ಗಣೇಶ ವಿಸರ್ಜನೆ ವೇಳೆ ಡಿಜೆ ಹಾಡಿಗೆ ಕುಣಿದು ಕುಪ್ಪಳಿಸಿದ ಪಿಎಸ್ ಐ, ಸಿಬ್ಬಂದಿ : ವಿಡಿಯೋ ವೈರಲ್

ಗಣೇಶನ ವಿಸರ್ಜನೆ ವೇಳೆ ಡಿಜೆಗೆ ಹಾಡಿಗೆ ಪಿಎಸ್ ಐ ಮತ್ತು ಸಿಬ್ಬಂದಿಗಳು ಕುಣಿದು ಕುಪ್ಪಳಿಸಿದ ಘಟನೆ ಹಾವೇರಿ ಜಿಲ್ಲೆ ಶಿಗ್ಗಾಂವಿ ತಾಲೂಕಿನ ಬಂಕಾಪುರ ಪಟ್ಟಣದಲ್ಲಿ ನಡೆದಿದೆ.

ಹಿಂದೂ ಮಹಾ ಗಣಪತಿ ವಿಸರ್ಜನೆ ವೇಳೆ ಡ್ಯಾನ್ಸ್ ಮಗಾ ಡ್ಯಾನ್ಸ್ ಹಾಡಿಗೆ ಪಿಎಸ್ ಐ ಸಂತೋಷ ಪಾಟೀಲ ಮತ್ತು ಸಿಬ್ಬಂದಿಯಿಂದ ಸಖತ್ ಸ್ಟೇಪ್ ವಿಡಿಯೋ ಸದ್ಯ ಭಾರೀ ವೈರಲ್ ಆಗಿದೆ. ಗೃಹ ಸಚಿವರ ಕ್ಷೇತ್ರದಲ್ಲಿ  ಪೋಲಿಸರ ಟಪಾಂಗುಚ್ಚಿ ಎಂಜಾಯ್ ಮಾಡಿದ್ದಾರೆ ಸ್ಥಳೀಯರು. ಪಟ್ಟಣದ ನೆಹರು ಗಾರ್ಡನ್ ನಲ್ಲಿ ಪ್ರತಿಷ್ಟಾಪನೆ ಮಾಡಲಾಗಿದ್ದ ಗಣಪ ವಿಸರ್ಜನೆ ಕಾರ್ಯಕ್ರಮದಲ್ಲಿ ಪಿಎಸ್ ಐ ಸಖತ್ ಎಂಜಾಯ್ ಮಾಡಿದ್ದಾರೆ.

ಸಾಮಾಜಿಕ ಜಾಲತಾಣದಲ್ಲಿ ವಿಡಿಯೋಸ್ ಸಖತ್ ವೈರಲ್ ಆಗಿವೆ.

ಸುಳ್ಳು ಸುದ್ದಿಗಳ ವಿರುದ್ಧದ ಹೋರಾಟಕ್ಕೆ ದೇಣಿಗೆ ನೀಡಿ ಬೆಂಬಲಿಸಿ
Spread the love

Leave a Reply

Your email address will not be published.

Verified by MonsterInsights