೇಳಿ ಬಂದಿದೆ. ಬಾರ್ ವೊಂದರಲ್ಲಿ ಕುಡಿದು ಅಸಭ್ಯವಾಗಿ ವರ್ತಿಸಿದ ಕಾರಣಕ್ಕೆ ಸಂಜನಾ ವಿರುದ್ಧ ಬಾಲಿವುಡ್ ನಿರ್ಮಾಪಕಿ ಪೋಲೀಸ್ ಠಾಣೆಯಲ್ಲಿ ದೂರು ನೀಡಿದ್ದಾರೆ.

ಹೌದು… ಕುಡಿದ ಮತ್ತಿನಲ್ಲಿ ಸ್ಯಾಂಡಲ್ ವುಡ್ ನಟಿ ಸಂಜನಾ ಗಲ್ರಾನಿ ಗಲಾಟೆ ಮಾಡಿಕೊಂಡ್ರಾ ಎಂಬ ಪ್ರಶ್ನೆಯೊಂದು ಎದ್ದಿದೆ. ನಗರದ ಸ್ಟಾರ್ ಹೋಟೆಲ್‍ನಲ್ಲಿ ನಟಿ ಸಂಜನಾ ಗಲ್ರಾನಿ ಹಾಗೂ ಬಾಲಿವುಡ್ ನಿರ್ಮಾಪಕಿ ವಂದನಾ ಜೈನ್ ಮಧ್ಯೆ ಜಗಳವಾಗಿದ್ದು, ಗಲಾಟೆ ತಾರಕಕ್ಕೇರಿ ಸಂಜನಾ ನಿರ್ಮಾಪಕಿ ಮೇಲೆ ಗ್ಲಾಸ್ ನಿಂದ ಹೊಡೆದಿದ್ದಾರೆ. ಈ ಸಂಬಂಧ ನಿರ್ಮಾಪಕಿ ಪೊಲೀಸ್ ಠಾಣೆಗೆ ತೆರಳಿ ದೂರು ದಾಖಲಿಸಿದ್ದು, ಬಳಿಕ ರಾಜಿ ಪಂಚಾಯ್ತಿ ಮಾಡಿಕೊಂಡು ಕೇಸನ್ನು ಹಿಂಪಡೆದುಕೊಂಡಿದ್ದಾರೆ.

ಕ್ರಿಸ್ಮಸ್ ಈವ್ ಸಂದರ್ಭದಲ್ಲಿ ಅಂದರೆ ಡಿಸೆಂಬರ್ 24ರ ರಾತ್ರಿ ನಟಿ ಸಂಜನಾ ಕೋಝಿ ಬಾರ್ ಗೆ ಭೇಟಿ ನೀಡಿದ್ದರು. ಬಾಲಿವುಡ್ ನಿರ್ಮಾಪಕಿಯಾದ ವಂದನಾ ಜೈನ್ ಕೂಡ ಅಲ್ಲೆ ಪಾರ್ಟಿ ಮಾಡುತ್ತಿದ್ದರು. ಈ ವೇಳೆ ಇಬ್ಬರ ನಡುವೆ ಕಿರಿಕ್ ಆಗಿದೆ. ಮಾತಿಗೆ ಮಾತು ಬೆಳೆದು ಇಬ್ಬರ ಗಲಾಟೆ ಕೈ ಕೈ ಮಿಲಾಯಿಸುವ ಹಂತ ತಲುಪಿತು. ನಂತರ ವಿಸ್ಕಿ ಬಾಟೆಲ್ ನಲ್ಲಿ ವಂದನಾಗೆ ನಟಿ ಸಂಜನಾ ಸರಿಯಾಗಿ ಹೊಡೆದಿದ್ದಾರೆ ಎಂದು ಹೇಳಲಾಗುತ್ತಿದೆ.

ಘಟನೆಯಿಂದ ಬೇಸತ್ತ ವಂದನಾ ಜೈನ್ ಕಬನ್ ಪಾರ್ಕ್ ಪೊಲೀಸ್ ಸ್ಟೇಷನ್ ಮೆಟ್ಟಿಲೇರಿದ್ದಾರೆ. ಸಂಜನಾ ಮತ್ತು ವಂದನಾ ಜೈನ್ ನಡುವೆ ಕಿತ್ತಾಟ ನಡೆದಿರುವುದು ನಿಜ, ಪಾರ್ಟಿ ನಡೆಯುವ ಸಂದರ್ಭದಲ್ಲಿ ಗಲಾಟೆಯಾಗಿದೆ ಎಂದು ಡಿಸಿಪಿ ಚೇತನ್ ಧೃಡಪಡಿಸಿದ್ದಾರೆ. ಜೊತೆಗೆ ಪ್ರಕರಣದ ಕುರಿತು ವಿಚಾರಣೆಗೆ ಹಾಜರಾಗುವಂತೆ ವಂದನಾ ಜೈನ್ ಮತ್ತು ಸಂಜನಾಗೆ ಸೂಚಿಸಿದ್ದಾರೆ.

ಸುಳ್ಳು ಸುದ್ದಿಗಳ ವಿರುದ್ಧದ ಹೋರಾಟಕ್ಕೆ ದೇಣಿಗೆ ನೀಡಿ ಬೆಂಬಲಿಸಿ
Spread the love

Leave a Reply

Your email address will not be published.

Verified by MonsterInsights