ಗಾಯಕ ಎಸ್‌ಪಿ ಬಾಲಸುಬ್ರಮಣ್ಯಂ ಆರೋಗ್ಯ ಸ್ಥಿತಿ ಗಂಭೀರ: ಐಸಿಯುನಲ್ಲಿ ಚಿಕಿತ್ಸೆ!

ಕೊರೊನಾ ಸೋಂಕಿಗೆ ಒಳಗಾಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಖ್ಯಾತ ಗಾಯಕ ಎಸ್ ಪಿ ಬಾಲಸುಬ್ರಹ್ಮಣ್ಯಂ ಅವರ ಆರೋಗ್ಯ ಸ್ಥಿತಿ ಗಂಭೀರವಾಗಿದ್ದು, ಅವರಿಗೆ ಇಂದು ವೆಂಟಿಲೇಟರ್ ಅಳವಡಿಸಿ ಚಿಕಿತ್ಸೆ ನೀಡಲಾಗುತ್ತಿದೆ.

74 ವರ್ಷದ ಎಸ್‍ಪಿಬಿ ಅವರಿಗೆ ಕೊರೊನಾ ಸೋಂಕು ತಗುಲಿದ್ದು, ಆಗಸ್ಟ್ 5 ರಿಂದ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಆದರೆ ಕಳೆದ ರಾತ್ರಿ ಅವರು ಆರೋಗ್ಯ ಗಂಭೀರವಾಗಿತ್ತು. ಈ ಹಿನ್ನೆಲೆಯಲ್ಲಿ ಅವರನ್ನು ಐಸಿಯುಗೆ ಸ್ಥಳಾಂತರಿಸಿ ವೆಂಟಿಲೇಟರ್ ಅಳವಡಿಸಲಾಗಿದೆ.

ಕೊರೊನಾ ಸೋಂಕಿನಿಂದ ಆಸ್ಪತ್ರೆಗೆ ದಾಳಲಾಗಿದ್ದ ಎಸ್‌ಪಿಬಿ ಅವರು,  ನನ್ನ ಕುಟುಂಬದ ಹಿತದೃಷ್ಟಿಯಿಂದ ನಾನು ಸ್ವಯಂ ಪ್ರೇರಿತನಾಗಿ ಆಗಿ ಆಸ್ಪತ್ರೆಗೆ ದಾಖಲಾಗಿದ್ದು ಚಿಕಿತ್ಸೆಯೊಂದಿಗೆ ವಿಶ್ರಾಂತಿ ಪಡೆಯುತ್ತಿದ್ದೇನೆ ಎಂದು ವಿಡಿಯೋ ಮಾಡಿ ಫೇಸ್‌ಬುಕ್‌ನಲ್ಲಿ ಹಂಚಿಕೊಂಡಿದ್ದರು.

Posted by S. P. Balasubrahmanyam on Tuesday, August 4, 2020

ಸುಳ್ಳು ಸುದ್ದಿಗಳ ವಿರುದ್ಧದ ಹೋರಾಟಕ್ಕೆ ದೇಣಿಗೆ ನೀಡಿ ಬೆಂಬಲಿಸಿ
Spread the love

Leave a Reply

Your email address will not be published.

Verified by MonsterInsights