ಚಿರಂಜೀವಿ ಸರ್ಜಾ ನಿಧನ; ಸರ್ಜಾ ಬದುಕಿನ ಅವಲೋಕನ!

ನಟ ಚಿರಂಜೀವಿ ಸರ್ಜಾ ಅವರು ಹೃದಯಾಘಾತದಿಂದ ಮೃತಪಟ್ಟಿದ್ದಾರೆ.

ನಿನ್ನೆಯಿಂದ ಎದೆನೋವಿಗೆ ಒಳಗಾಗಿದ್ದ ಚಿರಂಜೀವಿ ಸರ್ಜಾ, ಇಂದು ಬೆಳಗ್ಗೆ ಬೆಂಗಳೂರಿನ  ಸಾಗರ್ ಆಸ್ಪತ್ರೆಯಲ್ಲಿ ದಾಖಲಾಗಿದ್ದರು. ಚಿಕಿತ್ಸೆ ಪಡೆಯುತ್ತಿದ್ದ 39 ವರ್ಷದ ಚಿರಂಚೀವಿ ಸರ್ಜಾ ಅವರು ಚಿಕಿತ್ಸೆ ಫಲಕಾರಿಯಾಗದೇ ಮೃತಪಟ್ಟಿದ್ದಾರೆ.

1980 ರಂದು ಆಕ್ಟೋಬರ್​ 17ರಂದು ಬೆಂಗಳೂರಿನಲ್ಲಿ ಜನಿಸಿದ್ದ ಅವರು, ಹಿರಿಯ ನಟ ಶಕ್ತಿ ಪ್ರಸಾದ್ ಅವರ​ ಮೊಮ್ಮಗ ಮತ್ತು ನಟ ಅರ್ಜುನ್​ ಸರ್ಜಾ ಅಳಿಯ. ಬಾಲ್ಡವಿನ್​ ಬಾಲಕರ ಹೈ ಸ್ಕೂಲ್​ನಲ್ಲಿ ವಿದ್ಯಾಭ್ಯಾಸ ಮುಗಿಸಿದ್ದರು. ಬಳಿಕ  ವಿಜಯ ಕಾಲೇಜಿನಲ್ಲಿ ಪದವಿ ಪಡೆದಿದ್ದರು. ಅಲ್ಲದೇ 4 ವರ್ಷ ಅರ್ಜುನ್​ ಸರ್ಜಾ ಜೊತೆ ಸಹ ನಿರ್ದೇಶಕನಾಗಿ ಕೆಲಸ ನಿರ್ವಹಿಸಿದ್ದರು.

ವಾಯುಪುತ್ರ ಚಿತ್ರದ ಮೂಲಕ ಕನ್ನಡ ಚಿತ್ರರಂಗಕ್ಕೆ ಪಾದಾರ್ಪಣೆ ಮಾಡಿದ್ದ ಚಿರಂಜೀವಿ ಸರ್ಜಾ ಅವರು 22ಕ್ಕೂ ಹೆಚ್ಚು ಚಿತ್ರಗಳಲ್ಲಿ ನಟಿಸಿದ್ದಾರೆ.

Script was the only reason for me to accept Samhaara'- Cinema express

ಚಿರಂಜೀವಿ ಸರ್ಜಾ ಅಭಿನಯದ ಚಿತ್ರಗಳು
ವಾಯುಪುತ್ರ, ಗಂಡೆದೆ, ಚಿರು, ದಂಡಂ ದಶಗುಣಂ, ಕೆಂಪೇಗೌಡ, ವರದನಾಯಕ, ವಿಶಲ್, ಚಂದ್ರಲೇಖ, ಅಜಿತ್​, ರುದ್ರತಾಂಡವ, ಆಟಗಾರ, ರಾಮ್​ಲೀಲಾ, ಆಕೆ, ಭರ್ಜರಿ, ಪ್ರೇಮ ಬರಹ, ಸಂಹಾರ, ಅಮ್ಮ ಐ ಲವ್​ ಯೂ, ಸಿಂಗ, ಖಾಕಿ, ಆದ್ಯಾ, ಶಿವಾರ್ಜುನ, ರಾಜಮಾರ್ತಾಂಡ, ಚಿತ್ರಗಳಲ್ಲಿ ನಟಿಸಿದ್ದು, ಏಪ್ರಿಲ್​, ರಣಂ, ಕ್ಷತ್ರಿಯಾ ಸಿನಿಮಾಗಳು ಶೂಟಿಂಗ್​ ಹಂತದಲ್ಲಿವೆ.

2018ರಲ್ಲಿ ನಟಿ ಮೇಘನಾ ರಾಜ್ ಜೊತೆ ಚಿರಂಜೀವಿ ಸರ್ಜಾ ಅವರು ದಾಂಪತ್ಯ ಜೀವನಕ್ಕೆ ಕಾಲಿಟ್ಟಿದ್ದರು.

ಇದನ್ನೂ ಓದಿ: ಸ್ಯಾಂಡಲ್‌ವುಡ್‌ ಸ್ಟಾರ್ ನಟ ಚಿರಂಜೀವಿ ಸರ್ಜಾ ವಿಧಿವಶ!

ಸುಳ್ಳು ಸುದ್ದಿಗಳ ವಿರುದ್ಧದ ಹೋರಾಟಕ್ಕೆ ದೇಣಿಗೆ ನೀಡಿ ಬೆಂಬಲಿಸಿ
Spread the love

Leave a Reply

Your email address will not be published.

Verified by MonsterInsights